ತಪ್ಪದೇ ಎಂಆರ್ ಲಸಿಕೆ ಹಾಕಿಸಿ
Team Udayavani, Feb 10, 2017, 12:12 PM IST
ಪಿರಿಯಾಪಟ್ಟಣ: ದಡಾರ, ರುಬೆಲ್ಲಾ ಮಾರಣಾಂತಿಕ ಕಾಯಿಲೆಯಾಗಿದ್ದು, ಇದನ್ನು ಹೋಗಲಾಡಿಸಲು ಪೋಷಕರು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕಂಪಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ದಾರುಣಾವತಿ ತಿಳಿಸಿದರು.
ತಾಲೂಕಿನ ಕಂಪಲಾಪುರ ಗ್ರಾಮದ ನಾಗಾ ವಿದ್ಯಾಸಂಸ್ಥೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು, 9 ತಿಂಗಳಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಈ ಲಸಿಕೆ ಹಾಕಿಸಬೇಕು. ಕೆಮ್ಮು ಮತ್ತು ಸೀನುವುದರಿಂದ ಈ ರೋಗ ಹರಡುತ್ತದೆ. ಜೊತೆಗೆ ಮಕ್ಕಳಿಗೆ ನ್ಯುಮೋನಿಯ, ಅತಿಸಾರ ಭೇದಿ ಕಾಣಿಸಿಕೊಳ್ಳುತ್ತದೆ ಎಂದರು.
ಈ ಅಭಿಯಾನ ರಾಜ್ಯದೆಲ್ಲೆಡೆ ಫೆ.7ರಿಂದ 28ರ ವರೆಗೆ ನಡೆಯಲಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಶಾಲೆಗಳಲ್ಲಿಯೂ ಲಸಿಕೆ ನೀಡ ಲಾಗುವುದು, ಪೋಷಕರು ವದಂತಿಗಳಿಗೆ ಕಿವಿಗೊಡಬಾರದು ಎಂದರು. ಸಂಸ್ಥೆ ಕಾರ್ಯದರ್ಶಿ ಕೆ.ವಿ. ಜಯರಾಂ, ರಾಷ್ಟ್ರೀಯ ಭಾರತ ಸ್ವಾಸ್ಥ ಕಾರಕ್ರಮದ ಡಾ. ಪ್ರದೀಪ್, ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಕೆ.ಎಸ್.ಲೋಕೇಶ್, ಮುಖ್ಯಶಿಕ್ಷಕ ಚಂದ್ರಶೇಖರ್, ಗಿರೀಶ್, ನಟರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.