ಕಾಂಗ್ರೆಸ್‌ಗೆ ಹತ್ತಿರವಾದ ಜೆಡಿಎಸ್‌ನ 7 ಶಾಸಕರು
Team Udayavani, Jan 28, 2017, 3:50 AM IST
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ಮುಂದಿನ ತಿಂಗಳು ಇಲ್ಲವೇ ಉತ್ತರ ಪ್ರದೇಶ ಚುನಾವಣೆ ಮುಗಿದ ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ.
ಜೆಡಿಎಸ್ ವರಿಷ್ಠರು ತಮ್ಮ ಬಗ್ಗೆ ಕಟು ನಿಲುವು ಹೊಂದಿರುವ ಹಿನ್ನೆಲೆಯಲ್ಲಿ ತಮ್ಮ ದಾರಿ ನೋಡಿಕೊಳ್ಳಲು ಮುಂದಾಗಿರುವ ಏಳು ಶಾಸಕರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಕಾಂಗ್ರೆಸ್ ಸೇರಿದರೆ ಏಳು ಶಾಸಕರಿಗೂ ಟಿಕೆಟ್ ನೀಡಬೇಕು ಎಂಬುದು ಇವರ ಬೇಡಿಕೆ. ಆದರೆ, ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಸಮಸ್ಯೆ ಇಲ್ಲವಾದರೂ ಎರಡು ಕ್ಷೇತ್ರಗಳಲ್ಲಿ ಕಷ್ಟವಾಗಬಹುದು. ಅಂತಿಮವಾಗಿ ಆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ನೀವು ಸೋನಿಯಾಗಾಂಧಿ-ರಾಹುಲ್‌ಗಾಂಧಿ ಅವರನ್ನೇ ಖುದ್ದು ಭೇಟಿ ಮಾಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಭಿನ್ನಮತೀಯರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಭರವಸೆಯೂ ದೊರೆತಿದೆ ಹೇಳಲಾಗಿದೆ.
ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರಿಂದ ಮುಂದೆ ನಿಮ್ಮ ಹಿತಾಸಕ್ತಿ ಕಾಪಾಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್ ಅಭಯ ನೀಡಿರುವುದರಿಂದ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಸಮಸ್ಯೆಯಾಗದು ಎಂಬುದು ಜೆಡಿಎಸ್ ಭಿನ್ನರ ಭರವಸೆ. ಕಾಂಗ್ರೆಸ್ ಸೇರ್ಪಡೆ ಪ್ರಯತ್ನಗಳ ಹಿನ್ನೆಲೆಯಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ಪವಾರ್ ಜತೆಗಿನ ಮಾತುಕತೆಯನ್ನು ಜೆಡಿಎಸ್ ಭಿನ್ನರು ಮುಂದೂಡಿದ್ದಾರೆ.
ಈ ಮಧ್ಯೆ, ಕ್ಷೇತ ಶುಕ್ರವಾರವೂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಚೆಲುವರಾಯಸ್ವಾಮಿ, ಜಮೀರ್ ಅಹಮದ್, ಬಾಲಕೃಷ್ಣ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಸಮಾಲೋಚನೆ ನಡೆಸಿದರು.
ಯಾರ ಮನೆಗೂ ಹೋಗಿಲ್ಲ
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಚೆಲುವರಾಯಸ್ವಾಮಿ, ಟಿಕೆಟ್‌ಗಾಗಿ ಯಾರ ಬಳಿಗೂ ನಾವು ಹೋಗಿಲ್ಲ. ಪಕ್ಷ ನೀಡುವ ಟಿಕೆಟ್‌ಗಿಂತಲೂ ಜನ ನೀಡುವ ಟಿಕೆಟ್ಟೆ ಮುಖ್ಯ. ಅದು ಇದ್ದರೆ ವಿಧಾನಸಭೆ ಪ್ರವೇಶ ಮಾಡಬಹುದು ಹೇಳಿದರು.
ಕ್ಷೇತ್ರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು. ರಾಜಕೀಯ ಚರ್ಚಿಸಿಲ್ಲ. ರಾಜಕೀಯ ತೀರ್ಮಾನ ಕೈಗೊಳ್ಳಲು ಇದು ಸಕಾಲವಲ್ಲ ಎಂದು ತಿಳಿಸಿದರು.
ಎನ್‌ಸಿಪಿ ಸೇರಿದಂತೆ ಬೇರೆ ಪಕ್ಷ ಸೇರಬೇಕೆ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲು ಇದು ಸೂಕ್ತ ಕಾಲವಲ್ಲ. ಜನ ಆಯ್ಕೆ ಮಾಡಿದ್ದು, ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ಎನ್‌ಸಿಪಿ ಮುಖಂಡ ಶರದ್ ಪವಾರ್ ಅವರು ಜಮೀರ್ ಅಹಮ್ಮದ್ ಖಾನ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇನ್ನೂ ಸಭೆ ನಡೆಸುವ ಬಗ್ಗೆ ಯಾವುದೂ ನಿಗದಿಯಾಗಿಲ್ಲ ಎಂದು ಹೇಳಿದರು.
2018ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸಿದ್ಧಪಡಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದ್ದಂತಿಲ್ಲವಲ್ಲ ಎಂಬ ಪ್ರಶ್ನೆಗೆ, “ಅದು ಅವರ ಪಕ್ಷ. ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ಎಲ್ಲ ಹಕ್ಕು, ಅಧಿಕಾರ ಅವರಿಗೇ ಇದೆ. ನಾವೇನು ಟಿಕೆಟ್ ಕೇಳುವುದಿಲ್ಲ. ನಾವು ಏಳು ಮಂದಿ ಒಟ್ಟಿಗೆ ಇದ್ದು, ಒಟ್ಟಾಗಿಯೇ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.