ಬೆಳಗಾವಿಯಲ್ಲಿ ಪ್ರಥಮ ಇ-ಕೋರ್ಟ್
Team Udayavani, Feb 7, 2017, 3:45 AM IST
ಬೆಳಗಾವಿ: ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆಯ ಶ್ರಮ ಉಳಿಸಿ, ಸರ್ಕಾರದ ಮೇಲಿನ ಖರ್ಚು-ವೆಚ್ಚದ ಹೊರೆ ತಗ್ಗಿಸಲು ರಾಜ್ಯದಲ್ಲೇ ಮೊದಲ ಬಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲಿ ಇ- ಕೋರ್ಟ್ ಆರಂಭಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸತೀಶ ಸಿಂಗ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನ್ಯಾಯಾಲಯದ ವ್ಯಾಪ್ತಿಗೆ ಒಳಪಟ್ಟ ಪ್ರಕರಣಗಳ ಆರೋಪಿ ಯಾವುದೇ ಜೈಲಿನಲ್ಲಿರಲಿ, ಆತನನ್ನು ಅಲ್ಲಿಂದಲೇ ವಿಡಿಯೋ ಮೂಲಕ ವಿಚಾರಣೆ ಮಾಡಲಾಗುವುದು. ಫೆ. 10ರಂದು ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾ ವಿಚಾರಣೆಯನ್ನು ಇ- ಕೋರ್ಟ್ ಮೂಲಕ ನಡೆಸಲಾಗುವುದು.
ಇಂಥ ವಿಚಾರಣೆಯಿಂದ ನ್ಯಾಯಾಲಯಕ್ಕೆ ಭೂಗತ ಪಾತಕಿಗಳನ್ನು, ಕುಖ್ಯಾತ ಅಪರಾಧಿಗಳನ್ನು ಜೈಲಿನಿಂದ ತರುವಾಗ ಎದುರಿಸಬೇಕಾದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಅಲ್ಲದೆ, ಸರ್ಕಾರದ ಮೇಲಿನ ಖರ್ಚಿನ ಹೊರೆ ಕಡಿಮೆಯಾಗಲಿದೆ. ಸಮಯವೂ ಉಳಿಯಲಿದೆ ಎಂದರು.
ನ್ಯಾಯಾಲಯಗಳ ಮೇಲೆ ಈಗಾಗಲೇ ಸಾಕಷ್ಟು ಪ್ರಕರಣಗಳ ಹೊರೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ 1.10 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ತಂತ್ರಜ್ಞಾನದ ಬಳಕೆ ಮಾಡಿಕೊಂಡು ಭೂಗತ ಪಾತಕಿಗಳ ಪ್ರಕರಣಗಳನ್ನು ಜೈಲಿನಿಂದಲೇ ವಿಡಿಯೋ ಮೂಲಕ ವಿಚಾರಣೆ ಮಾಡಿದರೆ ಪ್ರಕರಣಗಳ ವಿಲೇವಾರಿ ತ್ವರಿತವಾಗಲೂ ಅನುಕೂಲವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.