ಎಪಿಎಲ್ ಪಡಿತರ ಚೀಟಿ-50,000 ಅರ್ಜಿ ಸಲ್ಲಿಕೆ: ಖಾದರ್
Team Udayavani, Feb 3, 2017, 3:45 AM IST
ಮಂಗಳೂರು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವ್ಯವಸ್ಥೆ ಜಾರಿಗೆ ಬಂದ ಬಳಿಕ ಕಳೆದ 2 ತಿಂಗಳಲ್ಲಿ ರಾಜ್ಯಾದ್ಯಂತ ಎಪಿಎಲ್ ಪಡಿತರ ಚೀಟಿಗೆ 50,000 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅರ್ಜಿ ಹಾಕಿದ 15 ದಿನಗಳಲ್ಲಿ ಪಡಿತರ ಚೀಟಿ ಅರ್ಜಿದಾರರ ಮನೆಬಾಗಿಲಿಗೆ ಬರುತ್ತದೆ. ಬಿಪಿಎಲ್ ಪಡಿತರ ಚೀಟಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಗ್ರಾ.ಪಂ.ಗಳು, ಫ್ರಾಂಚೈಸಿಗಳು, ನೆಮ್ಮದಿ ಕೇಂದ್ರ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮೊದಲು ಅರ್ಜಿ ಹಾಕಿದವರು ಕೂಡ ಮತ್ತೆ ಅರ್ಜಿ ಸಲ್ಲಿಸಬೇಕು. ಈ ಹಿಂದಿನ ಅರ್ಜಿಯಲ್ಲಿ ಆಧಾರ್ ನಂಬರ್ ಕಡ್ಡಾಯವಿರಲಿಲ್ಲ. ಹೊಸ ಅರ್ಜಿ ವಿಧಾನದಲ್ಲಿ ಆಧಾರ್ ನಂಬರ್ ನಮೂದಿಸುವುದು ಕಡ್ಡಾಯವಾಗಿರುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ 70 ರೂ. ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿದವರು ಹೊಸ ಅರ್ಜಿ ಸಂದರ್ಭ 20 ರೂ. ಶುಲ್ಕ ಪಾವತಿಸಿದರೆ ಸಾಕಾಗುತ್ತದೆ ಎಂದವರು ಹೇಳಿದರು.
ಉಪ್ಪು : ಗೊಂದಲ ಬೇಡ
ಕಬ್ಬಿಣದಂಶ ಕೊರತೆಗೆ ಪರಿಹಾರವಾಗಿ ರಾಜ್ಯ ಸರಕಾರ ಹೆಚ್ಚು ಆಯೋಡಿನ್ ಇರುವ ಉಪ್ಪನ್ನು ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದೆ. ಇದು ನೀರಿನಲ್ಲಿ ಹಾಕಿದಾಗ ನೀರಿನ ಬಣ್ಣ ಬದಲಾಗುತ್ತದೆ ಎಂಬ ನಿಟ್ಟಿನಲ್ಲಿ ಉಪ್ಪಿನ ಬಗ್ಗೆ ಗೊಂದಲ ನಿರ್ಮಾಣವಾಗಿದೆ. ಇದನ್ನು ಆಹಾರ ಖಾದ್ಯಗಳಿಗೆ ಹಾಕಿದಾಗ ಬಣ್ಣ ಅಥವಾ ರುಚಿಯಲ್ಲಿ ವ್ಯತ್ಯಾಸವಾಗುವುದಿಲ್ಲ. ಉಪ್ಪಿನ ಬಣ್ಣ ಬಿಳಿಯಾಗಿಯೇ ಇರಬೇಕೆಂದೇನೂ ಇಲ್ಲ. ಉಪ್ಪಿನ ಬಗ್ಗೆ ಜನರು ಗೊಂದಲಕ್ಕೊಳಗಾಗಬಾರದು ಎಂದು ಸಚಿವ ಖಾದರ್ ತಿಳಿಸಿದರು.
ಕ್ಯಾಶ್ ಕೂಪನ್ ಪರಿಕಲ್ಪನೆಗೆ ಮುಖ್ಯಮಂತ್ರಿಯವರು ತಡೆಯೊಡ್ಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಆಧುನಿಕತೆ ಹಾಗೂ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಆನ್‌ಲೈನ್ ಅರ್ಜಿ ಸೇರಿದಂತೆ ವಿವಿಧ ಕ್ರಮಗಳನ್ನು ನಾನು ಸಚಿವಧಿನಾಗಿ ಇಲಾಖೆಯ ಅಧಿಕಾರ ಸ್ವೀಕರಿಸಿದ ಬಳಿಕ ಅನುಷ್ಠಾನಗೊಳಿಸಿದ್ದೇನೆ.
ಇದೇ ರೀತಿಯಲ್ಲಿ ಕ್ಯಾಶ್‌ಕೂಪನ್ ವ್ಯವಸ್ಥೆಯಲ್ಲಿ ಮೂರು ಕಡೆಗಳಲ್ಲಿ ಪೈಲಟ್ ಆಗಿ ಜಾರಿಗೊಳಿಸಲು ನಿರ್ಧರಿಸಿ ಇದಕ್ಕೆ ಸಾಫ್ಟ್‌ವೇರ್ ಸಿದ್ಧಪಡಿಸಲಾಗಿತ್ತು. ಆದರೆ ಇದರಿಂದ ಪಡಿತರ ಸಾಮಗ್ರಿಗಳು ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಲು ಸಮಸ್ಯೆಗಳು ಆಗಬಹುದು ಎಂಬ ನೆಲೆಯಲ್ಲಿ ಇದನ್ನು ಸ್ಥಗಿತಗೊಳಿಸಲಾಗಿದೆ ಎಂದರು.
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಜನರು ಕೂಡಲೇ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮಾನವೀಯತೆ ಮೆರೆದರೆ ಅವರ ಜೀವ ಉಳಿಯಲು ಸಾಧ್ಯವಾಗುತ್ತದೆ. ಹರೀಶ್ ಸಾಂತ್ವನ ಯೋಜನೆಯಡಿ ತುರ್ತು ಚಿಕಿತ್ಸೆ ಕೂಡ ಲಭಿಸುತ್ತದೆ. ಪೊಲೀಸರಿಂದ ಕಿರಿಕಿರಿಯಾಗದಂತೆ ನಿಯಮಾವಳಿಗಳಲ್ಲೂ ಪರಿವರ್ತನೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.