ರೈಲ್ವೆ ಕೋಚ್‌ ಕಾರ್ಖಾನೆಗೆ ಎರಡೂವರೆ ತಿಂಗಳಲ್ಲಿ ಭೂಸ್ವಾಧೀನ


Team Udayavani, Jan 25, 2017, 11:22 AM IST

ramesh-kumar.jpg

ಬೆಂಗಳೂರು: ಕೋಲಾರದ ಶ್ರೀನಿವಾಸಪುರ  ತಾಲೂಕಿನಲ್ಲಿ ರೈಲ್ವೆ ಕೋಚ್‌ ಕಾರ್ಖಾನೆ ನಿರ್ಮಾಣ ಕುರಿತು 2013-14ನೇ ರೈಲ್ವೆ ಬಜೆಟ್‌ನಲ್ಲಿ ಮಾಡಿದ ಘೋಷಣೆ ಕಾರ್ಯರೂಪಕ್ಕೆ ಬರುವ ಕಾಲ ಸನ್ನಿಹಿತವಾಗಿದೆ. ಕಾರ್ಖಾನೆ ನಿರ್ಮಾಣಕ್ಕೆ 1128 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಎರಡೂವರೆ ತಿಂಗಳಲ್ಲಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. ಸಭೆಯ ಬಳಿಕ ಮಾತನಾಡಿದ ಸಚಿವ ರಮೇಶ್‌ಕುಮಾರ್‌, ರೈಲ್ವೆ ಕೋಚ್‌ ಕಾರ್ಖಾನೆ ನಿರ್ಮಾಣಕ್ಕೆ 1128 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದ್ದು, ಆ ಪೈಕಿ 560 ಎಕರೆ ಖಾಸಗಿ ಭೂಮಿ­ಯಿದೆ.

ಎರಡೂವರೆ ತಿಂಗಳಲ್ಲಿ ಭೂಸ್ವಾ­ಧೀನ ಪ್ರಕ್ರಿಯೆ ಮುಗಿಸಿ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು. ನಂತರದ 2 ತಿಂಗಳಲ್ಲಿ ಕಾರ್ಖಾನೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್‌ ಕಾರ್ಖಾನೆ ನಿರ್ಮಾಣ ಕುರಿತಂತೆ 2013-14ನೇ ಸಾಲಿನ ರೈಲ್ವೆ ಬಜೆಟ್‌ನಲ್ಲಿ ಘೋಷಿಸಿ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಇದಕ್ಕೆ ಬೇಕಾದ ಭೂಮಿ ಕುರಿತಂತೆ ಈಗಾಗಲೇ ರೈತರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರು ಭೂಮಿ ನೀಡಲು ಒಪ್ಪಿದ್ದಾರೆ. ವೇಮಗಲ್‌, ನರಸಾಪುರ ಭಾಗದಲ್ಲಿ ಸ್ವಾಧೀನಪಡಿಸಿಕೊಂಡ ದರದಲ್ಲೇ ಈ ಯೋಜನೆಗೂ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುವುದು. ಭೂಸ್ವಾಧೀನಕ್ಕೆ ಅಗತ್ಯವಾದ ಹಣವನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಲು ಸಿಎಂ ಒಪ್ಪಿದ್ದು, ಹಣಕಾಸು ಇಲಾಖೆ ಒಪ್ಪಿದ ಮೇಲೆ ಹಣ ಬಿಡುಗಡೆಯಾಗಲಿದೆ ಎಂದರು.

ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರದೊಂದಿಗಿನ ಒಪ್ಪಂದ ಪ್ರಕಾರ ಭೂಮಿಯನ್ನು ರಾಜ್ಯ ಸರ್ಕಾರ ಉಚಿತವಾಗಿ ನೀಡಬೇಕು. ಜತೆಗೆ ಯೋಜನಾ ವೆಚ್ಚದ ಅರ್ಧ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಬೇಕಿದೆ. ಅದರಂತೆ 1ನೇ ಹಂತದಲ್ಲಿ ಭೂಸ್ವಾ­­ಧೀನಪಡಿಸಿಕೊಂಡು ಎರಡೂ­ವರೆ ತಿಂಗಳಲ್ಲಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದರು. 

2,000 ಕೋಟಿ ರೂ.ಗೆ ಹೆಚ್ಚಳ ಸಾಧ್ಯತೆ: ರೈಲ್ವೆ ಕೋಚ್‌ ಕಾರ್ಖಾನೆ ನಿರ್ಮಾಣ ಕುರಿತು ಒಪ್ಪಂದವಾದಾಗ ಸುಮಾರು 1,460 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿತ್ತು. ಆದರೆ, ಕಾರ್ಯರೂಪಕ್ಕೆ ಬರುವುದು ವಿಳಂಬವಾ­ಗಿದ್ದರಿಂದ ವೆಚ್ಚ 2000 ಕೋಟಿ ರೂ. ಆಗಲಿದೆ. ಯೋಜನೆ ಜಾರಿ ವಿಳಂಬವಾದರೆ, ಕೇಂದ್ರ ಸರ್ಕಾರ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಹಾಗಾಗಿ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.