ಉಡುಪಿ ನಗರಕ್ಕೆ 320 ಕೋ.ರೂ. ಅನುದಾನ
Team Udayavani, Jan 27, 2017, 8:53 AM IST
ಉಡುಪಿ: ಕುಡ್ಸೆಂಪ್ ಯೋಜನೆಯಡಿ ಕುಡಿಯುವ ನೀರಿನ ಯೋಜನೆಗೆ 101.20 ಕೋ.ರೂ., ಒಳಚರಂಡಿ ಯೋಜನೆಗೆ 185.90 ಕೋ.ರೂ., ಶೀಂಬ್ರ ಅಣೆಕಟ್ಟು ಯೋಜನೆಗೆ 33 ಕೋ.ರೂ. ಸಹಿತ ಒಟ್ಟು ನಗರಸಭಾ ವ್ಯಾಪ್ತಿಯಲ್ಲಿ 320 ಕೋ.ರೂ. ಯೋಜನೆ ಮಂಜೂರಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಬೀಡಿನಗುಡ್ಡೆಯ ಬಯಲು ರಂಗಮಂದಿರದಲ್ಲಿ ಗುರುವಾರ ಜಿಲ್ಲಾ ಮಟ್ಟದ 68ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣಗೈದು, ಸಂದೇಶ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ 63 ಕೋ. ರೂ. ವಿನಿಯೋಗಿಸಲಾಗಿದೆ. ಸ್ವ ಉದ್ಯೋಗ ಕಲ್ಪಿಸಲು ಅನುದಾನ, 529 ಫಲಾನುಭವಿಗಳಿಗೆ 699.62 ಎಕರೆ ಅರಣ್ಯ ಭೂಮಿ ಹಕ್ಕುಪತ್ರ ನೀಡಲಾಗಿದೆ. 18 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 4.91 ಕೋ.ರೂ. ಮಂಜೂರಾಗಿದೆ. ಕಾರ್ಕಳದಲ್ಲಿ ದೇವರಾಜು ಅರಸು ಭವನಕ್ಕೆ 1.22 ಕೋ.ರೂ. ಅನುದಾನ, 40 ಲ.ರೂ. ವೆಚ್ಚದಲ್ಲಿ ಬೀಡಿನಗುಡ್ಡೆಯಲ್ಲಿ ನಗರ ವಸತಿರಹಿತರಿಗೆ ಆಶ್ರಯತಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
46 ಕಿಂಡಿ ಆಣೆಕಟ್ಟು ಕಾಮಗಾರಿ
ತುರ್ತು ಕುಡಿಯುವ ನೀರಿನ ಯೋಜನೆಗೆ ಎಲ್ಲ ವಿಧಾನಸಬಾ ಕ್ಷೇತ್ರಗಳಿಗೆ ತಲಾ 40 ಲ.ರೂ. ಬಿಡುಗಡೆಯಾಗಿದೆ. 2016-17ನೇ ಸಾಲಿನಲ್ಲಿ 18.81 ಕೋ.ರೂ. ವೆಚ್ಚದಲ್ಲಿ 920 ಹೆಕ್ಟೇರ್ ಪ್ರದೇಶದಲ್ಲಿ 46 ಕಿಂಡಿ ಅಣೆಕಟ್ಟುಗಳ ಕಾಮಗಾರಿ ಕೈಗೊಳ್ಳುವ ತೀರ್ಮಾನ, 12 ನದಿದಂಡೆ ಹಾಗೂ 4 ಕೆರೆಗಳನ್ನು ಅಭಿಧಿವೃದ್ಧಿಧಿಪಡಿಸಲಾಗುತ್ತಿದ್ದು, ಇನ್ನೂ 9 ಕೆರೆಗಳ ಅಭಿವೃದ್ಧಿಪಡಿಸುವ ಯೋಜನೆಯಿದೆ. ಉಡುಪಿ ವ್ಯಾಪ್ತಿಯಲ್ಲಿ 137 ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 16.68 ಕೋ.ರೂ. ಅನುದಾನ ಬಿಡುಗಡೆಯಾಗಿದೆ ಎಂದರು.
ಮರವಂತೆಯಲ್ಲಿ ನಾಡದೋಣಿಗಳಿಗೆ ತಂಗುದಾಣ ನಿರ್ಮಾಣಕ್ಕೆ 45 ಕೋ.ರೂ., ಕಲ್ಮಾಡಿ ಬೊಬ್ಬರ್ಯಪಾದೆ, ಅಳಿವೆ ಗದ್ದೆಯಲ್ಲಿ ಜೆಟ್ಟಿ ನಿರ್ಮಾಣಕ್ಕೆ ತಲಾ 2 ಕೋ.ರೂ. ಮಂಜೂರಾಗಿದೆ. ಫೆಬ್ರವರಿಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನ ಮೇಳಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ತಾ. ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಎಸ್‌ಪಿ ಕೆ.ಟಿ. ಬಾಲಕೃಷ್ಣ, ಜಿ.ಪಂ. ಸಿಇಒ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.