ATMನೊಳಗೆ ಮಹಿಳೆ ಮೇಲೆ ಹಲ್ಲೆಗೈದ ರಕ್ಕಸ ಕೊನೆಗೂ ಅರೆಸ್ಟ್
Team Udayavani, Feb 4, 2017, 3:21 PM IST
ಹೈದರಾಬಾದ್:ಕಾರ್ಪೋರೇಶನ್ ಬ್ಯಾಂಕ್ ಎಟಿಎಂನಲ್ಲಿ ಹಣ ವಿತ್ ಡ್ರಾ ಮಾಡುತ್ತಿದ್ದಾಗ ಏಕಾಏಕಿ ಎಟಿಎಂಗೆ ನುಗ್ಗಿ ಜ್ಯೋತಿ ಉದಯ್ ಎಂಬವರ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಪರಾರಿಯಾಗಿದ್ದ ಆರೋಪಿ ಕೊನೆಗೂ ಮೂರು ವರ್ಷಗಳ ಬಳಿಕ ಸೆರೆ ಸಿಕ್ಕಿದ್ದಾನೆ ಎಂಬ ಮಾಹಿತಿಯನ್ನು ಟಿವಿ9 ವರದಿ ಮಾಡಿದೆ.
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಘಟನೆ 2013ರ ನವೆಂಬರ್ 19ರಂದು ನಡೆದಿತ್ತು. ಅಂದು ಬೆಳಗ್ಗೆ ಜ್ಯೋತಿ ಉದಯ್ ಅವರು ಎಟಿಎಂ ಪ್ರವೇಶಿಸಿದ್ದಾಗ ಆರೋಪಿ ದಿಡೀರ್ ಒಳನುಗ್ಗಿ ಮಚ್ಚಿನಿಂದ ಮಾರಣಾಂತಿಕವಾಗಿ ಹೊಡೆದು ಪರಾರಿಯಾಗಿದ್ದ. ಬಳಿಕ ಸಿಸಿಟಿವಿ ಆಧಾರದ ಮೇಲೆ ಆರೋಪಿ ಪತ್ತೆಗೆ ಪೊಲೀಸ್ ಇಲಾಖೆ ಸಾಕಷ್ಟು ಕಸರತ್ತು ನಡೆಸಿದ್ದರೂ ಕೂಡಾ ಆರೋಪಿ ಪತ್ತೆಯಾಗಿರಲಿಲ್ಲವಾಗಿತ್ತು.
ಇದೀಗ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಠಾಣೆಯ ಪೊಲೀಸರು ಮಧುಕರ ರೆಡ್ಡಿ ಎಂಬಾತನನ್ನು ಬಂಧಿಸಿದ್ದು, ಎಟಿಎಂನೊಳಗೆ ಹಲ್ಲೆಗೈದು ಪರಾರಿಯಾಗಿದ್ದ ಆರೋಪಿ ಈತನೇ ಎಂಬುದನ್ನು ಬೆಂಗಳೂರು ಪೊಲೀಸರು ಇದೀಗ ಖಚಿತಪಡಿಸಿದ್ದಾರೆ.
ಜನವರಿ 31ರಂದು ಮದನಪಲ್ಲಿ ಪೊಲೀಸರು ರೆಡ್ಡಿಯನ್ನು ಗುರುತಿಸಿ ಬಂಧಿಸಿದ್ದಾರೆಂದು ವರದಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆ ಮಾಡಲು ವಿಫಲರಾಗಿದ್ದ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದರು.
ಎಟಿಎಂ ರಕ್ಕಸನನ್ನು ಗುರುತಿಸಿದ್ದು ಟ್ರಾಫಿಕ್ ಪೊಲೀಸ್!
ಮಧುಕರ್ ರೆಡ್ಡಿಯನ್ನು ಮೊದಲು ಗುರುತಿಸಿದ್ದು ಟ್ರಾಫಿಕ್ ಪೊಲೀಸರು, ಕೊನೆಗೆ ಆತನನ್ನು ಬಂಧಿಸಿ ಮದನಪಲ್ಲಿ ಠಾಣೆಗೆ ಕರೆತಂದು ಒಪ್ಪಿಸಿದ್ದರು ಎಂದು ವರದಿ ತಿಳಿಸಿದೆ. ಕಳೆದ ಮೂರು ದಿನಗಳಿಂದ ರೆಡ್ಡಿಯನ್ನು ಮದನಪಲ್ಲಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿ ಖಚಿತಪಡಿಸಿದ ಗೃಹಸಚಿವ ಪರಮೇಶ್ವರ್
ಕರ್ನಾಟಕ ಮತ್ತು ಆಂಧ್ರಪ್ರದೇಶ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎಟಿಎಂನೊಳಗೆ ಹಲ್ಲೆಗೈದಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಪರಮೇಶ್ವರ್ ಅವರು ಬಿಡದಿಯಲ್ಲಿ ಖಚಿತಪಡಿಸಿದ್ದಾರೆ.
ಸಿ ರಿಪೋರ್ಟ್ ಎಂದರೆ?
ಸಿ ರಿಪೋರ್ಟ್ ಅಂದರೆ ತನಿಖೆಯನ್ನು ಮುಂದುವರೆಸಲು ಸದ್ಯಕ್ಕೆ ಯಾವುದೇ ದಾಖಲೆಗಳಿಲ್ಲ, ಮುಂದಿನ ದಿನಗಳಲ್ಲಿ ಪೂರಕ ದಾಖಲೆಗಳು ಲಭ್ಯವಾದಲ್ಲಿ ತನಿಖೆ ಮುಂದುವರಿಸಲಾಗುವುದೆಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸುವ ವರದಿ. ಸಿ ರಿಪೋರ್ಟ್ ಸಲ್ಲಿಸಿದಲ್ಲಿ ಪ್ರಕರಣ ಅಂತ್ಯಗೊಳ್ಳುವುದಿಲ್ಲ.
ಬಿ ರಿಪೋರ್ಟ್ ಎಂದರೆ, ಆರೋಪಿ ವಿರುದ್ಧ ಮಾಡಲಾಗಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸುವ ವರದಿ. ಬಿ ರಿಪೋರ್ಟ್ ಸಲ್ಲಿಸುವುರಿಂದ ಪ್ರಕರಣ ಮುಕ್ತಾಯಗೊಂಡಿದೆ ಎಂದೇ ಅರ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.