ರಾಜ್ಯಪಾಲರ ಭಾಷಣದಲ್ಲೂ ನೋಟು ಅಮಾನ್ಯ ಪ್ರಸ್ತಾಪ?
Team Udayavani, Feb 6, 2017, 3:45 AM IST
ಬೆಂಗಳೂರು: ನೋಟು ಅಮಾನ್ಯದಿಂದ ಉಂಟಾಗಿರುವ ಸಮಸ್ಯೆಯನ್ನು ರಾಜ್ಯಪಾಲರ ಮಾತಿನಿಂದಲೇ ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹಾಗೂ ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿಯನ್ನು ವಿಧಾನಮಂಡಲದಲ್ಲಿ ಕೆಣಕುವ ರಾಜಕೀಯ ತಂತ್ರಗಾರಿಕೆಯನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹೆಣೆದಿದೆ.
ಇಂದಿನಿಂದ ಆರಂಭವಾಗುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ, ಮುಂದಿನ ವರ್ಷದಲ್ಲಿ ಕೈಗೊಳ್ಳಲಿರುವ ಅಭಿವೃದ್ಧಿಯ ಮುನ್ನೋಟದ ಜತೆಗೆ ನೋಟು ಅಮಾನ್ಯದಿಂದ ರಾಜ್ಯದ ಜನತೆ ಎದುರಿಸಿದ ಸಂಕಷ್ಟಗಳನ್ನು ಕೇಂದ್ರ ಸರ್ಕಾರದಿಂದಲೇ ನೇಮಕಗೊಂಡ ರಾಜ್ಯಪಾಲರ ಬಾಯಲ್ಲಿ ಹೇಳಿಸಿ ಆ ಮೂಲಕ ಬಿಜೆಪಿಗೆ ಮುಜುಗರಕ್ಕೀಡುಪಡಿಸುವ ಎಲ್ಲ ಸಾಧ್ಯತೆಗಳಿವೆ.
ನೋಟು ಅಮಾನ್ಯ ಪ್ರಕರಣದ ವಿರುದ್ಧವಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ ಕಾಂಗ್ರೆಸ್, ವಿಧಾನಮಂಡಲ ಅಧಿವೇಶನವನ್ನು ವೇದಿಕೆಯನ್ನಾಗಿಸಿ ನೋಟು ಅಮಾನ್ಯದಿಂದ ರಾಜ್ಯದ ಜನತೆ ಸಂಕಷ್ಟ ಎದುರಿಸುವಂತಾಗಲು ಬಿಜೆಪಿಯೇ ಕಾರಣ ಎಂಬುದನ್ನು ಬಿಂಬಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಧಿವೇಶನವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲಿದ್ದಾರೆ.
ಅಷ್ಟೇ ಅಲ್ಲ, ಅಧಿವೇಶನದಲ್ಲಿ ನೋಟು ಅಮಾನ್ಯ ಪ್ರಕರಣದ ನೆಪದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು, ಅದರಲ್ಲೂ ವಿಶೇಷವಾಗಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳ್‌ಕರ್, ಚಿಕ್ಕರಾಯಪ್ಪ, ಜಯಚಂದ್ರ ಅವರ ಮೇಲೆ ದಾಳಿ ನಡೆಸಿ ರಾಜ್ಯ ಸರ್ಕಾರದ ಮೇಲೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದ ಬಿಜೆಪಿ ಬಣ್ಣವನ್ನು ಸಹ ಜಂಟಿ ಅಧಿವೇಶನದಲ್ಲಿ ಬಯಲು ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಬರ ಸೇರಿ ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಕಪ್ಪು ಹಣ ಹೊಂದಿರುವ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗಾœಳಿ ನಡೆಸುವ ಮುನ್ನವೇ ರಾಜ್ಯಪಾಲರಿಂದಲೇ ನೋಟು ಅಮಾನ್ಯ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿಗೆ ತಿರುಗೇಟು ನೀಡುವ ರಾಜಕೀಯ ಚಾಣಾಕ್ಷತೆಯನ್ನು ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲೇ ಪ್ರಸ್ತಾಪಿಸುವ ಎಲ್ಲ ಲಕ್ಷಣಗಳು ಇವೆ.
ರಾಜ್ಯಪಾಲರೇ ನೋಟ್ ಬ್ಯಾನ್ ನಿಷೇಧವನ್ನು ಟೀಕಿಸುವ ಪರಿಸ್ಥಿತಿ ಬಂದಾಗ ಬಿಜೆಪಿ ಸಹ ಇದನ್ನು ಗಂಭೀರವಾಗಿ ಪರಿಗಣಿಸಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗಾœಳಿ ನಡೆಸುವ ಮತ್ತು ವಿಧಾನಮಂಡಲ ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸುವ ಎಲ್ಲ ಸಾಧ್ಯತೆಗಳು ಹೆಚ್ಚಾಗಿವೆ.
ನೋಟ್ ಬ್ಯಾನ್ ಜತೆಗೆ ಕೇಂದ್ರ ಸರ್ಕಾರದ ಪ್ರಾಯೋಜಕತ್ವದ ಯೋಜನೆಗಳಲ್ಲಿ ರಾಜ್ಯ ಸರ್ಕಾರಕ್ಕೆ ಅನುದಾನ ನೀಡುವಲ್ಲಿ ಮಧ್ಯಂತರವಾಗಿ ನಿಯಮಾವಳಿಗಳನ್ನು ಬದಲಾವಣೆ ಮಾಡಿದ ನರೇಂದ್ರಮೋದಿ ಸರ್ಕಾರವನ್ನು ಸಹ ಟೀಕಿಸುವ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸುವ ಸಂಭವವನ್ನೂ ತಳ್ಳಿಹಾಕುವಂತಿಲ್ಲ.
ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯಕ್ಕೆ ಹಲವಾರು ಯೋಜನೆಗಳಲ್ಲಿ ಅನುದಾನ ನೀಡಲು ಒಪ್ಪಿ ಮಧ್ಯಂತರ ಅವಧಿಯಲ್ಲಿ ಕೆಲವು ನಿಯಮಾವಳಿಗಳ ನೆಪವೊಡ್ಡಿ ಅನುದಾನ ನೀಡದೆ ವಂಚಿಸಿರುವ ಸಂಗತಿಯನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ನಿಲುವು ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಧ್ಯತೆಯಿದೆ..
ಕಾವೇರಿ, ಮಹದಾಯಿ, ಕೃಷ್ಣಾ ವಿವಾದ ಹಾಗೂ ತೀವ್ರ ಬರಗಾಲ ಕುರಿತು ಸಹ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಗೊಳ್ಳಲಿದ್ದು ಕಾವೇರಿ ಮತ್ತು ಮಹದಾಯಿ ವಿವಾದದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ಬದ್ಧತೆಯನ್ನು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಸತತ ಬರಗಾಲದ ಮಧ್ಯೆಯೂ ರಾಜ್ಯ ಸರ್ಕಾರ ಸಾಧನೆ ಮಾಡಿದ ಸಂಗತಿಗಳನ್ನು ರಾಜ್ಯಾಪಾಲರ ಭಾಷಣದಲ್ಲಿ ಹೇಳಲಾಗಿದೆ. ಅನ್ನಭಾಗ್ಯದಲ್ಲಿ 1 ಕೋಟಿಗೂ ಹೆಚ್ಚು ಜನರಿಗೆ ಪಡಿತರ ಹಂಚಿಕೆ, ಕ್ಷೀರಭಾಗ್ಯ, ಕೃಷಿ ಭಾಗ್ಯ, ಹಾಲಿನ ಪ್ರೋತ್ಸಾಹ ಧನ ಯಾವುದೇ ತೊಂದರೆ ಇಲ್ಲದೆ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದನ್ನು ಸಹ ರಾಜ್ಯಪಾಲರ ಭಾಷಣದಲ್ಲಿ ವಿವರಿಸಲಾಗಿದೆ.
50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಮತ್ತು ಕೃಷ್ಣಾ ಕಣಿವೆಯಲ್ಲಿ ನೀರಾವರಿ ಯೋಜನೆಗಳನ್ನು ಕಳೆದ ಮೂರು ವರ್ಷಗಳಲ್ಲಿ ಕೈಗೆತ್ತಿಕೊಂಡಿರುವುದು. ರಸ್ತೆ ಅಭಿವೃದ್ಧಿ, ಗ್ರಾಮೀಣಾಭಿವೃದ್ದಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 10 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಕೆ. ಸರ್ಕಾರದ ಅವಧಿಯಲ್ಲಿ ಹತ್ತು ಲಕ್ಷ ಕಡುಬಡವರಿಗೆ ವಸತಿ ನಿರ್ಮಿಸುವ ಯೋಜನೆಗಳನ್ನೂ ಸಹ ಸುದೀರ್ಘವಾಗಿ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಲಾಗಿದೆ.
ನಾಡು, ನುಡಿ, ನೆಲ,. ಜಲ ವಿವಾದಗಳಲ್ಲಿ ಯಾವುದೇ ರಾಜಿ ಇಲ್ಲದೆ ಕನ್ನಡ ನಾಡಿನ ಹಿತಾಸಕ್ತಿಯನ್ನು ಕಾಪಾಡುವ ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
– ಸೋಮಶೇಖರ ಕವಚೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.