ಫೆ.1ರಂದು ಮೈಸೂರಲ್ಲಿ ಆದಿವಾಸಿಗಳ ಬೃಹತ್‌ ಸಮಾವೇಶ


Team Udayavani, Jan 28, 2017, 12:46 PM IST

mys1.jpg

ಮೈಸೂರು: ಸರ್ಕಾರದ ಸವಲತ್ತುಗಳನ್ನು ಆದಿವಾಸಿ ಜನಾಂಗದ ಫ‌ಲಾನುಭವಿಗಳಿಗೆ ವಿತರಿಸಲು ಫೆಬ್ರವರಿ 1ರಂದು ಆದಿವಾಸಿಗಳ ರಾಜ್ಯಮಟ್ಟದ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶದ ಪೂರ್ವಸಿದ್ಧತಾ ಸಭೆ ನಡೆಸಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆಯಲಿರುವ ಸಮಾವೇಶವನ್ನು ಅಂದು ಮಧ್ಯಾಹ್ನ 2ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 

ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ, ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮೊದಲಾದವರು ಭಾಗವಹಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಂದ ಸುಮಾರು 12 ಸಾವಿರ ಆದಿವಾಸಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಆದಿವಾಸಿಗಳಿಗೆ ಸರ್ಕಾರದ ಯೋಜನೆಗಳ ಮಾಹಿತಿ ಮೊದಲು ತಲುಪಬೇಕು ಎಂಬ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗುತ್ತಿದ್ದು, ವಿವಿಧ ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಮಾಹಿತಿಯನ್ನು ಕ್ರೋಢೀಕರಿಸಿ ಉತ್ತಮ ರೀತಿಯಲ್ಲಿ ಸಮಾವೇಶದಲ್ಲಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ವಿವಿಧ ಜಿಲ್ಲೆಗಳಿಂದ ಆದಿವಾಸಿಗಳು ಫೆ.1ರಂದು ಮಧ್ಯಾಹ್ನ 12ಕ್ಕೆ ಆಗಮಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಿ, ನೋಡಲ್‌ ಅಧಿಕಾರಿಗಳು ತಮ್ಮ ಜಿಲ್ಲೆಯಿಂದ ಆಗಮಿಸುವ ಆದಿವಾಸಿ ಜನಾಂಗದವರ ಪಟ್ಟಿ ಮಾಡಿಕೊಳ್ಳಬೇಕು. ಜಿಲ್ಲಾ ಕೇಂದ್ರದಲ್ಲಿ ಅವರನ್ನು ಒಗ್ಗೂಡಿಸಿ ಕಾರ್ಯಕ್ರಮಕ್ಕೆ ಕರೆತರಬೇಕು. ದೂರದ ಜಿಲ್ಲೆಗಳಿಂದ ಆಗಮಿಸುವವರಿಗೆ ಸಮಾಜ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ನಿಲಯಗಳಲ್ಲಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದರು.

ಜಿಲ್ಲೆಗಳಲ್ಲಿರುವ ಆದಿವಾಸಿ ಜನಾಂಗದ ಮುಖ್ಯಸ್ಥರಿಂದ ಅವರಿಗೆ ಇರುವ ತೊಂದರೆಗಳ ಬಗ್ಗೆ ಮನವಿ ಪಡೆದುಕೊಂಡು ಕ್ರೋಢೀಕರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವುದು ಉತ್ತಮ ಎಂದು ಅಧಿಕಾರಿಗಳಿಗೆ ತಿಳಿಸಿದರು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕಾರ್ಯಕ್ರಮಕ್ಕೆ ವೇದಿಕೆ ಹಾಗೂ ಬ್ಯಾರಿಕೇಡಿಂಗ್‌ ನಿರ್ಮಾಣ ಮಾಡುವ ಮೊದಲು ನಗರ ಪೊಲೀಸ್‌ ಆಯುಕ್ತರೊಂದಿಗೆ ಸ್ಥಳ ಪರಿಶೀಲನೆ ಮಾಡಿ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ನಿಲುಗಡೆ ಸ್ಥಳ, ಗಣ್ಯರ ವಾಹನ ನಿಲುಗಡೆ ಸ್ಥಳ ನಿಗಧಿ ಮಾಡಿಕೊಳ್ಳುವಂತೆ ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಫ‌ಲಾನುಭವಿಗಳಿಗೆ ಅರಣ್ಯ ಹಕ್ಕು ಪತ್ರ, ಪೌಷ್ಟಿಕ ಆಹಾರ ವಿತರಣೆ, ಬಹುಮಾನ ಮೊತ್ತ ವಿತರಣೆ ಹಾಗೂ ಇನ್ನಿತರೆ ಸೌಲಭ್ಯಗಳ ಪತ್ರಗಳನ್ನು ವಿತರಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಆಯ್ದ ಫ‌ಲಾನುಭವಿಗಳಿಗೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಿಸಲಾಗುವುದು. ಇವರಿಗೆ ಗುರುತಿನ ಚೀಟಿ ನೀಡಿ ವೇದಿಕೆಯ ಮೇಲೆ ಕರೆತರಲು ನೋಡಲ್‌ ಅಧಿಕಾರಿಯನ್ನು ನೇಮಿಸುವಂತೆ ಹೇಳಿದರು.

ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಆಹಾರ, ಭದ್ರತೆ, ಸ್ವಚತೆ, ವೇದಿಕೆ ಹಾಗೂ ಇನ್ನಿತರ ಸಮಿತಿಗಳನ್ನು ರಚಿಸುವಂತೆ ತಿಳಿಸಿದರು. ಸಭೆಯಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ನಿರ್ದೇಶಕ ರೇವಣ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್‌, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಬಸವನಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.