ಕಂಬಳಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರಲೂ ಸಿದ್ಧ; ಸಿಎಂ ಸಿದ್ದರಾಮಯ್ಯ
Team Udayavani, Jan 24, 2017, 1:46 PM IST
ಮೈಸೂರು:ಕರಾವಳಿಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲೂ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.
ಮೈಸೂರಿಗೆ ಆಗಮಿಸಿದ್ದ ಸಿಎಂ ಅವರಲ್ಲಿ ಕಂಬಳದ ಮೇಲಿನ ನಿಷೇಧ ತೆರವಿಗಾಗಿ ಒತ್ತಡ ಹೆಚ್ಚುತ್ತಿರುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕಂಬಳ ವಿಶೇಷವಾಗಿ ಕರಾವಳಿಯಲ್ಲಿ ನಡೆಯುವ ಕ್ರೀಡೆಯಾಗಿದೆ. ನಮ್ಮ ಸರ್ಕಾರ ಕಂಬಳದ ಪರವಾಗಿದೆ. ಅಗತ್ಯಬಿದ್ದರೆ ಅಧ್ಯಾದೇಶ ಹೊರಡಿಸಲು ನಾವು ಸಿದ್ದರಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಅಲ್ಲದೇ ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಯೇ ಬೇರೆ, ಕಂಬಳವೇ ಬೇರೆ, ಅದನ್ನು, ಇದನ್ನು ಹೋಲಿಕೆ ಮಾಡಬೇಡಿ ಎಂದು ಸಿಎಂ ಹೇಳಿದರು. ಕಂಬಳದ ನಿಷೇಧ ವಿವಾದ ಸದ್ಯ ಹೈಕೋರ್ಟ್ ನಲ್ಲಿದೆ. ಹಾಗಾಗಿ ಹೈಕೋರ್ಟ್ ತೀರ್ಪು ಬಂದ ನಂತರ ಸುಗ್ರೀವಾಜ್ಞೆ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.