ಪ್ರೀತಿ ಪ್ರೇಮ ಮತ್ತು ಬದನೆಕಾಯಿ


Team Udayavani, Feb 10, 2017, 3:45 AM IST

Preethi-Prema-(10).jpg

ಹುಡುಗ, ಹುಡುಗಿ ಇಬ್ಬರೂ ಪ್ರೀತಿಯನ್ನು ಹುಡುಕಿಕೊಂಡು ಹೋಗುವ ಕಥೆ ಇದು. ಲವ್‌, ಕಾಮಿಡಿ ಎಲ್ಲವೂ ಇದೆ ಈ ಚಿತ್ರದಲ್ಲಿ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗಿದೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ.

“ಪ್ರೀತಿ ಪ್ರೇಮ ಅನ್ನೋದೆಲ್ಲಾ ಬರೀ ಪುಸ್ತಕದ ಬದನೆಕಾಯಿ …’
ಇಂಥದ್ದೊಂದು ಡೈಲಾಗ್‌ನ್ನು ಉಪೇಂದ್ರ ಯಾವತ್ತೋ ಹೇಳಿದ್ದಾಯಿತು, ಚಪ್ಪಾಳೆ ಗಿಟ್ಟಿಸಿದ್ದೂ ಆಯಿತು. ಈಗಲೂ ಇದು ಕನ್ನಡ ಚಿತ್ರರಂಗದ ಜನಪ್ರಿಯ ಸಂಭಾಷಣೆಗಳಲ್ಲೊಂದು. ಈ ವಾಕ್ಯವೇ ಈಗ ಚಿತ್ರದ ಹೆಸರಾಗಿದೆ. ಚಿತ್ರದ ಹೆಸರು “ಪ್ರೀತಿ ಪ್ರೇಮ’ವಾದರೆ, “ಬರೀ ಪುಸ್ತಕದ ಬದನೆಕಾಯಿ’ ಎಂಬ ಕ್ಯಾಪ್ಷನ್‌ ಈ ಚಿತ್ರಕ್ಕಿದೆ. ಈ ಚಿತ್ರ ಮುಂದಿನ ವಾರ ಬಿಡುಗಡೆಯಾಗಲಿಕ್ಕಿದೆ ಮತ್ತು ಬಿಡುಗಡೆಯಾಗುವುದಕ್ಕಿಂತ ಮುನ್ನ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಅಂದು ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಖಜಾಂಚಿ ಜಯರಾಜ್‌, ಉದಯ್‌ ಮೆಹ್ತಾ ಮುಂತಾದವರು ಇದ್ದರು.

ಈ ಚಿತ್ರವನ್ನು ನಿರ್ಮಿಸಿರುವುದು ಕೃಷ್ಣ ಚೈತನ್ಯ. ಆಂಧ್ರ ಮೂಲದ ಚೈತನ್ಯ, ಕನ್ನಡದಲ್ಲಿ ಚಿತ್ರ ನಿರ್ಮಿಸುತ್ತಿರುವುದಷ್ಟೇ ಅಲ್ಲ, ತೆಲುಗಿನಲ್ಲಿ ಯಶಸ್ವಿಯಾದ “ಆ ರೋಜುಲು’ ಎಂಬ ಚಿತ್ರವನ್ನು ಕನ್ನಡಕ್ಕೆ ತಂದಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ. ಇನ್ನು “ನನ್‌ ಲವ್‌ ಟ್ರ್ಯಾಕ್‌’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ನಿಧಿ ಕುಶಾಲಪ್ಪ ಈ ಚಿತ್ರದ ನಾಯಕಿ. ಇದಕ್ಕೂ ಮುನ್ನ ಹಲವು ಚಿತ್ರಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಕಾಶಿ, ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಚಿತ್ರತಂಡದವರು ಪುನೀತ್‌, ಶಿವರಾಜಕುಮಾರ್‌ ಮತ್ತು ಸುದೀಪ್‌ ಅವರಿಂದ ಒಂದೊಂದು ಹಾಡುಗಳನ್ನು ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ. ಹಾಗೆ ಬಿಡುಗಡೆ ಮಾಡಿಸಿದ ಹಾಡುಗಳನ್ನು ತೋರಿಸಿ ಚಿತ್ರತಂಡದವರು ಮಾತು ಶುರು ಮಾಡಿದರು. ಈ ಚಿತ್ರಕ್ಕೆ, ಆ ಹೆಸರು ಬಹಳ ಸೂಕ್ತವಾಗಿತ್ತು ಎನ್ನುತ್ತಲೇ ಮಾತು ಶುರು ಮಾಡಿದರು ಕಾಶಿ. ಆ ಹೆಸರನ್ನು ಹೇಳಿದ್ದು ಉದಯ್‌ ಎಂಬ ಅಸೋಸಿಯೇಟ್‌ ಅಂತೆ. “ಹುಡುಗ, ಹುಡುಗಿ ಇಬ್ಬರೂ ಪ್ರೀತಿಯನ್ನು ಹುಡುಕಿಕೊಂಡು ಹೋಗುವ ಕಥೆ ಇದು. ಲವ್‌, ಕಾಮಿಡಿ ಎಲ್ಲವೂ ಇದೆ ಈ ಚಿತ್ರದಲ್ಲಿ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗಿದೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. “ಚಂದ್ರಲೇಖ’ ಚಿತ್ರಕ್ಕೆ ಕ್ಯಾಮೆರಾಮ್ಯಾನ್‌ ಆಗಿದ್ದ ರವಿಕುಮಾರ್‌, ಬಹಳ ಕಲರ್‌ಫ‌ುಲ್‌ ಆಗಿ ಚಿತ್ರೀಕರಣ ಮಾಡಿಕೊಟ್ಟಿದ್ದಾರೆ’ ಎಂದೆಲ್ಲಾ ವಿವರಿಸಿದರು.

ಚಿತ್ರಕ್ಕೆ ಬಿ.ಜೆ. ಭರತ್‌ ಸಂಗೀತ ಸಂಯೋಜಿಸಿದ್ದಾರೆ. ಆದರೆ, ತಾವು ಸಂಯೋಜಿಸಿರುವುದು ಒಂದೇ ಹಾಡು ಎಂದರು ಭರತ್‌. “ಚಿತ್ರಕ್ಕೆ ಜೆಬಿ ಎನ್ನುವವರು ಸಂಗೀತ ಸಂಯೋಜಿಸಿದ್ದಾರೆ. ನನ್ನ ಸ್ನೇಹಿತರೊಬ್ಬರು, ಈ ಚಿತ್ರಕ್ಕೆ ಸ್ವಲ್ಪ ಸಹಾಯ ಮಾಡಬೇಕು ಎಂದು ಕೇಳಿಕೊಂಡರು. ಒಪ್ಪಿಕೊಂಡು, ಜೆಬಿ ಮಾಡಿದ ಹಾಡುಗಳನ್ನು ಕನ್ನಡಕ್ಕೆ ರೆಕಾರ್ಡ್‌ ಮಾಡಿಕೊಟ್ಟೆ. ಕೊನೆಗೆ ನನ್ನಿಂದಲೂ ಒಂದು ಹಾಡು ಮಾಡಿಸಿದರು ಎಂದರು. ಕೃಷ್ಣ ಚೈತನ್ಯ ತಾವು ಪ್ಯಾಶನ್‌ಗಾಗಿ ಸಿನಿಮಾ ಮಾಡಿದ್ದಾಗಿ ಹೇಳಿದರೆ, ನಿಧಿ ಚಿತ್ರ ಬಹಳ ಕಲರ್‌ಫ‌ುಲ್‌ ಆಗಿ ಬಂದಿರುವುದಾಗಿ ಮಾತು ಮುಗಿಸಿದರು. ಗೀತರಚನೆಕಾರ ಸಾಯಿ ಸಮರ್ಥ್, ನೃತ್ಯ ನಿರ್ದೇಶಕ ಕಲೈ, ನಟಿ ಸ್ವಾತಿ ಮುಂತಾದವರಿದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.