ಹಿಮಪಾತಕ್ಕೆ ಹಾಸನದ ಯೋಧ ಸಂದೀಪ್‌ ಶೆಟ್ಟಿ ಹುತಾತ್ಮ

Team Udayavani, Jan 28, 2017, 3:45 AM IST

27-Hassan-Photo–Sandeep-Se.jpg

ಹಾಸನ: ಕಳೆದ ವರ್ಷ ಸಿಯಾಚಿನ್‌ನ ಸೇನಾ ಶಿಬಿರದ ಬಳಿ ನಡೆದಿದ್ದ ಹಿಮಪಾತಕ್ಕೆ ಸಿಲುಕಿ ಹಾಸನ ತಾಲೂಕು ತೇಜೂರಿನ ಯೋಧ ನಾಗೇಶ್‌ ಹಾಗೂ ಧಾರವಾಡ ಜಿಲ್ಲೆಯ ಹನುಮಂತಪ್ಪ ಕೊಪ್ಪದ ಹುತಾತ್ಮರಾದ ಘಟನೆ ಮರೆಮಾಸುವ ಮುನ್ನವೇ ಹಾಸನದ ಇನ್ನೊಬ್ಬ ಯೋಧ ಜಮ್ಮು ಕಾಶ್ಮೀರದಲ್ಲಿ ನಡೆದ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೇನಾ ಶಿಬಿರದ ಮೇಲೆ ಬುಧವಾರ ಭಾರೀ ಹಿಮಪಾತವಾಗಿತ್ತು. ಇದರಲ್ಲಿ ಮೃತ ಪಟ್ಟ ಯೋಧರ ಪೈಕಿ ಹಾಸನ ತಾಲೂಕಿನ ದೇವಿಹಳ್ಳಿಯ ಸಂದೀಪ್‌ಶೆಟ್ಟಿ  (26) ಕೂಡ ಒಬ್ಬರು. ಸಂದೀಪ್‌ಶೆಟ್ಟಿ ಹುತಾತ್ಮರಾಗಿರುವ ಸುದ್ದಿ ಅವರ ಕುಟುಂಬಕ್ಕೆ ಶುಕ್ರವಾರ ಸಂಜೆ ದೊರೆತಿದೆ. ಇದರಿಂದ ಕುಟುಂಬ ಹಾಗೂ ಇಡೀ ಗ್ರಾಮದಲ್ಲೇ ಸ್ಮಶಾನ ಮೌನ ಆವರಿಸಿದೆ. ಶನಿವಾರ ಮಧ್ಯಾಹ್ನದ ವೇಳೆ ಹಾಸನ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೇವಿಹಳ್ಳಿಯ ಪುಟ್ಟರಾಜು ಮತ್ತು ಗಂಗಮ್ಮ ದಂಪತಿಗೆ ಸಂದೀಪ್‌ ಶೆಟ್ಟಿ ಹಾಗೂ ಒಬ್ಬ ಮಗಳಿದ್ದಾಳೆ. ಮಗಳ ಮದುವೆಯಾಗಿದೆ. ಹಾಸನದ ಎಂ.ಕೃಷ್ಣ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ ಪಿಯುವರೆಗೆ ಓದಿದ್ದ  ಸಂದೀಪ್‌ಶೆಟ್ಟಿ ಶಿಕ್ಷಕರಾಗುವ ಕನಸು ಕಂಡಿದ್ದರು. ಬಳಿಕ ಸೇನೆ ಸೇರಲು ನಿಶ್ಚಯಿಸಿ 2010ರಲ್ಲಿ ಸೇನೆ ಸೇರಿದ್ದರು. ಮೊದಲು ಗುಜರಾತ್‌ ಸೇನಾ ವಲಯದಲ್ಲಿ  ಸೇವೆ ಸಲ್ಲಿಸಿದ್ದ ಸಂದೀಪ್‌ ಅವರು, ಬಳಿಕ ಜಮ್ಮು – ಕಾಶ್ಮೀರಕ್ಕೆ ವರ್ಗವಾಗಿದ್ದರು. ಸೇನೆಗೆ ಸೇರಿದ್ದ 7 ವರ್ಷಗಳಲ್ಲಿ  ನಾಲ್ಕು ಬಾರಿ ಮಾತ್ರ ಗ್ರಾಮಕ್ಕೆ ಬಂದಿದ್ದರು. ಕಳೆದ ನಾಲ್ಕು ತಿಂಗಳ ಹಿಂದೆ ಗ್ರಾಮದ ಹಬ್ಬ ಹಾಗೂ ಗ್ರಾಮದ ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸೇನೆಯ ಸೇವೆಗೆ ಹೋಗಿದ್ದರು. ಇದೀಗ ಶವವಾಗಿ ಗ್ರಾಮಕ್ಕೆ ಬರುತ್ತಿರುವುದು ಹೆತ್ತವರಿಗೆ ಆಘಾತವನ್ನುಂಟು ಮಾಡಿದೆ. ಇಡೀ ಗ್ರಾಮ ರೋಧಿಸುತ್ತಿದೆ.

ಜಿಲ್ಲಾಡಳಿತಕ್ಕೆ ಸಂಜೆ ಮಾಹಿತಿ: ಸಂದೀಪ್‌ಶೆಟ್ಟಿ ಅವರು ಹುತಾತ್ಮರಾಗಿರುವ ಮಾಹಿತಿ ಜಿಲ್ಲಾಡಳಿತಕ್ಕೆ ಶುಕ್ರವಾರ ಸಂಜೆ ತಲುಪಿದೆ. ಶನಿವಾರ ಯೋಧನ ಪಾರ್ಥಿವ ಶರೀರಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗೌರವ ಸಲ್ಲಿಸಲಾಗುವುದು. ಬಳಿಕ ಸ್ವಗ್ರಾಮ ದೇವಿಹಳ್ಳಿಗೆ ಮೆರವಣಿಗೆ ಮೂಲಕ ಕೊಂಡೊಯ್ದು ಅಂತ್ಯಸಂಸ್ಕಾರ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಯೋಧನ ಸಾವಿಗೆ ಮಾಜಿ ಪ್ರಧಾನಿ ದೇವೇಗೌಡರು, ಶಾಸಕ ಪ್ರಕಾಶ್‌ ಮತ್ತಿತರರು ಕಂಬನಿ ಮಿಡಿದಿದ್ದಾರೆ.

ಫೆ.22ಕ್ಕೆ ವಿವಾಹ ನಿಗದಿಯಾಗಿತ್ತು 
ಹಾಸನ: ಹಿಮಪಾತದಲ್ಲಿ ಸಿಲುಕಿ ಮೃತಪಟ್ಟ ಸಂದೀಪ್‌ ಶೆಟ್ಟಿ ವಿವಾಹವು ಫೆ.22ಕ್ಕೆ ನಿಗದಿಯಾಗಿತ್ತು. ಕಳೆದ ಬಾರಿ ಸಂದೀಪ್‌ ಬಂದಾಗ ಬೆಂಗಳೂರಿನ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಲಾಗಿತ್ತು. ಮದುವೆ ಸಿದ್ಧತೆಯನ್ನು ತಂದೆ ತಾಯಿ ಮಾಡುತ್ತಿದ್ದರು. ಮದುವೆ ಮಾಡಿಕೊಳ್ಳಲು ಸಂಭ್ರಮದಿಂದ ಬರಬೇಕಾಗಿದ್ದ ಮಗನ ಬದಲು ಆತ ಶವವನ್ನು ಬರಮಾಡಿಕೊಳ್ಳಬೇಕಿದೆ. ಮಗನ ಮದುವೆ ಮಾಡಿ ನೆಮ್ಮದಿಯಿಂದ ಇರಬೇಕು ಎಂದು ಬಯಸಿದ್ದೇವು. ಇದೀಗ ಆತನೇ ಹೆಣವಾಗಿ ಬರುತ್ತಿದ್ದಾನೆ ಎಂದು ರೋಧಿಸುತ್ತಿರುವ ಪುಟ್ಟರಾಜು ಹಾಗೂ ಗಂಗಮ್ಮ ದಂಪತಿಗೆ ಅನಾಥಭಾವ ಕಾಡುವಂತಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.