ಕುಖ್ಯಾತ ಮನೆಗಳ್ಳ ಪೊಲೀಸರಿಗೆ ಸಿಕ್ಕಿಬಿದ್ದ
Team Udayavani, Feb 2, 2017, 11:39 AM IST
ಬೆಂಗಳೂರು: ಬೀಗ ಹಾಕಿದ್ದ ಮನೆಗಳ ಬೀಗ ಒಡೆದು ಕಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಕಾಟನ್ಪೇಟೆ ಪೊಲೀಸರು 30 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಚಾಮರಾಜಪೇಟೆಯ ವಾಲ್ಮೀಕಿ ನಗರ ನಿವಾಸಿ ಯಾಸೀನ್ ಖಾನ್ ಅಲಿಯಾಸ್ ಚೋರ್ ಇಮ್ರಾನ್ (26) ಬಂಧಿತ.
ಆರೋಪಿಯಿಂದ 1 ಕೆ.ಜಿ.100 ಗ್ರಾಂ ಚಿನ್ನಾಭರಣ, 750 ಗ್ರಾಂ ಬೆಳ್ಳಿ ಹಾಗೂ ಒಂದು ಗಿಲ್ಮಾ ಟಿ.ವಿ.ಜಪ್ತಿ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಈತ, ಜೈಲಿನಿಂದ ಹೊರ ಬಂದ ಬಳಿಕವು ಕಳವು ಕೃತ್ಯ ಮುಂದುವರೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಳವು ಮಾಡುವುದನ್ನೇ ವೃತ್ತಿಯಾನ್ನಾಗಿಸಿಕೊಂಡಿದ್ದ. ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಹಗಲಿನಲ್ಲಿ ಹಲವು ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದ ಆರೋಪಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ. ಕಳವು ಮಾಡಿದ ಚಿನ್ನಾಭರಣವನ್ನು ಶಿವಾಜಿನಗರ, ರಾಜಾಮಾರ್ಕೆಟ್ ಜ್ಯೂವೆಲರಿ ಶಾಪ್ ಮತ್ತು ಗಿರಿವಿ ಅಂಗಡಿಗಳಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ.
ಬಂದ ಹಣವನ್ನು ದುಶ್ಚಟಗಳಿಗೆ ಬಳಸಿಕೊಳ್ಳುತ್ತಿದ್ದ. ಈತನ ಬಂಧನದಿಂದ ಕಾಟನ್ಪೇಟೆಯ 3, ಹಲಸೂರು ಗೇಟ್, ಸಿಟಿ ಮಾರ್ಕೆಟ್ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣೆಯ ತಲಾ 1 ಪ್ರಕರಣ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.