ಕಾನ್ಪುರ ರೈಲು ದುರಂತ: ISI ಏಜಂಟ್‌ ಶಂಶೂಲ್‌ ಹುದಾ ಸಹಿತ ನಾಲ್ವರ ಸೆರೆ

Team Udayavani, Feb 7, 2017, 10:50 AM IST

Kanpur-Train-Accident1-600.jpg

ಕಾಠ್ಮಂಡು : ಕಳೆದ ನವೆಂಬರ್‌ನಲ್ಲಿ  150 ಜನರನ್ನು ಬಲಿತೆಗೆದುಕೊಂಡಿದ್ದ ಕಾನ್ಪುರ ರೈಲು ಹಳಿ ತಪ್ಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈಯಿಂದ ಗಡೀಪಾರು ಮಾಡಲ್ಪಟ್ಟ  ಓರ್ವ ಪ್ರಮುಖ ಆರೋಪಿಯನ್ನು ಇಲ್ಲಿನ ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಬಂಧಿಸಲಾಗಿದೆ.

ನೇಪಾಲ ಪೊಲೀಸ್‌ನ ವಿಶೇಷ ತಂಡದವರು ಆರೋಪಿ ಶಂಶೂಲ್‌ ಹುದಾ ಮತ್ತು ಇತರ ಮೂವರನ್ನು ಬಂಧಿಸಿದ್ದಾರೆ.

ಹೂಡಾನನ್ನು ನಿನ್ನೆ ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತೆದು ಡಿಐಜಿ ಪಶುಪತಿ ಉಪಾಧ್ಯಾಯ ತಿಳಿಸಿದ್ದಾರೆ.

ನೂರೈವತ್ತು ಮಂದಿಯನ್ನು ಬಲಿತೆಗೆದುಕೊಂಡಿದ್ದ ಕಳೆದ ನವೆಂಬರ್‌ನ ಕಾನ್ಪುರ ರೈಲು ಹಳಿ ತಪ್ಪಿಸಲಾದ ಘಟನೆಗೆ ಸಂಬಂಧಿಸಿ ಆರೋಪಿ ಶಂಶೂಲ್‌ ಹುದಾ ಭಾರತದ ಪೊಲೀಸರಿಗೆ ಬೇಕಾದವನಾಗಿದ್ದ ಎಂಬುದನ್ನು ನಾವು ಕೇಳಿದ್ದೆವು; ಭಾರತದಲ್ಲಿನ ಹಲವು ವಿಧ್ವಂಸಕ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಹೂಡಾ ಶಾಮೀಲಾಗಿರುವ ಸಾಧ್ಯತೆಗಳನ್ನು ಬಯಲಿಗೆಳೆಯುವ ತನಿಖೆಯಲ್ಲಿ ನೇಪಾಲ ಪೊಲೀಸರು ಭಾರತೀಯ ಪೊಲೀಸರೊಂದಿಗೆ ನಿಕಟವಾಗಿ ಕೆಲಸ ಮಾಡಲಿದ್ದಾರೆ ಎಂದು ಉಪಾಧ್ಯಾಯ ಹೇಳಿದರು. 

ಶಂಶೂಲ್‌ ಹುದಾ ಜತೆಗೆ ಸೆರೆಯಾಗಿರುವ ಇತರ ಮೂವರೆಂದರೆ ಬೃಜ್‌ ಕಿಶೋರ್‌ ಗಿರಿ, ಆಶಿಷ್‌ ಸಿಂಗ್‌ ಮತ್ತು ಉಮೇಶ್‌ ಕುಮಾರ್‌ ಕೂರ್ಮಿ. ಇವರೆಲ್ಲರೂ ದಕ್ಷಿಣ ನೇಪಾಲದ ಕಲಯ್ಯ ಜಿಲ್ಲೆಯವರರು.

ಶಂಶೂಲ್‌ ಹುದಾ ಸೇರಿದಂತೆ ಒಟ್ಟು ನಾಲ್ವರು ಪ್ರಮುಖ ಆರೋಪಿಗಳನ್ನು ಇಂಟರ್‌ಪೋಲ್‌ ನೆರವಿನೊಂದಿಗೆ ದುಬೈನಿಂದ ನೇಪಾಲಕ್ಕೆ ಪೊಲೀಸರು ಕರೆತಂದಿದ್ದರು. 

ಶಂಶೂಲ್‌ ಹುದಾ ನೇಪಾಲದ ಬಾರಾ ಜಿಲ್ಲೆಯಲ್ಲಿ ನಡೆದಿದ್ದ ಅವಳಿ ಕೊಲೆ ಕೇಸಿನ mastermind ಅಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹೂಡಾಗೆ ಅಂತಾರಾಷ್ಟ್ರೀಯ ಕ್ರಿಮಿನಲ್‌ ಗ್ಯಾಂಗ್‌ಗಳೊಂದಿಗೆ ನಂಟು ಇದೆ; ಈತ ನೇಪಾಲ ಮತ್ತು ಭಾರತದಲ್ಲಿ ಹಲವಾರು ಕ್ರಿಮಿನಲ್‌ ಕೃತ್ಯಗಳಲ್ಲಿ ಶಾಮೀಲಾಗಿದ್ದಾನೆ ಎಂದು ಡಿಐಜಿ ಉಪಾಧ್ಯಾಯ ತಿಳಿಸಿದರು. 

ಕಾನ್ಪುರ ರೈಲು ಹಳಿ ತಪ್ಪಿಸಲಾದ ವಿಧ್ವಂಸಕ ಕೃತ್ಯದಲ್ಲಿ ಪಾಕಿಸ್ಥಾನದ ಐಎಸ್‌ಐ ಕೈವಾಡ ಇರುವುದನ್ನು ಶಂಕಿಸಲಾಗಿದೆ. ಈ ಸಂಬಂಧ ಬಿಹಾರ ಪೊಲೀಸರು ಜನವರಿಯಲ್ಲಿ ಮೂವರು ಶಂಕಿತರನ್ನು ಬಂಧಿಸಿದ್ದರು. ಈ ಬಂಧಿತರು ತಾವು ಪಾಕ್‌ ಐಎಸ್‌ಐ ಗುಪ್ತಚರ ಸಂಸ್ಥೆಯ ಆಣತಿಯ ಮೇರೆಗೆ ಭಾರತೀಯ ರೈಲ್ವೇಯನ್ನು ಗುರಿ ಇರಿಸಿ ರೈಲು ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದಾಗಿ ತನಿಖೆಯಲ್ಲಿ ಬಾಯಿಬಿಟ್ಟಿದ್ದರು. 

ಬಿಹಾರ ಪೊಲೀಸರ ಪ್ರಕಾರ ಪಾಕ್‌ ಐಎಸ್‌ಐ ನಂಟು ಹೊಂದಿರುವ ಮೂವರು ಬಂಧಿತರಿಗೆ ನೇಪಾಲೀ ವ್ಯಕ್ತಿಯೋರ್ವ ತಲಾ ಮೂರು ಲಕ್ಷ ರೂ. ಕೊಟ್ಟಿದ್ದಾನೆ. ಈ ನೇಪಾಲಿ ವ್ಯಕ್ತಿಗೆ ಬಂಧಿತ ಆರೋಪಿ ಶಂಶೂಲ್‌ ಹುದಾ ಜತೆಗೆ ನಂಟಿದೆ ಎಂದು ಬಿಹಾರ ಪೊಲೀಸರು ಹೇಳಿದ್ದಾರೆ. 

ಟಾಪ್ ನ್ಯೂಸ್

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.