“ನೀರು, ಮೇವು ಪೂರೈಸಲು ಅಧಿಕಾರಿಗಳು ವಿಫ‌ಲ’


Team Udayavani, Feb 2, 2017, 3:17 PM IST

Suchi-Ra-Ra-3.jpg

ಚಾಮರಾಜನಗರ: ತಾಲೂಕಿನಾದ್ಯಂತ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫ‌ಲರಾಗಿದ್ದಾರೆಂದು ಚಾಮರಾಜನಗರ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಅಧ್ಯಕ್ಷ ಎಚ್‌.ವಿ.ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಕುರಿತು ವ್ಯಾಪಕ ಚರ್ಚೆ ನಡೆಯಿತು. ಸದಸ್ಯ ಬಿ.ಬಾಲಚಂದ್ರಮೂರ್ತಿ ಮಾತನಾಡಿ, ಸಮಸ್ಯೆಗಳ ಬಗ್ಗೆ ಯಾವುದೇ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಾಮಾನ್ಯ ಸಭೆಯಲ್ಲಿ ಚರ್ಚೆ ಕೈಗೊಂಡರೂ ಆ ಬಗ್ಗೆ ಕ್ರಮ ವಹಿಸುತ್ತಿಲ್ಲ. ಜನರು ಹಣಕೊಟ್ಟು ಕೆಲಸ ಮಾಡಿಸುವುದಾದರೆ ನಾವು ಚುನಾಯಿತರಾಗಿ ಏಕೆ ಇಲ್ಲಿಗೆ ಬರಬೇಕು ಎಂದು ಪ್ರಶ್ನಿಸಿದರು.

ಅಧಿಕಾರಿಗಳ ವರ್ತನೆ ಬಗ್ಗೆ ಅಸಮಾಧಾನ: ಅಂಗನವಾಡಿ ಕೇಂದ್ರದ ಕುರಿತಂತೆ ಮಾಹಿತಿ ನೀಡಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಲೆದಾಡಿಸುತ್ತಾರೆ. ಕಂದಾಯ ಇನ್ಸ್‌ಪೆಕ್ಟರ್‌ಗೆ ಫೋನ್‌ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಹೀಗಾದರೆ ಸಮಸ್ಯೆಗಳ ಕುರಿತು ಜನರಿಗೆ ಏನು ಉತ್ತರ ನೀಡುವುದು? ಈ ರೀತಿ ನಿರ್ಲಕ್ಷÂ ಧೋರಣೆ ಕಂಡು ಬಂದರೆ ಅದಕ್ಕೆ ಅಧ್ಯಕ್ಷರೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನೀರಿನ ಸಮಸ್ಯೆ ನೀಗಿಸಲು ಬೋರ್‌ವೆಲ್‌ ಕೊರೆಸಿ: ಸದಸ್ಯೆ ಕಾಂತಾಮಣಿ ಮಾತನಾಡಿ, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯದ ಬಳಿ ಬೋರ್‌ವೆಲ್‌ ಕೊರೆದು ಪೈಪ್‌ ಲೈನ್‌ ಮಾಡಿ ವೆಂಕಟಯ್ಯನಛ‌ತ್ರ, ಅಂಕನಶೆಟ್ಟಿಪುರ ಹಾಗೂ ಹೊಸೂರು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಬೇಕೆಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷ ಎಚ್‌.ವಿ.ಚಂದ್ರು ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸದಸ್ಯ ಬಸವಣ್ಣ ಮಾತನಾಡಿ, ಬೋರ್‌ವೆಲ್‌ ಕೊರೆದು 5-6 ತಿಂಗಳು ಕಳೆದರೂ ಪ್ರಯೋಜ ನವಾಗಿಲ್ಲ. ಕೆಲ್ಲಂಬಳ್ಳಿ, ಬಸವನಪುರದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಮೋಟಾರ್‌ ಅಳವಡಿಸುವಂತೆ ತಿಳಿಸಿದರೂ ಅಧಿಕಾರಿಗಳು ಉದಾಸೀನ ತೋ ರುತ್ತಿದ್ದಾರೆ. ಹೀಗಾಗಿ ಜನತೆ ನಮಗೆ ಛೀಮಾರಿ ಹಾಕುತ್ತಿದ್ದಾರೆ. ಬರಗಾಲ ಘೋಷಣೆಯಾಗಿ ಲಕ್ಷಾಂತರ ರೂ. ಬಿಡುಗಡೆಯಾಗಿದ್ದರೂ ನೀರಿನ ಸಮಸ್ಯೆ ಮಾತ್ರ ಪರಿಹರಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ನೀರು ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪುರುಷೋತ್ತಮ್‌ ಮಾತನಾಡಿ, ಫೆ.10ರೊಳಗೆ ಉಮ್ಮತ್ತೂರು ಭಾಗದ 42 ಹಳ್ಳಿ ಗಳಿಗೆ ನೀರು ಕೊಡಲು ಬರದಿಂದ ಕಾಮಗಾರಿ ನಡೆಯುತ್ತಿದೆ.  ಮಾರ್ಚ್‌ ಅಂತ್ಯದ ವೇಳೆಗೆ 52 ಗ್ರಾಮಗಳ ಕಾಮಗಾರಿ ಪೂರ್ಣಗೊಳ್ಳಲಿದೆ. ಏಪ್ರಿಲ್‌ ವೇಳೆಗೆ ಬಹು ಗ್ರಾಮ ಕುಡಿಯುವ ಯೋಜನೆ ಪೂರ್ಣಗೊಳ್ಳಲಿದ್ದು ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಸುಳ್ಳು ಮಾಹಿತಿ ನೀಡುತ್ತೀರಾ: ಇಷ್ಟಕ್ಕೆ ಸಮಾಧಾ ನಗೊಳ್ಳದ ಅಧ್ಯಕ್ಷರು ಅನುಪಾಲನ ವರದಿ ಕುರಿತು ಎಷ್ಟೇ ಚರ್ಚೆ ನಡೆದರೂ ಕಾಮಗಾರಿ ಅನುಷ್ಠಾನಗೊಳ್ಳುತ್ತಿಲ್ಲ. ಸಭೆಗೆ ಸುಳ್ಳು ಮಾಹಿತಿ ನೀಡು ತ್ತಿದ್ದೀರಿ. ಬಹುತೇಕ ಸದಸ್ಯರು ನಿಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದ್ದರಿಂದ ಸಮರ್ಪಕವಾಗಿ ಕೆಲಸ ನಿರ್ವಹಿಸಿ ಎಂದು ಎಇಇಗೆ ತಾಕೀತು ಮಾಡಿದರು. ಸದಸ್ಯರಾದ ಶಿವಕುಮಾರ್‌, ಬಿ.ಎಸ್‌.ರೇವಣ್ಣ, ಕೆ.ಎಂ ಮಹದೇವಸ್ವಾಮಿ, ಪಿ.ಕುಮಾರ್‌ ಸೇರಿದಂತೆ ಇತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಸಾಮಾನ್ಯ ಸಭೆಯಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಪಿ.ಎಸ್‌.ದಯಾನಿಧಿ,  ಕಾರ್ಯ ನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.