ಉದ್ಯಮಿ ಜೆ ಪಿ ನಾರಾಯಣಸ್ವಾಮಿ ನಿಧನ
Team Udayavani, Feb 10, 2017, 11:26 AM IST
ಬೆಂಗಳೂರು: ರಾಜ್ಯ ಆರ್ಯ ಈಡಿಗರ ಸಂಘದ ಅಧ್ಯಕ್ಷ ಜೆ.ಪಿ.ನಾರಾಯಣ ಸ್ವಾಮಿ (66) ಅವರು ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಗುರುವಾರ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಪುಟ್ಟಪ್ಪ ಮತ್ತು ಯಲ್ಲಮ್ಮ ದಂಪತಿಯ ಪುತ್ರರಾಗಿದ್ದ ನಾರಾಯಣ ಸ್ವಾಮಿ 10ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡಿದ್ದರು. 17ನೇ ವಯಸ್ಸಿಗೆ ವ್ಯಾಪಾರ ಆರಂಭಿಸಿ, ಸಾರಾಯಿ ಗುತ್ತಿಗೆ ಪಡೆದು ವ್ಯಾಪಾರ ನಡೆಸಿದರು. ತರುವಾಯ ಜೆ.ಪಿ.ಡಿಸ್ಟ್ರಿಲರಿಸ್ ಪ್ರೈ. ಲಿ., ಮದ್ಯ ತಯಾರಿಕಾ ಕಂಪನಿ ಆರಂಭಿಸಿದರು.
ಹೊಟೇಲ್ ಉದ್ಯಮದಲ್ಲಿಯೂ ತೊಡಗಿಸಿಕೊಂಡಿದ್ದರು. 2002ರಿಂದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷರಾಗಿದ್ದ ಅವರು, ಸುಧಾ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು ಸಹ ಆಗಿದ್ದರು. ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ತಂದೆ ಪುಟ್ಟಪ್ಪ ಹೆಸರಲ್ಲಿ ತುಮಕೂರಿನಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪಿಸಿದ್ದರು.
ಸದಾಶಿವನಗರದ ಮನೆಯಲ್ಲಿ ಮಧ್ಯಾಹ್ನ 12.30ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ 4 ಗಂಟೆಗೆ ನೆಲಮಂಗಲ ಬಳಿಕ ಮಾಕಳಿ ಜೆ.ಪಿ.ಡಿಸ್ಟ್ರಿಲರಿಸ್ ಪ್ರೈ.ಲಿ.ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.