ತಾಳಿ ಕಟ್ಟುವ ಮೊದಲೇ ವರ ಸಾವು; ಮದುವೆ ಸಿದ್ಧವಾಗುವಾಗಲೇ ಹೃದಯಾಘಾತ
Team Udayavani, Feb 6, 2017, 3:45 AM IST
ತುಮಕೂರು: ನವಜೀವನದ ಕನಸು ಕಾಣುತ್ತಾ ಕೆಲವೇ ಕ್ಷಣಗಳಲ್ಲಿ ಹಸಮಣೆ ಏರಬೇಕಿದ್ದ ವರ ಹೃದಯಾಘಾತದಿಂದ ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಗರದಲ್ಲಿ ಭಾನುವಾರ ನಡೆದಿದೆ. ಇದರಿಂದ ಮದುವೆ ಮನೆ ಶೋಕ ಸಾಗರದಲ್ಲಿ ಮುಳುಗಿ ಮದುವೆ ಮಂಟಪದಲ್ಲಿ ಸ್ಮಶಾನ ಮೌನ ಆವರಿಸಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದ ವಸಂತಕುಮಾರ್ (30) ಎಂಬಾತನೇ ಮೃತಪಟ್ಟ ದುರ್ದೈವಿ ವರ. ಈತನಿಗೆ ತುಮಕೂರು ತಾಲೂಕು ಹೆಗ್ಗರೆಯ ವಧುವಿನೊಂದಿಗೆ ಮದುವೆ ನಿಶ್ಚಯವಾಗಿತ್ತು. ವಧು ವರರಿಬ್ಬರು ಎಂ.ಟೆಕ್ ಪದವೀಧರರು. ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಆಗಿದ್ದೇನು?
ಮದುವೆ ಭಾನುವಾರ ನಿಗದಿಯಾಗಿತ್ತು. ಇದಕ್ಕಾಗಿ ನಗರದ ಹೊರವಲಯದಲ್ಲಿನ ಗವಿರಂಗ ಕಲ್ಯಾಣ ಮಂಟಪ ಕೂಡಾ ಭವ್ಯವಾಗಿಯೇ ಸಿಂಗಾರಗೊಂಡಿತ್ತು. ಶನಿವಾರ ರಾತ್ರಿ ಮದುಮಗ, ಮದುಮಗಳು ಸಂತೋಷವಾಗಿಯೇ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು. ಗೆಳೆಯರು, ಬಂಧುಗಳೊಂದಿಗೆ ಇಡೀ ರಾತ್ರಿ ಸಂತಸ ಸಂಭ್ರಮದಿಂದ ಇಬ್ಬರೂ ಎಲ್ಲರೊಂದಿಗೆ ಫೋಟೋ ವೀಡಿಯೋ ತೆಗೆಸಿಕೊಂಡು ಹರ್ಷದಿಂದಲೇ ರಾತ್ರಿ ಕಳೆದರು.
ಬೆಳಗ್ಗೆ 10ಕ್ಕೆ ವಿವಾಹ ಮುಹೂರ್ತವಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆ ವರಪೂಜೆಯೂ ಸಡಗರದಿಂದಲೇ ನಡೆದಿತ್ತು. ಬೆಳಗ್ಗೆ 8.30ರ ಸುಮಾರಿಗೆ ವರ ಸ್ನಾನ ಮುಗಿಸಿಕೊಂಡು ಹೊರ ಬಂದ. ಇನ್ನೇನು ಮದುವೆಗಾಗಿ ಸಿದ್ಧಗೊಳ್ಳುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದ. ಇದರಿಂದ ಆತಂಕಕ್ಕೀಡಾದ ಸಂಬಂಧಿಕರು ಕೂಡಲೇ ಆತನನ್ನು ನಗರದ ಟಿ.ಎಚ್.ಎಸ್.ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಾಗಲೇ ಆತನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಸಂಭ್ರಮದಲ್ಲಿದ್ದ ಕಲ್ಯಾಣ ಮಂಟಪದಲ್ಲಿ ಸ್ಮಶಾನ ಮೌನ ಆವರಿಸಿತು.
ಮದುವೆ ಸಂಭ್ರಮಕ್ಕೆ ಬಂದಿದ್ದ ನೆಂಟರಿಷ್ಟರು, ಗೆಳೆಯರು ವರನ ಅಂತ್ಯಸಂಸ್ಕಾರಕ್ಕೆ ಆತನ ಶವದೊಂದಿಗೆ ಗೌರಿಬಿದನೂರಿಗೆ ತೆರಳುವಂತಾಯಿತು. ವಧು ಹಾಗೂ ವರನ ಕಡೆಯ ಕುಟುಂಬಸ್ಥರ ರೋಧನ ಸೇರಿದ್ದವರ ಮನಕಲುವಂತಿತ್ತು. ಸಂತಸದಿಂದ ಇದ್ದ ಮಧುವೆ ಮನೆ ಕೆಲ ಕ್ಷಣದಲ್ಲೇ ಮಸಣವಾದಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.