ಕೆಎಸ್ಆರ್ಪಿಗೆ 102 ಅತ್ಯಾಧುನಿಕ ವಾಹನ
Team Udayavani, Jan 28, 2017, 3:45 AM IST
ಬೆಂಗಳೂರು :ಪೊಲೀಸ್ ಇಲಾಖೆಗೆ ಅಗತ್ಯ ವಾಹನ ಸಹಿತ ಅತ್ಯಾಧುನಿಕ ಸಲಕರಣೆ ಹಾಗೂ ಪೊಲೀಸ್ ಸಿಬ್ಬಂದಿಗೆ ನ್ಯಾಯಯುತ ವೇತನ, ಭತ್ಯೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧ ಮುಂಭಾಗ ಕೆಎಸ್ಆರ್ಪಿಗೆ ಹೊಸದಾಗಿ ಸೇರ್ಪಡೆಯಾದ 102 ಬಸ್ಗಳ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಪೊಲೀಸರೂ ಸಹ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಹೇಳಿದರು.
ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿ. ಇಲಾಖೆಗೆ ಅಗತ್ಯವಾದ ವಾಹನ ವ್ಯವಸ್ಥೆ ಇದೀಗ ಮಾಡಲಾಗಿದೆ. ಗಸ್ತು ವಾಹನಗಳ ಸಂಖ್ಯೆ ಸಹ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಕೆಎಸ್ಆರ್ಪಿ ಸಿಬ್ಬಂದಿ ದೂರದ ಊರುಗಳಿಗೆ ಸಂಚರಿಸುತ್ತಾರೆ.ಅವರಿಗೆ ಈಗ ಒದಗಿಸಿರುವ ವಾಹನಗಳಿಂದ ಅನುಕೂಲವಾಗುತ್ತದೆ. ಮಹಿಳಾ ಪೊಲೀಸರಿಗೆ ಶೌಚಾಲಯ ಸಹಿತ ವಾಹನ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೊಲೀಸರಿಗೆ ಸೌಲಭ್ಯ ಒದಗಿಸುವ ವಿಚಾರದಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಆರೋಗ್ಯ ತಪಾಸಣೆಗೆ ಸಾವಿರ ರೂ.ನೀಡಲಾಗುತ್ತಿದೆ. ಸಿಬ್ಬಂದಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳ ಭತ್ಯೆ ನೀಡಲಾಗುತ್ತಿದೆ.ಬಡ್ತಿ ಅವಕಾಶ ಸಿಗುವಂತೆಯೂ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.ಪೊಲೀಸರ ಮಕ್ಕಳಿಗೆ ಸಿಬಿಎಎಸ್ಸಿ ಗುಣಮಟ್ಟದ ಶಾಲೆಗಳನ್ನು ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ತೆರೆಯಲಾಗಿದೆ. ಇದನ್ನು ಎಲ್ಲ ವಲಯಗಳಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್,ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್,ಗೃಹಸಚಿವರ ಸಲಹೆಗಾರ ಕೆಂಪಯ್ಯ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.