ಇನ್ಮುಂದೆ ‘ಚಿನ್ನಮ್ಮ’ ದರ್ಬಾರ್‌: ಪಟ್ಟ ಬಿಟ್ಟು ಕೊಟ್ಟ ಪನ್ನೀರ್‌


Team Udayavani, Feb 5, 2017, 3:17 PM IST

1444.jpg

ಚೆನ್ನೈ : ಕೊನೆಗೂ ತಮಿಳುನಾಡು ರಾಜಕಾರಣಧಿದಲ್ಲಿ ಕಳೆದ ಕೆಲ ದಿನಗಳಿದ ಇದ್ದ ಗೊಂದಲ ನಿವಾರಣೆಯಾಗಿದ್ದು, ಹೊಸ ತಿರುವು ಎಂಬಂತೆ  ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪರಮಾಪ್ತೆ  “ಚಿನ್ನಮ್ಮ’ಎಂದೇ ಖ್ಯಾತಿ ಗಳಿಸಿರುವ ಶಶಿಕಲಾ ನಟರಾಜನ್‌ ಅವರು ಮುಂದಿನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ಅವರು ನಾಳೆ ಇಲ್ಲವೆ ಫೆಬ್ರವರಿ 9 ರಂದು ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸುವ ಎಲ್ಲಾ ಸಾಧ್ಯತೆಗಳಿವೆ. 

ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ  ನಡೆದ ಶಾಸಕರ ಸಭೆಯಲ್ಲಿ  ಬಹುಮತದಿಂದ ಚಿನ್ನಮ್ಮ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿ ಮುಖ್ಯಮಂತ್ರಿಯನ್ನಾಗಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಹಾಲಿ ಮುಖ್ಯಮಂತ್ರಿ ಪನ್ನೀರ್‌ ಸೆಲ್ವಂ ಅವರು ಇಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. 

ಮಾಜಿ ಸಿಎಂ ಜೆ ಜಯ ಲಲಿತಾ ಅವರಿಗೆ ಪರಮಾಪ್ತರಾಗಿದ್ದ ಶಶಿಕಲಾ ನಟರಾಜನ್‌, ಜಯಾ ನಿಧನದ ನಂತರದ ಪಕ್ಷದ ಚುಕ್ಕಾಣಿ ಹಿಡಿದಿದ್ದರು. ಎಐಡಿಎಂಕೆ ಸಂಪ್ರದಾಯದಂತೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗುವವರೇ ಮುಖ್ಯಮಂತ್ರಿ ಸ್ಥಾನವನ್ನೂ ನಿಭಾಯಿಸುತ್ತಾರೆ.ಇಲ್ಲಿ ದ್ವಿಕೇಂದ್ರಿತ ಅಧಿಕಾರವಿರಬಾರದು ಎಂಬ ನಿಯಮವಿರುವ ಕಾರಣ ಭಾನುವಾರದ ಸಭೆಯಲ್ಲಿ ಶಾಸಕರೆಲ್ಲರೂ ಸೇರಿ ಶಶಿಕಲಾ ನಟರಾಜನ್‌ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಯಾಗುವ ಮುನ್ನ ಶಶಿಕಲಾ ನಟರಾಜನ್‌ ಪಕ್ಷದ ಯಾವುದೇ
ಹುದ್ದೆಯಲ್ಲಾಗಲಿ ಅಥವಾ ಸಕ್ರಿಯವಾಗಿ ರಾಜಕಾರಣಕ್ಕೆ ಇಳಿದಿರಲೇ ಇಲ್ಲ. ಅಲ್ಲದೆ ಸದ್ಯ ಅವರು
ವಿಧಾನಸಭೆಯ ಸದಸ್ಯರೂ ಅಲ್ಲ. ಆದರೆ ಇದೀಗ ಅವರನ್ನು ಸಿಎಂ ಮಾಡಿ, ಜಯಲಲಿತಾ ಸಾವಿನಿಂದ
ತೆರವಾಗಿರುವ ಅವರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ವಿಧಾನಸಭೆಗೆ ಪ್ರವೇಶಿಸುವಂತೆ ಮಾಡುವ
ಚಿಂತನೆ ಪಕ್ಷಕ್ಕಿದೆ ಎಂದು ಹೇಳಲಾಗಿದೆ.

ಶಶಿಕಲಾ ನಟರಾಜನ್‌, ಜನವರಿ ಅಂತ್ಯದಲ್ಲೇ ಸಿಎಂ ಗಾದಿಗೆ ಕುಳಿತುಕೊಳ್ಳಬೇಕಿತ್ತು. ಆದರೆ
ಜಲ್ಲಿಕಟ್ಟು ಕ್ರೀಡೆ ವಿವಾದ ಸಂಬಂಧ ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆಗಳು ಶುರುವಾದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ನೆನಗುದಿಗೆ ಬಿದ್ದಿತ್ತು.

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.