ತಂತ್ರಜ್ಞಾನ ಆಧಾರಿತ ಶೈಕ್ಷಣಿಕ ಬೋಧನೆಗೆ ಚಾಲನೆ
Team Udayavani, Jan 31, 2017, 12:25 PM IST
ದಾವಣಗೆರೆ: ವಿದ್ಯಾರ್ಥಿಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡೆಪ್ಯಟಿ ಮೇಯರ್ ಬಿ. ನಾಗರಾಜಪ್ಪ ಸಲಹೆ ನೀಡಿದ್ದಾರೆ. ಮಂಗಳವಾರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜ್ಞಾನಸಂಗಮ ಮತ್ತು ಐಸಿಟಿ ಆಧಾರಿತ ಶೈಕ್ಷಣಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಚೆಗೆ ಹೆಚ್ಚಾಗುತ್ತಿರುವ ತಂತ್ರಜ್ಞಾನ ಸೌಲಭ್ಯಗಳ ಮೇಲೆ ನಾವೆಲ್ಲರೂ ಅವಲಂಬಿತರಾಗಿದ್ದೇವೆ. ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಒಳ್ಳೆಯ ಜೀವನ ಕಟ್ಟಿಕೊಳ್ಳಲು ಬಳಸಬೇಕು ಎಂದರು. ಈಗ ಪೆನ್ನು. ಪುಸ್ತಕಗಳ ಜಾಗದಲ್ಲಿ ಕಂಪ್ಯೂಟರ್, ಮೌಸ್, ಲ್ಯಾಪ್ಟಾಪ್, ಟ್ಯಾಬ್ ಕಂಡು ಬರುತ್ತಿವೆ. ಶಾಲಾ-ಕಾಲೇಜು ಕೊಠಡಿಗಳ ವಾತಾವರಣವೇ ಬದಲಾಗಿದೆ.
ಕುಳಿತಲ್ಲಿಯೇ ಜಗತ್ತಿನ ಮೂಲೆ ಮೂಲೆ ಯಲ್ಲಿನ ವಿಚಾರ, ವಿದ್ಯಮಾನದ ಬಗ್ಗೆ ಮಾಹಿತಿ ಪಡೆಯಬಹುದು. ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸಬೇಕು ಎಂದು ತಿಳಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ ಮಾತನಾಡಿ, ಇಂದು ಇಡೀ ವಿಶ್ವವೇ ತಂತ್ರಜ್ಞಾನದ ಬಳಕೆಯಲ್ಲಿದೆ.
ಸರ್ಕಾರಿ ಕಾಲೇಜಿನಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು. ಕಾಲೇಜು ಪ್ರಾಚಾರ್ಯ ಡಾ| ದಾದಾಪೀರ್ ನವಿಲೇಹಾಳ್ ಮಾತನಾಡಿ, ಉನ್ನತ ಶಿಕ್ಷಣ ಅಭಿವೃದ್ಧಿ ಯೋಜನೆಯಡಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 98 ಕಾಲೇಜುಗಳಲ್ಲಿ ಜ್ಞಾನಸಂಗಮ ಮತ್ತು ಐಸಿಟಿ ಆಧಾರಿತ ಶೈಕ್ಷಣಿಕ ಕಾರ್ಯಕ್ರಮ ಅಳವಡಿಸಲಾಗಿದೆ. ಪ್ರತಿ ಕಾಲೇಜಿಗೆ 2 ಕೋಟಿ ಅನುದಾನ ನೀಡಲಾಗಿದೆ.
70 ಲಕ್ಷ ಅನುದಾನದಲ್ಲಿ 4 ಕೊಠಡಿ ನಿರ್ಮಿಸಲಾಗಿದೆ. ಉಪನ್ಯಾಸಕರಿಗೆ 15 ಲ್ಯಾಪ್ಟಾಪ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಡಾ| ಕನ್ನಕಟ್ಟೆ ಜಯಣ್ಣ, ಡಾ| ಕಾವ್ಯಶ್ರೀ, ಬಿ.ಎಲ್. ಶಿವಮೂರ್ತಿ, ಕೆ.ಎ. ಬಾಬು. ಕೆ.ಎಂ. ರುದ್ರಪ್ಪ, ಕೆ.ವಿ. ಸುನೀತಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.