ತಂದೆ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಮಗ ಸಾವು
Team Udayavani, Feb 4, 2017, 3:45 AM IST
ನಂಜನಗೂಡು: ವೈಷ್ಣೋದೇವಿ ದೇಗುಲಕ್ಕೆ ತೆರಳಿದ್ದ ಮೈಸೂರು ಜಿಲ್ಲೆ ನಂಜನಗೂಡಿನ ವೃದ್ಧರೊಬ್ಬರು ಅಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. ಈ ಸುದ್ದಿ ತಿಳಿದು ಇವರ ಪುತ್ರನೂ ಆಘಾತಕ್ಕೊಳಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇದರಿಂದ ತಂದೆ ಮಗ ಇಬ್ಬರೂ ಸಾವಿನಲ್ಲಿ ಒಂದಾಗಿದ್ದಾರೆ.
ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿನ ನಿವಾಸಿ ಮಿಲ್ ಮಾಧು ಎಂದೇ ಖ್ಯಾತರಾಗಿದ್ದ ಕೆ.ಮಾದಶೆಟ್ಟಿ (84) ಎಂಬುವವರು ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದರು. ಈ ವೇಳೆ ಹೃದಯಘಾತಕ್ಕೊಳಗಾಗಿ ಕುಸಿದು ಅಸ್ವಸ್ಥಗೊಂಡಿದ್ದರು. ಇವರನ್ನು ಅಲ್ಲಿನ ಕಟ್ರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದರು. ಕುಟುಂಬಸ್ಥರಿಗೆ ವಿಷಯ ತಿಳಿಸಿ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗಿತ್ತು. ಪ್ರಾರ್ಥಿವ ಶರೀರವು ಶನಿವಾರ ಬೆಳಗ್ಗೆ ನಂಜನಗೂಡು ತಲುಪಲಿದೆ. ಮಾದಶೆಟ್ಟಿ ಅವರ ಪತ್ನಿ 10 ವರ್ಷದ ಹಿಂದೆ ತೀರಿಕೊಂಡಿದ್ದು, ನಾಲ್ವರು ಮಕ್ಕಳಲ್ಲಿ ಓರ್ವ ಮಗ ಕೂಡ ತಂದೆ ಜತೆ ಇಹಲೋಹ ತ್ಯಜಿಸಿದಂತಾಗಿದೆ.
ಮಗನೂ ಇಹಲೋಕ ತ್ಯಜಿಸಿದ: ಈ ನಡುವೆ ಶುಕ್ರವಾರ ಬೆಳಗ್ಗೆ ತಂದೆ ಮೃತಪಟ್ಟಿರುವ ಸುದ್ದಿ ಮಾದಶೆಟ್ಟಿ ಅವರ ಪುತ್ರ ಅರುಣಕುಮಾರ್ (43) ಅವರಿಗೆ ತಿಳಿದಿದೆ. ಈ ಸುದ್ದಿ ತಿಳಿದು ಅರುಣಕುಮಾರ್ ಕೂಡ ಆಘಾತಕ್ಕೊಳಗಾಗಿ ಅಸ್ವಸ್ಥರಾದರು. ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಅರುಣಕುಮಾರ್ ಅಸುನೀಗಿದರು. ಅರುಣಕುಮಾರ್ ಅವರಿಗೆ ಪತ್ನಿ ಮತ್ತು ಓರ್ವ ಪುತ್ರಿ ಇದ್ದಾಳೆ. ತಂದೆ ಮತ್ತು ಮಗನ ಅಂತ್ಯಕ್ರಿಯೆಯು ಶನಿವಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.