ಕಸ: “ಕ್ಲೀನಪ್‌ಮಾರ್ಷಲ್‌’ ಜತೆಗೂಡಿದ “ಹೀ ಮ್ಯಾನ್‌’!

Team Udayavani, Jan 24, 2017, 12:03 PM IST

garbage.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತ್ಯಾಜ್ಯ ಸಮಸ್ಯೆ ನಿವಾರಣೆಗೆ ನಿವೃತ್ತ ಯೋಧರನ್ನು “ಕ್ಲೀನಪ್‌ ಮಾರ್ಷಲ್‌’ಗಳನ್ನಾಗಿ ಬಳಸಿಕೊಳ್ಳಲು ಕ್ರಮ ಕೈಗೊಂಡಿರುವ ಬಿಬಿಎಂಪಿ, ಮಾರ್ಷಲ್‌ಗ‌ಳ ನೆರವಿಗೆ “ಹೀ ಮ್ಯಾನ್‌’ ಕರೆ ತರಲು ನಿರ್ಧರಿಸಿದೆ.

ಬಿಬಿಎಂಪಿ ಕಸ ಸಮಸ್ಯೆ ನಿವಾರಣೆಗೆ “ಹೀ ಮ್ಯಾನ್‌’ ಬಳಕೆ ಮಾಡಲು ನಿರ್ಧರಿಸಿದ್ದು ನಿಜವಾದರೂ ಅದು ಹಾಲಿವುಡ್‌ ಸಿನಿಮಾ ಪಾತ್ರಧಾರಿ ಹೀ ಮ್ಯಾನ್‌ ಅಲ್ಲ. ಬದಲಿಗೆ ಭಾರೀ ಪ್ರಮಾಣದ ತ್ಯಾಜ್ಯ ರಾಶಿಯಾಗಿರುವಂತಹ ಸ್ಥಳಗಳಲ್ಲಿ ಜೆಸಿಬಿ ಮಾದರಿಯ ಹೀ ಮ್ಯಾನ್‌ ಎಂಬ ಯಂತ್ರ, ಕಸವನ್ನು ಒಂದೆಡೆಗೆ ಶೇಖರಿಸಿ ಆಟೋ ಟಿಪ್ಪರ್‌ಗಳಿಗೆ ತುಂಬುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಂಗಡಣೆ ಮಾಡದವರಿಗೆ ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸಲು ನಿವೃತ್ತ ಯೋಧರನ್ನು “ಕ್ಲೀನಪ್‌ ಮಾರ್ಷಲ್‌’ ಹುದ್ದೆಗೆ ನೇಮಿಸಿಕೊಳ್ಳುತ್ತಿರುವ ಬಿಬಿಎಂಪಿಯು, ತ್ಯಾಜ್ಯ ಸಮಸ್ಯೆ ನಿವಾರಣೆಗೆ ಮತ್ತೂಂದು ಪ್ರಯತ್ನವಾಗಿ ಹೀ ಮ್ಯಾನ್‌ ವಾಹನಗಳ ಬಳಕೆಗೆ ಮುಂದಾಗಿರುವುದು ಖಚಿತವಾಗಿದೆ.

594 ನಿವೃತ್ತ ಯೋಧರಿಂದ ಕಸ ನಿರ್ವಹಣೆ ಕಾರ್ಯ: ಕಸ ವಿಂಗಡಣೆ ನಿಯಮ ಉಲ್ಲಂ ಸಿದವರಿಗೆ ಕೆಎಂಸಿ- 1976ರ ಸೆಕ್ಷನ್‌ 431(ಆ) ಪ್ರಕಾರ ಕನಿಷ್ಠ 100 ರೂ.ಗಳಿಂದ ಗರಿಷ್ಠ 5000 ರೂ.ವರೆಗೆ ಭಾರಿ ದಂಡ ವಿಧಿಸಲು ಅವಕಾಶವಿದೆ. ಆದರೆ, ನಿಯಮ ಉಲ್ಲಂ ಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಅಗತ್ಯ ಅಧಿಕಾರವಿಲ್ಲ. ಹೀಗಾಗಿ ದಂಡ ವಿಧಿಸುವ ಸಲುವಾಗಿಯೇ ಕ್ಲೀನಪ್‌ ಮಾರ್ಷಲ್‌ಗ‌ಳ ನೇಮಕ ಪ್ರಕ್ರಿಯೆಗೆ ಬಿಬಿಎಂಪಿ ಚಾಲನೆ ನೀಡಿದ್ದು, ಬಿಬಿಎಂಪಿ 2017ರ ಫೆಬ್ರವರಿಗೆ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ. 

ಒಂದು ತಿಂಗಳ ತರಬೇತಿ ನೀಡಿದ ಬಳಿಕ ಮಾರ್ಷಲ್‌ಗ‌ಳು ತಪ್ಪು ಮಾಡಿದವರಿಗೆ ದಂಡ ವಿಧಿಸಲಿದ್ದಾರೆ. ಅವರಿಗೆ ಇದಕ್ಕಾಗಿಯೇ ಸಂಚಾರಿ ಪೊಲೀಸರ ಬಳಿಯಿರುವ ಬ್ಲ್ಯಾಕ್‌ ಬೆರ್ರಿ ರೀತಿಯ ಯಂತ್ರವನ್ನು ನೀಡಲಾಗುತ್ತದೆ. ಮೊದಲ ಬಾರಿಯ ನಿಯಮ ಉಲ್ಲಂಘನೆಗೆ ಎಚ್ಚರಿಕೆ ನೀಡುವ ಮಾರ್ಷಲ್‌ಗ‌ಳು, ತಪ್ಪು ಪುನರಾವರ್ತನೆಯಾದರೆ ದಂಡ ವಿಧಿಸಲಿದ್ದಾರೆ.

ಮಾರ್ಷಲ್‌ ಜತೆಗೂಡಿದ “ಹೀಮ್ಯಾನ್‌’: ಕ್ಲೀನಪ್‌ ಮಾರ್ಷಲ್‌ಗ‌ಳ ಜತೆಗೆ ಹೀಮ್ಯಾನ್‌ ವಾಹನಗಳು ಹೊಸದಾಗಿ ಸೇರ್ಪಡೆಯಾಗಲಿವೆ. ಕಸ ಹೆಚ್ಚಾಗಿ ಶೇಖರಣೆಯಾಗುವ ಕಡೆಗಳಲ್ಲಿ ಸೂಕ್ತವಾಗಿ ಕಸ ವಿಲೇವಾರಿ ಮಾಡಲು ಹೀ ಮ್ಯಾನ್‌ ಯಂತ್ರವನ್ನು ಬಳಸಲಾಗುತ್ತದೆ. ಈಗಾಗಲೇ ಸಂಕ್ರಾತಿ ಹಬ್ಬದ ಸಂದರ್ಭದಲ್ಲಿ ಕೆ.ಆರ್‌.ಮಾರುಕಟ್ಟೆಯಲ್ಲಿ ಶೇಖರಣೆಯಾಗಿದ್ದ ನೂರಾರು ಟನ್‌ ಕಸವನ್ನು ಹೀ ಮ್ಯಾನ್‌ ಯಂತ್ರದ ಮೂಲಕ ಒಂದೇ ದಿನದಲ್ಲಿ ವಿಲೇವಾರಿ ಮಾಡಲಾಗಿದೆ. ಹೀಗಾಗಿ ಮುಂದೆ ಗುತ್ತಿಗೆ ಆಧಾರದ ಮೇಲೆ ವಾಹನ ಪಡೆದು ಕೆಲಸ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

ತ್ಯಾಜ್ಯ ನಿಯಮ ಉಲ್ಲಂ ಸಿದವರಿಗೆ ದಂಡ ವಿಧಿಸಲು “ಕ್ಲೀನಪ್‌ ಮಾರ್ಷಲ್‌’ಗಳನ್ನು ಶೀಘ್ರದಲ್ಲೇ ನೇಮಕ ಮಾಡಲಾಗುತ್ತಿದೆ. ಜತೆಗೆ ಹೆಚ್ಚಾಗಿ ಶೇಖರಣೆಯಾಗುವ ಕಡೆಗಳಲ್ಲಿ ತ್ಯಾಜ್ಯವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲು ಹೀ ಮ್ಯಾನ್‌ ವಾಹನ ಬಳಸಲಾಗುವುದು. ಸಂಕ್ರಾಂತಿ ಸಂದರ್ಭದಲ್ಲಿ ಮೊದಲ ಬಾರಿಗೆ ಬಳಸಿದ್ದ ವಾಹನ ಉತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಗುತ್ತಿಗೆ ಆಧಾರದ ಮೇಲೆ ಮತ್ತಷ್ಟು ವಾಹನ ಪಡೆಯಲಾಗುವುದು.
-ಜಿ.ಪದ್ಮಾವತಿ, ಮೇಯರ್‌

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.