ಇಂದಿನಿಂದ ವಿಧಾನಮಂಡಲ ಅಧಿವೇಶನ 


Team Udayavani, Feb 6, 2017, 3:45 AM IST

170205kpn93.jpg

ಬೆಂಗಳೂರು: ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಭೀಕರ ಬರಗಾಲದ ನಡುವೆ ವಿಧಾನ ಮಂಡಲದ ಪ್ರಸಕ್ತ ಸಾಲಿನ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಚಾಲನೆ ನೀಡಲಿದ್ದಾರೆ.

ಇದರ ಬೆನ್ನಲ್ಲೇ ಬರ ನಿರ್ವಹಣೆಯಲ್ಲಿ ವೈಫ‌ಲ್ಯ, ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಅಕ್ರಮ ಮರಳು ಸಾಗಣೆ ಪ್ರಕರಣದಲ್ಲಿ ಲಕ್ಷ್ಮೇಶ್ವರ ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು ಮುಂತಾದ ಪ್ರಕರಣಗಳನ್ನು ಪ್ರಸ್ತಾಪಿಸಿ ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳೂ ಸಜ್ಜಾಗುತ್ತಿವೆ.

ಆದರೆ, ಕೇವಲ ಐದು ದಿನ ಮಾತ್ರ ಅಧಿವೇಶನ ನಡೆಯುತ್ತಿದ್ದು, ಈ ಪೈಕಿ ಮೊದಲ ದಿನ ರಾಜ್ಯಪಾಲರ ಭಾಷಣ ಮತ್ತು ಸಂತಾಪ ಸೂಚನೆಗೆ ಅವಕಾಶವಿದೆ. ಉಳಿದ ನಾಲ್ಕು ದಿನಗಳಲ್ಲಿ ಪ್ರಶ್ನೋತ್ತರ ಮತ್ತಿತರೆ ಕಲಾಪಗಳೊಂದಿಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು ವಂದನಾ ನಿರ್ಣಯ ಅಂಗೀಕರಿಸಬೇಕಾಗುತ್ತದೆ. ಇದರೊಂದಿಗೆ ಇತರೆ ವಿಚಾರಗಳೂ ಸೇರಿಕೊಳ್ಳುವುದರಿಂದ ಬರ ಪರಿಸ್ಥಿತಿ ಮತ್ತಿತರೆ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ಸಿಗುವುದಿಲ್ಲ. ಸರ್ಕಾರದ ವೈಫ‌ಲ್ಯತೆ ಜತೆಗೆ ಇದು ಕೂಡ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ, ಕಲಾಪದ ದಿನಗಳಲ್ಲಿ ಮಧ್ಯಾಹ್ನದ ನಂತರವೇ ನಿಲುವಳಿ ಸೂಚನೆ ಪ್ರಸ್ತಾವನೆ ಮಂಡಿಸಲು ನಿಯಮ ತಿದ್ದುಪಡಿ ಮಾಡಿರುವುದರಿಂದ ಮಧ್ಯಾಹ್ನದವರೆಗಿನ ಕಲಾಪ ಸುಗಮವಾಗಿ ನಡೆಯಬಹುದು. ನಂತರದಲ್ಲಿ ಬರ, ಕಾನೂನು ಸುವ್ಯವಸ್ಥೆ, ಅಕ್ರಮ ಮರಳು ಸಾಗಣೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸಲಿದ್ದು, ಇದು ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರಮುಖ ಪ್ರತಿಪಕ್ಷ ಬಿಜೆಪಿ ಸನ್ನದ್ಧವಾಗಿದ್ದರೆ, ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳು ಕಳೆದರೂ ಕೇಂದ್ರದಿಂದ ಪರಿಹಾರ ಬಾರದೇ ಇರುವ ಬಗ್ಗೆ ಪ್ರಸ್ತಾಪಿಸಿ, ಪ್ರತಿಪಕ್ಷ ಬಿಜೆಪಿಯ ಸದ್ದಡಗಿಸಲು ಆಡಳಿತಾರೂಢ ಕಾಂಗ್ರೆಸ್‌ ಮುಂದಾಗಿದೆ.

ಜೆಡಿಎಸ್‌ ಸಜ್ಜು
ಜೆಡಿಎಸ್‌ ಸಹ ವಿಧಾನಮಂಡಲ ಅಧಿವೇಶನದಲ್ಲಿ ಬರ ಪರಿಹಾರ ವೈಫ‌ಲ್ಯ ಕುರಿತು ಉಭಯ ಸದನಗಳಲ್ಲಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದೆ.ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಹಾಗೂ ಸರ್ಕಾರದ ನಿರ್ಲಕ್ಷ್ಯ ಕುರಿತು ಜಿಲ್ಲಾ ಮಟ್ಟದಲ್ಲಿ ತಂಡ ರಚಿಸಿ ವರದಿ ತರಿಸಿಕೊಂಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬರ ನಿರ್ವಹಣೆ ಹಾಗೂ ವೈಫ‌ಲ್ಯದ ಬಗ್ಗೆ ಅಂಕಿ-ಅಂಶಗಳ ಸಮೇತ ಸದನದ ಮುಂದಿಡಲು ತೀರ್ಮಾನಿಸಿದ್ದಾರೆ.

ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸಂದರ್ಭದಲ್ಲೇ ಬರ ನಿರ್ವಹಣೆ ವೈಫ‌ಲ್ಯ ಹಾಗೂ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟ, ಸಾಲಮನ್ನಾ ಬಗ್ಗೆ ಸರ್ಕಾರದ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಈ ಕುರಿತು ಉಭಯ ಸದನಗಳ ಪಕ್ಷದ ಸದಸ್ಯರಿಗೂ ಸೂಚನೆ ನೀಡಲಾಗಿದೆ.

ಈ ಮಧ್ಯೆ, ನೈಸ್‌ ಸಂಸ್ಥೆ ಹಗರಣದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಸೂಚನೆ ನೀಡಿದ್ದಾರೆ. ನೈಸ್‌ ವರದಿಗೆ ಸಂಬಂಧಿಸಿದಂತೆ ಸದನ ಸಮಿತಿ ವರದಿ, ಸರ್ಕಾರದ ಮುಂದಿನ ಕ್ರಮಕ್ಕೆ  ಒತ್ತಾಯಿಸುವದರ ಜತೆಗೆ ಆ ಸಂಸ್ಥೆಯ ಒಪ್ಪಂದವನ್ನೇ ರದ್ದುಗೊಳಿಸಲು ಆಗ್ರಹಿಸಬೇಕು ಎಂದು ತಾಕೀತು ಮಾಡಿದ್ದಾರೆ. ಹೀಗಾಗಿ, ನೈಸ್‌ ವಿಚಾರವನ್ನು ಜೆಡಿಎಸ್‌ ಪ್ರಮುಖವಾಗಿ ಪ್ರಸ್ತಾಪಿಸಲಿದೆ.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಎಲ್ಲಾ ವಿಚಾರಗಳನ್ನು ಪ್ರಸ್ತಾಪಿಸಲು ಅವಕಾಶವಿದ್ದು ಚರ್ಚೆಗೆ ಯಾವುದೇ ಪರಿಮಿತಿ ಇರುವುದಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವ ವಿಚಾರಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ.

ಅಧಿವೇಶನದಲ್ಲಿ ಇಂದೇನು?
ಬೆಳಗ್ಗೆ 10.55ಕ್ಕೆ ವಿಧಾನಸೌಧಕ್ಕೆ ಆಗಮಿಸಲಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು 11 ಗಂಟೆಗೆ ಸರಿಯಾಗಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಪಾಲರ ಭಾಷಣ ಮುಗಿದ ಬಳಿಕ ಸ್ವಲ್ಪ ಹೊತ್ತು ಕಲಾಪ ಮುಂದೂಡಿ ಮತ್ತೆ ಸೇರಲಾಗುತ್ತದೆ. ಮತ್ತೆ ಕಲಾಪ ಆರಂಭವಾದಾಗ ಕಾರ್ಯದರ್ಶಿಯವರು ವರದಿ ಮಂಡಿಸಲಿದ್ದು, ಬಳಿಕ ಸಂತಾಪ ಸೂಚನಾ ನಿರ್ಣಯ ಅಂಗೀಕರಿಸಿ ಸದನವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತದೆ.

ರಾಜಕೀಯ ಚರ್ಚೆಗೂ ವೇದಿಕೆ
ಅದಿವೇಶನದ ಕಾಲಾವಧಿ ಕಡಿಮೆ ಇದ್ದರೂ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸದನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿಚಾರದ ಗೊಂದಲ ಸರಿಪಡಿಸಿಕೊಂಡು ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪ ಒಂದಾಗಿರುವುದು. ಕಾಂಗ್ರೆಸ್‌ಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ರಾಜೀನಾಮೆ, ಜೆಡಿಎಸ್‌ನ ಅಮಾನತುಗೊಂಡ ಶಾಸಕರು ಕಾಂಗ್ರೆಸ್‌ನತ್ತ ಮುಖ ಮಾಡಿರುವುದು ಹೀಗೆ ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿ ಶಾಸಕರು ಪರಸ್ಪರ ಕಾಲೆಳೆದುಕೊಳ್ಳುವುದು ಖಚಿತ.

ಅಧಿವೇಶನದಲ್ಲಿ ಪ್ರತಿಪಕ್ಷಗಳ “ಅಸ್ತ್ರ’
– ಬರ ಪರಿಸ್ಥಿತಿ ನಿರ್ವಹಣೆ ಮತ್ತು ಪರಿಹಾರ ಕಾಮಗಾರಿಗಳಲ್ಲಿ ಸರ್ಕಾರದ ವೈಫ‌ಲ್ಯ
-ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಆಗ್ರಹ
– ಕಾನೂನು ಸುವ್ಯವಸ್ಥೆ ಪಾಲನೆ ವೈಫ‌ಲ್ಯ
– ನೈಸ್‌ ಅಕ್ರಮ ಕುರಿತ ಸದನ ಸಮಿತಿ ವರದಿ ಮೇಲೆ ಮುಂದಿನ ಕ್ರಮ
– ಅಕ್ರಮ ಮರಳು ಸಾಗಣೆ ಲಕ್ಷ್ಮೇಶ್ವರದಲ್ಲಿ ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು
– ಕಪ್ಪತಗುಡ್ಡವನ್ನು ಸಂರಕ್ಷಿತಾರಣ್ಯ ವ್ಯಾಪ್ತಿಯಿಂದ ಕೈಬಿಟ್ಟುವ ಸರ್ಕಾರದ ಕ್ರಮ

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.