ಸದಭಿರುಚಿ ಚಲನಚಿತ್ರ ವೀಕ್ಷಣೆಯಿಂದ ಉತ್ತಮ ಸಮಾಜ ನಿರ್ಮಾಣ


Team Udayavani, Jan 28, 2017, 12:53 PM IST

gul1.jpg

ಕಲಬುರಗಿ: ಸಿನಿಮಾ ಅತ್ಯಂತ ಪ್ರಭಾವಶಾಲಿ ಮಾಧ್ಯಮವಾಗಿದ್ದು, ಸಮಾಜದ ಪ್ರತಿಬಿಂಬದಂತಿರುವ ಚಲನಚಿತ್ರಗಳು ಸದಭಿರುಚಿಯಿಂದ  ಕೂಡಿದರೆ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಾಯವಾಗುತ್ತವೆ ಎಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ತಿಳಿಸಿದರು. 

ಶುಕ್ರವಾರ  ನಗರದ ಸಂಗಮ ಚಿತ್ರಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾ ಆಡಳಿತದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ  ಪ್ರಶಸ್ತಿ ವಿಜೇತ ಚಿತ್ರಗಳ ಸಂಭ್ರಮ ಹಾಗೂ ಕನ್ನಡ ಚಲನ ಚಿತ್ರೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಹಿಂದಿನ ಪರಂಪರೆಯನ್ನು ಈಗಿನ ಯುವ ಜನಾಂಗ ಅರ್ಥಮಾಡಿಕೊಳ್ಳಲು ಚಲನಚಿತ್ರಗಳು ಸಹಾಯಕಾರಿಯಾಗಿವೆ. ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಸಿನಿಮಾಗಳನ್ನು ಯುವ ಜನರು ವೀಕ್ಷಿಸಿ ಅರ್ಥೈಸಿಕೊಳ್ಳಬೇಕು ಎಂದರು. 

ಸಿನಿಮಾಗಳಿಂದ ನೈತಿಕ ಮೌಲ್ಯ ಕುಸಿಯಬಾರದು. ಹಿಂದಿನ ಜನಾಂಗಗಳು ಬದುಕಿದ ರೀತಿ ನೀತಿಯನ್ನು, ಆಹಾರ-ವಿಹಾರ, ಆಚಾರ-ವಿಚಾರ  ಮುಂತಾದವನ್ನು ಇಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯವನ್ನು ಸಿನಿಮಾಗಳು ಮಾಡುತ್ತವೆ ಎಂದರು.  

ವಾರ್ತಾ ಮತ್ತು ಸಾರ್ವಜನಿಕ  ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ. ಚಂದ್ರಕಾಂತ ಅಧ್ಯಕ್ಷತೆ ವಹಿಸಿ, ಚಿತ್ರೋತ್ಸವ ಸಪ್ತಾಹದ ಅಂಗವಾಗಿ ಸಂಗಮ ಸಿನಿಮಾ ಮಂದಿರದಲ್ಲಿ ಜ. 28 ರಂದು ಶಿವಯೋಗಿ ಶ್ರೀ ಪುಟ್ಟಯ್ಯಜ್ಜ, ಜ. 29ರಂದು ತಿಥಿ, ಜ. 30ರಂದು ಕೃಷ್ಣಲಿಲಾ, ಜ. 31ರಂದು ರಂಗಿ ತರಂಗ ಫೆ. 1ರಂದು ತಿಥಿ  ಮತ್ತು ಫೆ. 2ರಂದು ಮೈತ್ರಿ ಚಲನಚಿತ್ರಗಳನ್ನು ಪ್ರತಿದಿನ ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಪ್ರದರ್ಶಿಸಲಾಗುವುದು. 

ಸಾರ್ವಜನಿಕರಿಗೆ ಈ ಚಲನಚಿತ್ರಗಳ ವೀಕ್ಷಣೆಗೆ ಉಚಿತ  ಪ್ರವೇಶಾವಕಾಶವಿದೆ ಎಂದರು. ಚೌಕ್‌ ಪೊಲೀಸ್‌ ಠಾಣೆ ಎಎಸ್‌ಐ ಮಲ್ಲಿಕಾರ್ಜುನ ಪಂಚಕಟ್ಟಿ, ಸಂಗಮ ಚಿತ್ರಮಂದಿರದ ವ್ಯವಸ್ಥಾಪಕ ಮಾಣಿಕರಾವ ದೇವಣಿ ಪಾಲ್ಗೊಂಡಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣ್ಣ  ಸಿರಸಗಿ ಸ್ವಾಗತಿಸಿದರು. ಚಲನಚಿತ್ರೋತ್ಸವ ಸಪ್ತಾಹದ ಮೊದಲನೇ ದಿನ “ಮೈತ್ರಿ’ ಚಲನಚಿತ್ರ ಪ್ರದರ್ಶಿಸಲಾಯಿತು. 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.