ಜೀವಸಂಕುಲದ ಅಸ್ತಿತ್ವಕ್ಕೇ ಧಕ್ಕೆ: ಡಾ| ಶಿವಣ್ಣ
Team Udayavani, Jan 28, 2017, 12:48 PM IST
ದಾವಣಗೆರೆ: ವೈವಿಧ್ಯಮಯ ಸಸ್ಯ ಪ್ರಭೇದಗಳನ್ನು ಗುರುತಿಸಿ, ವರ್ಗೀಕರಿಸಿ, ಸಂರಕ್ಷಿಸದಿದ್ದಲ್ಲಿ ಜೀವಸಂಕುಲದ ಅಸ್ತಿತ್ವಕ್ಕೇ ಧಕ್ಕೆ ಉಂಟಾಗಲಿದೆ ಎಂದು ದೆಹಲಿ ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಡಾ| ಕೆ.ಆರ್. ಶಿವಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಸ್ಯಗಳ ವರ್ಗೀಕರಣ ಮತ್ತು ಔಷಧಿ ಸಸ್ಯಗಳ ಮಹತ್ವ. ವಿಷಯ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪೃಥ್ವಿ ಮೇಲಿರುವ ವೈವಿಧ್ಯಮಯ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವಲ್ಲಿ ಆಡಳಿತ ವ್ಯವಸ್ಥೆ, ಅವುಗಳ ಕುರಿತಾದ ಸಂಶೋಧನೆಯತ್ತ ಶಿಕ್ಷಣ ಕ್ಷೇತ್ರವೂ ಆಸಕ್ತಿ, ಪರಿಣಾಮಕಾರಿ ಪ್ರಕ್ರಿಯೆ ತೋರುತ್ತಿಲ್ಲ ಎಂದು ವಿಷಾದಿಸಿದರು.
ಆಹಾರೋತ್ಪಾದನೆಯಲ್ಲಿ ಪರಾಗಸ್ಪರ್ಶ ಪ್ರಕ್ರಿಯೆ ಅತೀ ಪ್ರಮುಖ ಅಂಶ. ಕೃಷಿಯಲ್ಲಿ ಮಿತಿಮೀರಿ ಬಳಸುತ್ತಿರುವ ರಾಸಾಯನಿಕ ಗೊಬ್ಬರ, ಕೀಟನಾಶಕಗಳು ಸಹಜವಾದ ಪರಾಗಸ್ಪರ್ಶ ಪ್ರಕ್ರಿಯೆಗೆ ಕಾರಣ ಆಗುವಂಥಹ ಕೀಟ, ಪ್ರಾಣಿ ಸಂಕುಲಗಳ ವಿನಾಶಕ್ಕೆ ಕಾರಣವಾಗುತ್ತಿವೆ ಎಂದು ತಿಳಿಸಿದರು.
ಖ್ಯಾತ ಸಸ್ಯಶಾಸ್ತ್ರಜ್ಞ ಡಾ| ಆರ್. ರಾಘವೇಂದ್ರರಾವ್ ಮಾತನಾಡಿ, ವೈವಿಧ್ಯಮಯ ಸಸ್ಯ ಪ್ರಭೇದಗಳನ್ನು ಗುರುತಿಸಿ, ವರ್ಗೀಕರಿಸಿ, ಸಂರಕ್ಷಿಸಲು ಬೇಕಾದಂಥಹ ಮೂಲ ವಿಜ್ಞಾನದ ಅಧ್ಯಯನದ ಬಗ್ಗೆಯೇ ಆಸಕ್ತಿ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿರಿಯ ವಿಜ್ಞಾನಿ ಡಾ| ಎಂ. ನಂಜಪ್ಪ ಮಾತನಾಡಿ, ಚಂದ್ರ, ಮಂಗಳ ಮುಂತಾಗ ಗ್ರಹಗಳ ಬಗ್ಗೆ ತಿಳಿದುಕೊಳ್ಳು ತೋರುತ್ತಿರುವಂಥಹ ಆಸಕ್ತಿಯನ್ನು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿರುವ ಸಸ್ಯಗಳ ಬಗ್ಗೆ ತಿಳಿದುಕೊಳ್ಳಲು ತೋರುತ್ತಿಲ್ಲ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ ಮಾತನಾಡಿ, ಯಾವುದೇ ಆರಣ್ಯ ಪ್ರದೇಶವನ್ನು ವಿವಿಧ ಯೋಜನೆಗಳಿಗೆ ಬಳಸುವಂಥಹ ಸಂದರ್ಭದಲ್ಲಿ ಅಲ್ಲಿರುವ ಸಸ್ಯ ಪ್ರಭೇದ ಗುರುತಿಸಿ, ಬೇರೆ ಕಡೆ ಬೆಳೆಸುವಂಥಹ ವ್ಯವಸ್ಥೆ ಆಗಬೇಕಿದೆ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಬಿ. ಮಂಜಪ್ಪ, ಕಾಲೇಜು ಪ್ರಾಚಾರ್ಯ ಡಾ| ಎಸ್. ಸುಬ್ರಹ್ಮಣ್ಯಸ್ವಾಮಿ, ಡಾ| ಬಿ.ಇ. ರಂಗಸ್ವಾಮಿ, ಡಾ| ರಾಮಲಿಂಗಪ್ಪ, ಡಾ| ಪೂಜಾರ್, ಡಾ| ಜಿ.ಪಿ. ದೇಸಾಯಿ, ಪ್ರಕಾಶ್ ಇತರರು ಇದ್ದರು. ವಾಸುದೇವನಾಯಕ್ ನಿರೂಪಿಸಿದರು. ಡಾ| ಎಂ.ಎಸ್. ಮಂಜಪ್ಪ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.