ಕೊಳಗೇರಿ ನಿವಾಸಿಗಳಿಗೆ ಸೂರು ಕಲ್ಪಿಸುವ ಬಗ್ಗೆ ಸಚಿವರ ಚರ್ಚೆ
Team Udayavani, Feb 7, 2017, 12:13 PM IST
ಬೆಂಗಳೂರು: ಕೊಳಗೇರಿಗಳ ನಿವಾಸಿಗಧಿಳಿಗೆ ಮನೆ ಕಟ್ಟಿಕೊಡುವ ವಿಚಾರವಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ವಸತಿ ಸಚಿವ ಎಂ.ಕೃಷ್ಣಪ್ಪ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬೆಂಗಳೂರು ಮಹಾನಗರ ಪ್ರದೇಶಾಧಿಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ವಸತಿ ಇಲಾಖೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಇಬ್ಬರು ಸಚಿವರು, ಕೊಳಗೇರಿಗಳ ನಿವಾಸಿಗಳು ಮತ್ತು ವಸತಿ ರಹಿತರಿಗೆ ವಸತಿ ಇಲಾಖೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1 ಲಕ್ಷ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಮರ್ಪಕ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವ ಜಾರ್ಜ್ ಮಾತನಾಡಿ, “ನಗರದ ನಾನಾ ಭಾಗದ ಕೊಳಗೇರಿ ನಿವಾಸಿಗಳ ಸ್ಥಿತಿ ಶೋಚನೀಯವಾಗಿದೆ. ಹಾಗಾಗಿ ಅವರಿಗೆ ಸೂಕ್ತ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧರಿಸಿದೆ. 1 ಲಕ್ಷ ಮನೆಗಳನ್ನು ನಿರ್ಮಿಸಿಕೊಡಲು ಉದ್ದೇಶಿಸಲಾಗಿದ್ದು, ಇದಕ್ಕೆ ಸೂಕ್ತ ಯೋಜನೆ ರೂಪಿಸಿಕೊಡಿ. ಯೋಜನೆಯಿಂದ ನಗರದ 597 ಕೊಳಗೇರಿಗಳ ನಿವಾಸಿಗಳಿಗೆ ಸುಸಜ್ಜಿತ ಸ್ವಂತ ಮನೆಗಳು ದೊರೆಯಲಿವೆ,” ಎಂದು ತಿಳಿಸಿದರು.
ಅಲ್ಲದೆ, “ಬಿಬಿಎಂಪಿಯಿಂದ ಒಂಟಿ ಮನೆ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಳ್ಳಲು ನೀಡಲಾಗುತ್ತಿರುವ 4 ಲಕ್ಷ ರೂ. ಹಣ ಅರ್ಹರಿಗೆ ಸಿಗುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ, ಅರ್ಹರಿಗೆ ಮಾತ್ರ ಈ ಹಣ ದೊರೆಯುವಂತೆ ನೋಡಿಕೊಳ್ಳಿ,” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಗೃಹಮಂಡಳಿ ಅಧ್ಯಕ್ಷ ಮಾಲಿಕಯ್ಯ ಗುತ್ತೇದಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ವಿ. ದೇವರಾಜ್, ಮೇಯರ್ ಜಿ. ಪದ್ಮಾವತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.