ಕೆಜಿಎಫ್ನಲ್ಲಿ ನಗರದ ತ್ಯಾಜ್ಯ ವಿಲೇವಾರಿ ಇಲ್ಲ
Team Udayavani, Feb 9, 2017, 11:32 AM IST
ವಿಧಾನಸಭೆ: ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕೋಲಾರ ಜಿಲ್ಲೆ ಕೆಜಿಎಫ್ನಲ್ಲಿರುವ ಬೆಮೆಲ್ ಕಂಪೆನಿ ವ್ಯಾಪ್ತಿಯಲ್ಲಿ ಸುರಿಯಲು ಸರ್ಕಾರ ಉದ್ದೇಶಿಸಿದೆ ಎಂಬ ಊಹಾಪೋಹಗಳನ್ನು ಬೆಂಗಳೂರು ನಗರಾಭಿವೃದ್ ಸಚಿವ ಕೆ.ಜೆ.ಜಾರ್ಜ್ ತಳ್ಳಿಹಾಕಿದ್ದಾರೆ. ಅಲ್ಲದೆ, ಈ ವರೆಗೆ ಯಾವುದೇ ಜಾಗ ಗುರುತಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಕೆಜಿಎಫ್ ಶಾಸಕಿ ವೈ.ರಾಮಕ್ಕ ಅವರು ಬುಧವಾರ, “ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕೆಜಿಎಫ್ ಬಳಿ ಸುರಿಯಲು ಉದ್ದೇಶಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿ ತ್ಯಾಜ್ಯ ಸುರಿದರೆ ಗ್ರಾಮೀಣ ಪರಿಸರ ನಾಶವಾಗುವುದರ ಜತೆಗೆ ರೋಗ, ರುಜಿನಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ,” ಎಂದು ಸದನದಲ್ಲಿ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, “ಬೆಂಗಳೂರಿನಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ಉದ್ದೇಶದಿಂದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ವತಿಯಿಂದ ಪರಿಸರ ಸ್ನೇಹಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸುವ ಉದ್ದೇಶವಿದೆ. ಇದಕ್ಕಾಗಿ ಬೆಂಗಳೂರಿನ ಹೊರವಲಯದಲ್ಲಿ ಒಂದು ಸಾವಿರ ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರ ಸೂಚಿಸಿದೆ.
ಜನವಸತಿಯಿಂದ ಬಹಳಷ್ಟು ದೂರವಿರುವ ಬರಡು ಭೂಮಿ ಪತ್ತೆಹಚ್ಚಿ ರೈತರಿಗೆ ಭೂಸ್ವಾಧೀನ ಕಾಯ್ದೆಯನ್ವಯ ಪರಿಹಾರ ನೀಡಿ ಘಟಕ ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಈವರೆಗೂ ಯಾವುದೇ ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯಲ್ಲಿ ಜಮೀನು ಗುರುತಿಸಿಲ್ಲ ಮತ್ತು ಭೂಸ್ವಾಧೀನವೂ ಆಗಿಲ್ಲ,” ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.