ಮತದಾನ ಅರಿವು ಎಲ್ಲರಲ್ಲೂ ಮೂಡಿಸಿ

Team Udayavani, Jan 26, 2017, 12:32 PM IST

dvg2.jpg

ದಾವಣಗೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಮುಂದಿನ ಐದು ವರ್ಷಗಳು ಹೇಗಿರಬೇಕೆಂದು ನಿರ್ಧರಿಸುವಂತಹ ಅತ್ಯಂತ ಪ್ರಮುಖ ಜವಾಬ್ದಾರಿಯನ್ನು ಮತದಾನದ ಮೂಲಕ ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ತಿಳಿಸಿದರು.

ಬುಧವಾರ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮತಅತ್ಯಮೂಲ್ಯ. ಭಾವಿ ಮತದಾರರಾದ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಅರಿತು, ತಮ್ಮ ಮನೆಯವರು, ಸುತ್ತಮುತ್ತಲಿನವರಲ್ಲಿ ಅರಿವು  ಮೂಡಿಸುವ ಕೆಲಸ ಮಾಡಬೇಕು ಎಂದರು.

ಭಾರತದಲ್ಲಿ 85 ಕೋಟಿ ಮತದಾರರರಿದ್ದಾರೆ. ಇಂತಹ ದೇಶದಲ್ಲಿ ಚುನಾವಣೆ ನಡೆಸುವುದು ಅಷ್ಟು ಸುಲಭದ ಕೆಲಸ ಅಲ್ಲ. ಜ.1 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರೂ ನಮೂನೆ-6 ಅರ್ಜಿ ತುಂಬಿ, ಅರ್ಜಿಯೊಂದಿಗೆ ವಾಸ, ಜನ್ಮ ದಿನಾಂಕ ದೃಢೀಕರಣ ಮತ್ತು ಭಾವಚಿತ್ರವನ್ನು ನೀಡಿ ಸಮೀಪದ ಮತಗಟ್ಟೆಯ  ಬಿಎಲ್‌ಒ ಅಥವಾ ನಗರ ವ್ಯಾಪ್ತಿಯಲ್ಲಾದರೆ ನಗರಪಾಲಿಕೆ ಅಥವಾ ತಹಶೀಲ್ದಾರ್‌ ಕಚೇರಿಯಲ್ಲಿ ಸಲ್ಲಿಸಿ, ನೋಂದಾಯಿಸಿಕೊಳ್ಳಬಹುದು.

ಆಯೋಗದ ವೆಬ್‌ಸೈಟ್‌ನಲ್ಲಿ ಅಗತ್ಯ ಮಾಹಿತಿ ಮತ್ತು ದಾಖಲಾತಿ ಅಪ್‌ಲೋಡ್‌ ಮಾಡುವ ಮೂಲಕವೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ| ಪಿ.ಎಸ್‌. ಶಿವಪ್ರಕಾಶ್‌ ಮಾತನಾಡಿ, ದೇಶದ ಜನಸಂಖ್ಯೆ ಎಣಿಸುವುದೆಂದರೆ ಆಕಾಶದಲ್ಲಿ ನಕ್ಷತ್ರ ಎಣಿಸಿದಂತೆ ಎಂಬುದು ಗಣತಿದಾರರ ಅನುಭವ.

ಚುನಾವಣಾ ಆಯೋಗ ಅತ್ಯಂತ ಶ್ರಮ ವಹಿಸಿ ಮತದಾರರನ್ನು ತಲುಪಿ, ಗುರುತಿಸಿರುತ್ತಾರೆ. ಮತದಾರರು ಮತ ಹಾಕುವ ಮೂಲಕ ತಮ್ಮ ಜವಾಬ್ದಾರಿ ತೋರಬೇಕು. ಪ್ರಪಂಚದಲ್ಲೇ ಭಾರತ ಸೂಪರ್‌ ಪವರ್‌ ಆಗುವ ಅವಕಾಶವಿದ್ದು, ಕೇವಲ ಪ್ರಧಾನ ಮಂತ್ರಿಯವರಿಂದ ಮಾತ್ರ ಪ್ರಗತಿ ಸಾಧ್ಯವಿಲ್ಲ. ಎಲ್ಲರ ಬೆಂಬಲ ಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು.

ಯುವ ಜನಾಂಗ ಮತದಾನದ ಬಗ್ಗೆ ತಮ್ಮ ಸುತ್ತಮುತ್ತಲಿನವರಲ್ಲಿ ಜಾಗೃತಿ ಮೂಡಿಸುವುದೂ ಕೂಡ ಅಷ್ಟೇ ಮುಖ್ಯ ಎಂದು ಹೇಳಿದರು. ಚುನಾವಣಾ ತಹಶೀಲ್ದಾರ್‌ ಎಸ್‌.ಎ. ಪ್ರಸಾದ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಒಂದು ಲೋಕಸಭಾ, 8 ವಿಧಾನ ಸಭಾ ಕ್ಷೇತ್ರಗಳಿವೆ. 15,77,327 ಮತದಾರರು, 1,896 ಮತಗಟ್ಟೆಗಳಿವೆ. ಶೇ. 99.9 ರಷ್ಟು ಪ್ರಮಾಣದಲ್ಲಿ 15,76,854 ಮತದಾರರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. 

ವಿದ್ಯಾರ್ಥಿಗಳಾದ ಬಿ.ಎ. ಅನು, ಬಿ.ಆರ್‌.ರೇಣುಕಾ, ಯತಿರಾಜ್‌ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌. ಅಶ್ವತಿ, ಮಹಾನಗರ ಪಾಲಿಕೆ ಆಯುಕ್ತ ಬಿ. ಎಚ್‌. ನಾರಾಯಣಪ್ಪ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಬಿ. ಟಿ. ಕುಮಾರಸ್ವಾಮಿ ವಂದಿಸಿದರು. 

ಮಹಾನಗರ ಪಾಲಿಕೆಯ ಕಂದಾಯ ಉಪ ಆಯುಕ್ತ ರವೀಂದ್ರ ಬಿ. ಮಲ್ಲಾಪುರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಹೊಸ ಯುವಮತದಾರರಿಗೆ ಗುರುತಿನ ಚೀಟಿ, ಮತದಾರರ ದಿನಾಚರಣೆ ಅಂಗವಾಗಿ ನಗರದ ವಿವಿಧ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾಷಣ, ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  

ಟಾಪ್ ನ್ಯೂಸ್

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.