ವಿದ್ಯೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ
Team Udayavani, Feb 9, 2017, 12:27 PM IST
ಕಲಬುರಗಿ: ಇವತ್ತು ಎಲ್ಲಕ್ಕಿಂತ ಶ್ರೇಷ್ಠವಾದ ಆಸ್ತಿ ವಿದ್ಯೆ. ಅದನ್ನು ಯಾರೂ ಹಾಳು ಮಾಡಲು ಮತ್ತು ಕದಿಯಲು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಕಲಿಕಾ ಜೀವನದಲ್ಲಿ ಉತ್ತಮ ಕಲಿಕೆ ಮೂಲಕ ಒಳ್ಳೆಯ ಆಸ್ತಿ ಸಂಪಾದಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ವಿ.ಪಾಟೀಲ ಹೇಳಿದರು.
ಇಲ್ಲಿನ ಸಿದ್ದೇಶ್ವರ ಡಿವೈನ್ ಪ್ಯಾಲೇಸ್ ಕೋಟನೂರುನಲ್ಲಿ ಶ್ರೀರಾಮ ಟ್ರಾನ್ಸ್‌ಪೊàರ್ಟ್ ಫೈನಾನ್ಸ್ ಪ್ರಾದೇಶಿಕ ಕಚೇರಿ ಹಮ್ಮಿಕೊಂಡಿದ್ದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಘ, ಸಂಸ್ಥೆಗಳು ಹಾಗೂ ಫೈನಾನ್ಸ್‌ನವರು ಸಮಾಜದಿಂದಲೇ ಹಣವನ್ನು ಗಳಿಸುತ್ತಾರೆ.
ಅಂಹತ ಹಣದಲ್ಲಿ ಸ್ವಲ್ಪವನ್ನು ಪುನಃ ಸಮಾಜದ ಒಳಿತಾಗಿ ಖರ್ಚು ಮಾಡುವುದು ಉತ್ತಮ ನಡೆಯಾಗಿದೆ. ಇದನ್ನು ಎಲ್ಲಾ ಸಂಸ್ಥೆಗಳು, ಸಂಘಗಳು ಅನುಸರಿಸಬೇಕು. ಇದರಿಂದ ಸಮಾಜದ ಪ್ರತಿ ಜವಾಬ್ದಾರಿ ಬೆಳೆಯುತ್ತದೆ. ಜನರು ಕೂಡ ಬಹುಕಾಲದವರೆಗೆ ಇಂತಹ ಸಂಸ್ಥೆಯೊಂದಿಗೆ ವ್ಯವಹಾರ ಮಾಡಲು ಇಚ್ಛೆ ಪಡುತ್ತಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ಫೈನಾನ್ಸ್‌ನ ವಿಭಾಗೀಯ ಬಿಜಿನೆಸ್ ಮುಖ್ಯಸ್ಥ ಪಂಚಾಕ್ಷರಪ್ಪ ಜಿ. ಮಾತನಾಡಿ, ವಾಹನ ಚಾಲಕರು ಹಾಗೂ ಮಾಲೀಕರ ಮಕ್ಕಳಿಗೆ ನಮ್ಮ ಸಂಸ್ಥೆಯಿಂದ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು 3 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಆಳಂದ, ಶಹಾಬಾದ, ಸೇಡಂ ಶಾಖೆಗಳಿಂದ ಒಟ್ಟು 60ಕ್ಕಿಂತ ಹೆಚ್ಚು ಅಂಕ ಪಡೆದ 790 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗಿದೆ ಎಂದರು.
ಸಾರಿಗೆ ಆಯುಕ್ತ ಸಿದ್ದಪ್ಪ ಎಸ್.ಕಲ್ಲೇರ್, ಲಾರಿ ಮಾಲಿಕರ ಸಂಘದ ಅಧ್ಯಕ್ಷ ಮಹಮ್ಮದ್ ಮೈನೋದ್ದಿನ್, ಉದ್ದಿಮೆದಾರ ರಾಮಚಂದ್ರ ಟಿ.ರಘೋಜಿ, ಗುತ್ತಿಗೆದಾರರ ದಯಾನಂದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮೌನೇಶ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಸಂಸ್ಥೆಯ ಸಿಬ್ಬಂದಿ ಇದ್ದರು. ಶಿವಕುಮಾರ ಹುಜರತಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.