ಕೋಳಿವಾಡ ವರದಿ ನೋಡಿ ಹಕ್ಕುಪತ್ರ


Team Udayavani, Feb 3, 2017, 11:57 AM IST

george.jpg

ಕೆ.ಆರ್‌.ಪುರ: “ಕೆರೆಯಂಗಳದ ಕೊಳೆಗೇರಿ ಪ್ರದೇಶದಲ್ಲಿ ಮನೆ ನಿರ್ಮಿಸಿ ಕೊಂಡಿರುವವರಿಗೆ ಸ್ಪೀಕರ್‌ ಕೊಳಿವಾಡ ಸಮಿತಿ ವರದಿ ಪರಿಶೀಲಿಸಿ ಹಕ್ಕುಪತ್ರ ನೀಡಲಾಗುವುದು,” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್‌ ಭರವಸೆ ನೀಡಿದ್ದಾರೆ.

ಕೆ.ಆರ್‌.ಪುರ ಕ್ಷೇತ್ರದ ನಗರೇಶ್ವರ ನಾಗೇನಹಳ್ಳಿ, ಕ್ಯಾಲಸನಹಳ್ಳಿ, ಮುನೇಶ್ವರ ನಗರ, ವಿಜಿನಾಪುರ ಬಳಿಯ ಅಂಬೇಡ್ಕರ್‌ನಗರ  ಮತ್ತು ಲಕ್ಷ್ಮಣ್‌ಮೂರ್ತಿನಗರ ಪ್ರದೇಶದ ಕೊಳೆಗೇರಿ ಬಡಾವಣೆಗಳಿಗೆ ಗುರುವಾರ ಭೇಟಿ ಪರಿಶೀಲನೆ ನಡೆಸಿದ ಅವರು, “ನಗರ ವ್ಯಾಪ್ತಿಯಲ್ಲಿರುವ ಕೆಲವು ಕೊಳೆಗೇರಿ ಪ್ರದೇಶಗಳು ಕೆರೆವ್ಯಾಪ್ತಿಗೆ ಒಳಪಟ್ಟಿದೆ. ಹೀಗಾಗಿ ಸ್ವೀಕರ್‌ ಕೋಳಿವಾಡ ಸಮಿತಿ ವರದಿ ಆಧರಿಸಿ ಕೆಳಯಂಗಳ ಮತ್ತು ಕೊಳೆಗೇರಿಯಲ್ಲಿರುವ ಬಡವರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು.

ಕೆ ಆರ್‌  ಪುರ ಕ್ಷೇತ್ರದಲ್ಲಿ ಈಗಾಗಲೆ 1619 ಫ‌ಲಾನುಭವಿಗಳನ್ನು ಗುರುತಿಸಲಾಗಿದೆ. ಶಿಥಿಲಾವ್ಯವಸ್ಥೆಯ ಮನೆಗಳನ್ನು ಹೊಂದಿರುವ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಶೀಘ್ರದಲ್ಲೆ ಅನುದಾನ ಬಿಡುಗಡೆ ಮಾಡಿ, ಹಂತ ಹಂತವಾಗಿ ಮನೆಗಳನ್ನು  ನಿರ್ಮಿಸಿಕೊಡಲಾಗುವುದು,” ಎಂದರು. ಈ ವೇಳೆ “ಕ್ಷೇತ್ರದಲ್ಲಿ ಈಗಾಗಲೆ 1619 ಫ‌ಲಾನುಭವಿಗಳನ್ನು ಗುರುತಿಸಲಾಗಿದೆ, ಅವರಿಗೆ ಆದಷ್ಟು ಬೇಗನೆ ಮನೆ ನಿರ್ಮಾಣ ಮಾಡಿಕೊಡಬೇಕು,” ಎಂದು ಸ್ಥಳೀಯ ಶಾಸಕರು ಮನವಿ ಮಾಡಿದರು. 

ಯಾರು ಫ್ಲೆಕ್ಸ್‌ ಹಾಕಿದವರನ್ನೇ ಕೇಳಿ: ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಷೇಧ ಮತ್ತು ಫ್ಲೆಕ್ಸ್‌ ಅಳವಡಿಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದರೂ ಇದೇ ತಿಂಗಳ 4 ರಂದು ಸ್ಥಳೀಯ ಶಾಸಕ ಬಸವರಾಜ್‌ ರವರ ಹುಟ್ಟು ಹಬ್ಬದ ಹಿನ್ನಲೆ ಕ್ಷೇತ್ರದಾಧ್ಯಂತ ಅನಧಿಕೃತವಾಗಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸಲಾಗಿದೆ ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಇದರ ಬಗ್ಗೆ ಸಚಿವ ಜಾರ್ಜ್‌ರನ್ನು ಪ್ರಶ್ನೆಗೆ ಉತ್ತರಿಸಿದ ಅವರು ನನ್ನ ಹುಟ್ಟು ಹಬ್ಬಕ್ಕೆ ಯಾವುದೇ ರೀತಿ ಫ್ಲೆಕ್ಸ್‌ ಅಳವಡಿಸುವುದಿಲ್ಲ.

ಯಾರ ಹುಟ್ಟು ಹಬ್ಬಕ್ಕೆ ಅಳವಡಿಸಿದ್ದಾರೋ ಅವರನ್ನೇ ಕೇಳಿ ಎಂದು ಶಾಸಕರೆದುರೇ ಹೇಳಿದರು. ಕೇತ್ರದಲ್ಲಿ ಯಾವುದೇ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸದಂತೆ ಕಾರ್ಯಕರ್ತರಿಗೆ ಸೂಚಿಸದರು ಕಾರ್ಯಕರ್ತರು ಅಭಿಮಾನದಿಂದ ಅಳವಡಿಸಿದ್ದಾರೆ. ಇದಕ್ಕೆ ಬಿಬಿಎಂಪಿವತಿಯಿಂದ ದಂಡ ವಿಧಿಸಿದರೆ ಭರಿಸಲು ಸಿದ್ಧ ಎಂದು ಶಾಸಕ ಬಿ.ಎ.ಬಸವರಾಜ ಸರ್ಮಥಿಸಿಕೊಂಡರು. ಈ ವೇಳೆ ಪಾಲಿಕೆ ಸದಸ್ಯರು ಬಿಬಿಎಂಪಿ ಅಧಿಕಾರಿಗಳೂ ಸ್ಥಳದಲ್ಲೇ ಇದ್ದರು. 

ಟಾಪ್ ನ್ಯೂಸ್

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.