ಪಡಿತರ ವಿತರಣೆಗೂ ಇನ್ನು ಆಧಾರ್ ಕಾರ್ಡ್ ಕಡ್ಡಾಯ
Team Udayavani, Feb 10, 2017, 3:45 AM IST
ನವದೆಹಲಿ: ಎಲ್‌ಪಿಜಿ, ಮೊಬೈಲ್ ಸಿಮ್ ಆಯ್ತು. ಇದೀಗ ಪಡಿತರ ಆಹಾರ ಧಾನ್ಯ ವಿತರಣೆಗೂ ಆಧಾರ್ ಕಡ್ಡಾಯವಾಗಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಆಹಾರ ಭದ್ರತಾ ಕಾಯ್ದೆಯಡಿಗೆ ದೇಶದ ಎಲ್ಲ ಬಡವರಿಗೂ ಪಡಿತರ ಧಾನ್ಯ ವಿತರಿಸಲಾಗುತ್ತಿದ್ದು, ರಿಯಾಯಿತಿ ದರದ ಆಹಾರ ಧಾನ್ಯ ಪಡೆಯಬೇಕಾದರೆ ಆಧಾರ್ ಬೇಕಾಗಿದೆ. ಒಂದು ವೇಳೆ ಆಧಾರ್ ಹೊಂದಿಲ್ಲವಾದರೆ, ಜೂ.30ರೊಳಗೆ ಮಾಡಿಸಿಕೊಂಡು, ಪಡಿತರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕಳೆದ ನವೆಂಬರ್‌ನಲ್ಲಷ್ಟೇ ದೇಶಾದ್ಯಂತ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು 1ರಿಂದ 3 ರೂಪಾಯಿಗೆ ನೀಡಲಾಗುತ್ತಿದೆ. ಇದು 80 ಕೋಟಿ ಮಂದಿಗೆ ತಲುಪಿದೆ. ಈ ಅಧಿಸೂಚನೆಯು ಫೆ.8 ರಿಂದಲೇ ದೇಶಾದ್ಯಂತ ಜಾರಿಗೆ ಬಂದಿದ್ದು, ಎಲ್ಲರೂ ಕಡ್ಡಾಯವಾಗಿ ಆಧಾರ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಲೇಬೇಕಿದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಮೇಘಾಲಯಗಳಲ್ಲಿ ಸದ್ಯಕ್ಕೆ ಇದು ಜಾರಿಗೆ ಬರಲ್ಲ.
ಇದುವರೆಗೆ ಆಧಾರ್ ನೋಂದಣಿ ಮಾಡಿಸಿಕೊಳ್ಳದೇ ಇರುವವರು ಜೂ.30ರೊಳಗೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ರಿಯಾಯಿತಿ ದರದಲ್ಲಿ ಪಡಿತರ ಸಿಗುವುದು ಅಸಾಧ್ಯ ಎಂದು ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.