ಹೆಜಮಾಡಿ ಟೋಲ್ಗೇಟ್ ಮಾತು ತಪ್ಪಿದರೆ ಜಿಲ್ಲೆ ಬಂದ್; ಸೊರಕೆ
Team Udayavani, Feb 9, 2017, 3:45 AM IST
ಪಡುಬಿದ್ರಿ: ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶಿಸಿದಂತೆ ಹೆದ್ದಾರಿ ಚತುಷ್ಪಥ ಕಾಮಗಾರಿ ಸಮೀಕ್ಷೆ ನಡೆಸಿದ್ದರೆ ಆ ಸಮೀಕ್ಷಾ ವರದಿಯನ್ನು ಸಾರ್ವಜನಿಕರ ಮುಂದಿರಿಸಬೇಕು. ಸರ್ವೀಸ್ ರಸ್ತೆ, ಚರಂಡಿ ವ್ಯವಸ್ಥೆ, ಬಸ್ ತಂಗುದಾಣ, ಹಸಿರ ಹೊದಿಕೆಗಳಂತಹ ಅಪೂರ್ಣ, ಅವೈಜ್ಞಾನಿಕ ಕಾಮಗಾರಿಗಳನ್ನು ನವಯುಗ ನಿರ್ಮಾಣ ಕಂಪೆನಿ ಪೂರ್ಣಗೊಳಿಸಬೇಕು. ಆ ಬಳಿಕಷ್ಟೇ ಹೆಜಮಾಡಿ ಟೋಲ್ ಸಂಗ್ರಹ ಕಾರ್ಯ ಆರಂಭಿಸಬೇಕು. ಎಲ್ಲಾದರೂ ಮಾತಿಗೆ ತಪ್ಪಿದಲ್ಲಿ ತಾನು ಜಿಲ್ಲಾ ಬಂದ್ಗೆ ಕರೆ ನೀಡುವುದಾಗಿ ಕಾಪು ಶಾಸಕ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.
ಅವರು ಬುಧವಾರ ಹೆಜಮಾಡಿಯ ಟೋಲ್ಗೇಟ್ನಲ್ಲಿ ಟೋಲ್ ಸಂಗ್ರಹಿಸುವ ಹುನ್ನಾರದ ವಿರುದ್ಧ ಸಾರ್ವಜನಿಕರ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಇಲ್ಲಿನ ಸಮಸ್ಯೆ ಕುರಿತು ತಾನು ರಾಜ್ಯ ಲೋಕೋಪಧಿಯೋಗಿ ಸಚಿವರು ಹಾಗೂ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ಅಗತ್ಯ ಬಿದ್ದಲ್ಲಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲೂ ಈ ವಿಚಾರ ಎತ್ತುವುದಾಗಿ ಶಾಸಕ ಸೊರಕೆ ತಿಳಿಸಿದರು.
ಒಗ್ಗೂಡಿ ಹೋರಾಟ
ಸಭೆ ಉದ್ದೇಶಿಸಿ ಪಂ.ಪ್ರ. ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಮಾತಾಡಿ, ಬಲಾತ್ಕಾರವಾಗಿ ಟೋಲ್ ಸಂಗ್ರಹಕ್ಕೆ ನವಯುಗ ನಿರ್ಮಾಣ ಕಂಪೆನಿ ಮುಂದಾದಲ್ಲಿ ಜಿಲ್ಲೆಯ ಎಲ್ಲ ಪಂಚಾಯತ್ ಪ್ರತಿನಿಧಿಗಳು ಸಂಘಟಿತರಾಗಿ ಮುಂದಿನ ಪ್ರತಿಭಟನೆಯಲ್ಲಿ ಭಾಗವಹಿಸಲಿರುವರು ಎಂದರು. ಕಾಪು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮಾಹಿತಿ ಹಕ್ಕುಗಳ ಪ್ರಕಾರ ಹೆದ್ದಾರಿ ಕಾಮಗಾರಿಗಳು ನಿಗದಿತ ಪ್ರಮಾಣದಲ್ಲಿ ಆಗಿಲ್ಲ ಎಂದು ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ತಾ| ಕೆಡಿಪಿ ಸದಸ್ಯ ಅಬ್ದುಲ್ ಹಮೀದ್, ಹೆಜಮಾಡಿ ನಾಗರಿಕ ಸಮಿತಿ ಅಧ್ಯಕ್ಷ ಗುಲಾಂ ಮೊಹಮ್ಮದ್ ಸಹಿತ ವಿವಿಧ ಸಂಘಟನೆಗಳ ಮುಖ್ಯಸ್ಥರು, ತಾ.ಪಂ. ಸದಸ್ಯರು, ಜನಪ್ರತಿನಿಗಳು ಹೆಜಮಾಡಿಯಲ್ಲಿ ನಡೆದಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗಿಗಳಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.