ನೋಟು ಅಮಾನ್ಯದಿಂದ ಅರ್ಥ ವ್ಯವಸ್ಥೆ ಬುಡಮೇಲು
Team Udayavani, Jan 27, 2017, 11:13 AM IST
ಬೆಂಗಳೂರು: “ನೋಟು ಅಮಾನ್ಯಗೊಳಿಸಿರುವ ಕೇಂದ್ರ ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಷ್ಟ್ರದ ಅರ್ಥ ವ್ಯವಸ್ಥೆ ಬುಡಮೇಲಾಗುವಂತಾಗಿದೆ ಎಂದು,” ಹಿರಿಯ ಪತ್ರಕರ್ತ ಪರಂಜಯ್ ಗುಹಾ ಠಾಖುರ್ತ ಅತಂಕ ವ್ಯಕ್ತಪಡಿಸಿದ್ದಾರೆ.
ಸಿಪಿಐ ವತಿಯಿಂದ ಗಾಂಧಿ ಭವನದಲ್ಲಿ ಗುರುವಾರ ಆಯೋಜಿಸಿದ್ದ “ನೋಟು ಅಮಾನ್ಯದಿಂದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯದ ಮೇಲಾಗುವ ಪರಿಣಾಮ’ಗಳ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು “ಭಷ್ಟ್ರಾಚಾರ ತಡೆ, ಕಪ್ಪು ಹಣ ನಿಯಂತ್ರಣ ಮತ್ತು ಭಯೋತ್ಪಾದನೆ ನಿಗ್ರಹಕ್ಕಾಗಿ 500, 1000 ರೂ. ಮುಖಬೆಲೆಯ ನೋಟು ರದ್ದು ಮಾಡಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಒಪ್ಪುವಂತಹದ್ದಲ್ಲ.
ನೋಟು ಅಮಾನ್ಯಗೊಳಿಸಿರುವುದು ಅವೈಜ್ಞಾನಿಕ. ದೇಶದ ಅರ್ಥ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸದ್ಯಕ್ಕೆ ಸಮಸ್ಯೆ ಬಿಸಿ ತಟ್ಟದಿದ್ದರೂ ಮುಂದಿನ ಕೆಲವು ದಿನಗಳಲ್ಲಿ ದೇಶ ಎಂದೂ ಕಾಣದ ಅರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ,” ಎಂದು ಭವಿಷ್ಯ ನುಡಿದರು.
“ನೋಟು ರದ್ದು ಮಾಡಿರುವುದರಿಂದ ಸಾರ್ವಜನಿಕರು ಇಂದಿಗೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಪ್ರತಿಭಟಿಸಿದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸಲಾಗುತ್ತದೆ ಎಂಬ ಕಾರಣಕ್ಕೆ ಯಾರೂ ಪ್ರತಿಭಟಿಸುತ್ತಿಲ್ಲ. ಜನರು ಸಹನೆ ಕಳೆದುಕೊಂಡರೆ ದೇಶದ ಸ್ಥಿತಿ ಮತ್ತಷ್ಟು ಹದಗೆಡಲಿದೆ,” ಎಂದು ಎಚ್ಚರಿಸಿದರು.
ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಸಂಘಟನೆ ಅಧ್ಯಕ್ಷ ಎಚ್.ವಿ.ರೈ, ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್, ಭಾರತೀಯ ವಕೀಲರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಉಪಸ್ಥಿತರಿದ್ದರು.
ಇಂದಿರಾ ಹಾದಿಯಲ್ಲಿ ಮೋದಿ: “ಪ್ರಧಾನಿ ನರೇಂದ್ರ ಮೋದಿ ಅವರು ದಿವಂಗತ ಇಂದಿರಾ ಗಾಂಧಿ ಅವರ ಹಾದಿಯಲ್ಲೇ ನಡೆಯುತ್ತಿದ್ದಾರೆ. ಅವರಂತೇ ಸರ್ವಾಧಿಕಾರ ಮನೋಭಾವ ಪ್ರದರ್ಶಿಸುತ್ತಿದ್ದಾರೆ. ತಾವು ನಡೆದ ದಾರಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂಬ ನಿರ್ಬಂಧವನ್ನು ದೇಶದ ಜನರ ಮೇಲೆ ಹೇರುತ್ತಿದ್ದಾರೆ. ಪಂಜಾಬ್, ಗೋವಾ, ಉತ್ತರಾಖಂಡ್, ಉತ್ತರಪ್ರದೇಶ ಹಾಗೂ ಮಣಿಪುರದ ಚುನಾವಣೆಗಳು ನೋಟು ರದ್ದತಿ ನಿರ್ಧಾರ ಸರಿಯೋ? ತಪ್ಪೊ ಎಂಬುದನ್ನು ತಿಳಿಸುತ್ತದೆ ಎಂದು ಪರಂಜಯ್ ಗುಹಾ ಠಾಖುರ್ತ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.