ದ.ರಾ.ಬೇಂದ್ರೆ ಸ್ಕೈ ವಾಕ್‌ ಬಳಕೆಗೆ


Team Udayavani, Feb 1, 2017, 11:55 AM IST

skywalk.jpg

ಬೆಂಗಳೂರು: ಖಾಸಗಿ ಸಹಭಾಗಿತ್ವದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಯನಗರದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಪಾದಚಾರಿ ಮೇಲ್ಸೇತುವೆಯನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು. 

ಜಯನಗರ 3ನೇ ಬ್ಲಾಕ್‌ ದ.ರಾ. ಬೇಂದ್ರೆ ವೃತ್ತದಲ್ಲಿ ಪ್ರಕಾಶ್‌ ಆರ್ಟ್ಸ್ ಸಂಸ್ಥೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ಈ ಪಾದಚಾರಿ ಮೇಲ್ಸೇತುವೆ ನಿರ್ಮಿಸಿದ್ದು, ಶಾಸಕ ಆರ್‌. ಅಶೋಕ್‌ ಮತ್ತು ಮೇಯರ್‌ ಜಿ. ಪದ್ಮಾವತಿ ಲೋಕಾರ್ಪಣೆಗೊಳಿಸಿದರು. ವರಕವಿ ಬೇಂದ್ರೆ ಜನ್ಮದಿನೋತ್ಸವದ ಅಂಗವಾಗಿ ನಿರ್ಮಿಸಿದ ಈ ಮೇಲ್ಸೇತುವೆಗೆ ಬೇಂದ್ರೆ ಹೆಸರು ಇಡಲಾಗಿದೆ. 

ಜಯನಗರದ 22ನೇ ಅಡ್ಡರಸ್ತೆ, ಆನೆಬಂಡೆ ರಸ್ತೆ, 9ನೇ ಮುಖ್ಯರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಈ ಪಾದಚಾರಿ ಮಾರ್ಗದ ಎರಡೂ ಬದಿಯಲ್ಲಿ ಒಟ್ಟಾರೆ ಮೂರು ಲಿಫ್ಟ್ಗಳನ್ನು ಅಳವಡಿಸಲಾಗಿದ್ದು, ನಿತ್ಯ ಸರಾಸರಿ ಎರಡು ಸಾವಿರ ಪಾದಚಾರಿಗಳು ಇದನ್ನು ಬಳಕೆ ಮಾಡಲಿದ್ದಾರೆ. ಪ್ರಕಾಶ್‌ ಆರ್ಟ್ಸ್ ಸಂಸ್ಥೆಯು ಈ ಪಾದಚಾರಿ ಮೇಲ್ಸೇತುವೆ ಮೇಲಿನ ಜಾಹೀರಾತು ಶುಲ್ಕ ವಾರ್ಷಿಕ 3.20 ಲಕ್ಷ ಹಾಗೂ ನೆಲ ಬಾಡಿಗೆ ರೂಪದಲ್ಲಿ 10.80 ಲಕ್ಷ ರೂ. ಪಾಲಿಕೆಗೆ ಪಾವತಿಸಲಿದೆ. 

ಪಾದಚಾರಿ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದ ಮೇಯರ್‌ ಪದ್ಮಾವತಿ, “”ಸಾರ್ವಜನಿಕರಿಗೆ ನಿರಾತಂಕವಾಗಿ, ಸರಾಗವಾಗಿ ರಸ್ತೆ ದಾಟಲು ಈ ರೀತಿಯ ಪಾದಚಾರಿ ಮೇಲ್ಸೇತುವೆ ತುಂಬಾ ಅನುಕೂಲ. ಇದರಿಂದ ಪಾದಚಾರಿಗಳಿಗೂ ಅನುಕೂಲ ಹಾಗೂ ಪಾಲಿಕೆಗೂ ಆದಾಯ ಬರುತ್ತದೆ. ಖಾಸಗಿ ಸಹಭಾಗಿತ್ವದಲ್ಲಿ ಇನ್ನಷ್ಟು ಪಾದಚಾರಿ ಮೇಲ್ಸೇತುವೆಗಳು ನಗರದಲ್ಲಿ ತಲೆಯೆತ್ತಲಿವೆ,” ಎಂದರು. 

ಶಾಸಕ ಆರ್‌. ಅಶೋಕ್‌ ಮಾತನಾಡಿ, “ಹೆಚ್ಚುತ್ತಿರುವ ವಾಹನದಟ್ಟಣೆ ನಡುವೆ ಪಾದಚಾರಿಗಳು ನಿರಾತಂಕವಾಗಿ ರಸ್ತೆ ದಾಟಲು ಈ ರೀತಿಯ ಮೇಲ್ಸೇತುವೆ ಅತ್ಯವಶ್ಯಕ. ಪದ್ಮನಾಭನಗರದ ಬನಶಂಕರಿ ದೇವಸ್ಥಾನ ಬಳಿ ಕೂಡ ಇದೇ ಮಾದರಿಯ ಮೇಲ್ಸೇತುವೆ ಸಿದ್ಧವಾಗಿದ್ದು, ಶೀಘ್ರ ಲೋಕಾರ್ಪಣೆಗೊಳ್ಳಲಿದೆ. ಲಿಫ್ಟ್ಗಳ ಸೌಲಭ್ಯ ಇರುವುದರಿಂದ ಮಹಿಳೆಯರು, ವೃದ್ಧರಿಗೆ ಅನುಕೂಲ ಆಗಲಿದೆ,” ಎಂದರು.

ಕಸ ಪ್ರತ್ಯೇಕ ಕಡ್ಡಾಯ; ಪಾಲಿಕೆ ಸಜ್ಜು
ನಗರದ ವ್ಯಾಪ್ತಿಯಲ್ಲಿ ಹಸಿ ಮತ್ತು ಒಣತ್ಯಾಜ್ಯ ಪ್ರತ್ಯೇಕಗೊಳಿಸುವುದು ಕಡ್ಡಾಯವಾಗಿದ್ದು, ಬುಧವಾರ ದಿಂದ ಈ ಸಂಬಂಧ ಪಾಲಿಕೆ ವತಿಯಿಂದ ನಗರದಾದ್ಯಂತ ಅಭಿಯಾನ ಆರಂಭಿಸಲಾಗು ವುದು ಎಂದು ಮೇಯರ್‌ ಜಿ. ಪದ್ಮಾವತಿ ತಿಳಿಸಿದರು. ಜಯನಗರದಲ್ಲಿ ಮಂಗಳವಾರ ಪಾದಚಾರಿ ಮೇಲ್ಸೇತುವೆಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌, ಜನರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಹಸಿ ಮತ್ತು ಒಣತ್ಯಾಜ್ಯ ಸಂಗ್ರಹಕ್ಕೆ ಪಾಲಿಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಅಭಿಯಾನಕ್ಕಾಗಿ ಎಲ್ಲ ಸದಸ್ಯರು, ಸರ್ಕಾರೇತರ ಸಂಘ-ಸಂಸ್ಥೆಗಳ ನೆರವು ಪಡೆಯಲಾಗಿದೆ ಎಂದರು. 

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.