ಮುರಿದ ಹಲ್ಲು ತೋರಿಸದ್ದಕ್ಕೆ ಆರೋಪಿಗಳ ಖುಲಾಸೆ
Team Udayavani, Jan 31, 2017, 3:45 AM IST
ನವದೆಹಲಿ: ಮಹಿಳೆಯ ಹಲ್ಲು ಮುರಿದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಏಳು ಮಂದಿಯನ್ನು ದೆಹಲಿಯ ಸ್ಥಳೀಯ ಕೋರ್ಟ್ ಸೋಮವಾರ ಖುಲಾಸೆ ಮಾಡಿದೆ. ಮಹಿಳೆ ಏಳು ಮಂದಿ ತನ್ನ ಮೇಲೆ ಹಲ್ಲೆ ಮಾಡಿ ಹಲ್ಲು ಮುರಿದಿದ್ದರು ಎಂದು ಆಪಾದಿಸಿದ್ದರು.
ವಿಚಾರಣೆ ವೇಳೆ ಮುರಿದು ಹೋಗಿದ್ದ ಹಲ್ಲನ್ನು ಕೋರ್ಟಿಗೆ ಒದಗಿಸಲು ಮಹಿಳೆ ವಿಫಲರಾದ ಹಿನ್ನೆಲೆಯಲ್ಲಿ 7 ಮಂದಿಯನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಘಟನೆ ಹಿನ್ನೆಲೆ: ಕ್ಷುಲಕ್ಕ ಕಾರಣಕ್ಕಾಗಿ 2006ರ ಮೇ 17 ರಂದು ದೆಹಲಿಯ ಕೊಟ್ಲ ಮುಬಾರಕ್ ಪ್ರದೇಶದಲ್ಲಿ ಮಹಿಳೆ ಮತ್ತು ಒಂದು ಕುಟುಂಬದ ನಡುವೆ ಮಾರಾಮಾರಿ ನಡೆದಿತ್ತು. ಘರ್ಷಣೆಯಲ್ಲಿ ತನ್ನ ಎರಡು ಹಲ್ಲುಗಳು ಮುರಿದಿವೆ ಎಂದು 7 ಮಂದಿ ವಿರುದ್ಧ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ವೇಳೆ ಎರಡು ಹಲ್ಲುಗಳು ಮುರಿದಿದ್ದವು ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯ ಅವುಗಳನ್ನು ಸಾಕ್ಷಿಯಾಗಿ ಹಾಜರುಪಡಿಸುವಂತೆ ಅವರಿಗೆ ಸೂಚಿಸಲಾಗಿದ್ದರೂ ಅವರು ವಿಫಲರಾದರು. ಹೀಗಾಗಿ ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆಪಾದಿತರನ್ನು ಬಿಡುಗಡೆ ಮಾಡಿತು. ಜತೆಗೆ ಪೊಲೀಸರೂ ಕೂಡ ತನಿಖೆಗೆ ವೇಳೆ ನೆರೆಹೊರೆಯವರಿಂದ ಘಟನೆ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಲಿಲ್ಲ ಎಂದು ಟೀಕಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.