ಬೆಂವಿವಿ ಹಂಗಾಮಿ ಕುಲಪತಿ ಜೆಪಿ


Team Udayavani, Feb 7, 2017, 12:14 PM IST

Hangami-kulapati-jp.jpg

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ.ಬಿ.ತಿಮ್ಮೇಗೌಡ ಅವರು ಸೋಮವಾರ ನಿವೃತ್ತಿಯಾಗಿದ್ದು, ತೆರವಾದ ಸ್ಥಾನಕ್ಕೆ ಹಂಗಾಮಿ ಕುಲಪತಿಯಾಗಿ ವಿವಿಯ ಹಿರಿಯ ಡೀನ್‌, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಜಗದೀಶ್‌ ಪ್ರಕಾಶ್‌ ಅವರನ್ನು ನೇಮಿಸಿ ರಾಜ್ಯಪಾಲರು ಆದೇಶಿಸಿದ್ದಾರೆ. 

ಆದೇಶದ ಬೆನ್ನಲ್ಲೇ ಜಗದೀಶ್‌ ಪ್ರಕಾಶ್‌ ಸೋಮವಾರ ಜ್ಞಾನಭಾರತಿ ಕ್ಯಾಂಪಸ್‌ನ ವಿವಿಯ ಆಡಳಿತ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು, ನಿರ್ಗಮಿತ ಕುಲಪತಿ ಡಾ.ಬಿ.ತಿಮ್ಮೇಗೌಡ ಅವರು ಅಧಿಕಾರ ಹಸ್ತಾಂತರಿಸಿದರು. 

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ನಿಯಮಾವಳಿ ಪ್ರಕಾರ ಯಾವುದೇ ವಿವಿಯ ಕುಲಪತಿ ಹುದ್ದೆ ತೆರವಾದಾಗ ಪೂರ್ಣಾವಧಿ ಕುಲಪತಿ ನೇಮಕವಾಗುವವರೆಗೆ ವಿವಿಯ ಹಿರಿಯ ಡೀನ್‌ ಹಂಗಾಮಿ ಕುಲಪತಿಯಾಗಿ ನೇಮಕವಾಗುತ್ತಾರೆ. ಅದರಂತೇ ಜಗದೀಶ್‌ ಪ್ರಕಾಶ್‌ ನೇಮಕವಾಗಿದ್ದಾರೆ. ಜೆಪಿ ವಿರುದ್ಧ ವ್ಯಾಪಕ ಅಪಸ್ವರ : ಪ್ರೊ.ಜಗದೀಶ್‌ ಪ್ರಕಾಶ್‌ ಅವರ ನೇಮಕಕ್ಕೆ ವಿವಿಯ ಪ್ರಾಧ್ಯಾಪಕರ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬರುತ್ತಿವೆ. 

“ಅವರು ಹಿರಿಯ ಡೀನ್‌ ಆಗಿರಬಹುದು. ಪಿಎಚ್‌ಡಿ ಪೂರ್ಣಗೊಳಿಸಿದ್ದು ಇತ್ತೀಚಿಗೆ. ಅಲ್ಲದೆ, ಅವರ ಮಾರ್ಗದರ್ಶನಲ್ಲಿನ ಪಿಎಚ್‌ಡಿ ವಿದ್ಯಾರ್ಥಿಗಳ ಸಂಖ್ಯೆ ಬೆರಳೆಣಿಕೆಯಷ್ಟೂ ಇಲ್ಲ. ಇನ್ನು ಪೇಪರ್‌ ಪಬ್ಲಿಕೇಷನ್‌, ರಿಸರ್ಚ್‌ ಪಬ್ಲಿಕೇಷನ್‌ಗಳನ್ನು ಪ್ರಕಟಿಸಿರುವುದೂ ಅಷ್ಟಕ್ಕಷ್ಟೆ. ಅಲ್ಲದೆ, ಮುಂದಿನ ತಿಂಗಳಾಂತ್ಯಕ್ಕೆ ನಿವೃತ್ತಿಯಾಗಲಿದ್ದಾರೆ. ಶೈಕ್ಷಣಿಕವಾಗಿ ಹೆಚ್ಚು ಸಾಧನೆ ಮಾಡಿರುವ ಸಾಕಷ್ಟು ಹಿರಿಯ ಡೀನ್‌ಗಳು ವಿವಿಯಲ್ಲಿದ್ದರು. ಅವರಿಗೆ ಹುದ್ದೆ ನೀಡಬಹುದಿತ್ತು,” ಎಂಬ ಮಾತು ವಿವಿಯ ಆವರಣದಲ್ಲಿ ಕೇಳಿಬರುತ್ತಿದೆ.

ಹಂಗಾಮಿ ಕುಲಪತಿಗಳ ನೇಮಕ ನಿಯಮಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ. ಕೇವಲ ಶೈಕ್ಷಣಿಕ ವರ್ಷದ ದಾಖಲೆಗಳ ಹಿರಿತನ ಪರಿಗಣಿಸಿ ನೇಮಕಾತಿ ನಡೆಯಬಾರದು. ಶೈಕ್ಷಣಿಕ ಸಾಧನೆಯ ಅರ್ಹತೆಯನ್ನು ಪರಿಗಣಿಸಬೇಕಾಗುತ್ತದೆ ಎಂದು ವಿವಿಯ ಹಿರಿಯ ಪ್ರಾಧ್ಯಾಪಕರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.