ಖಾಸಗಿ ಬಸ್‌ ಹಾವಳಿ ತಡೆಯಿರಿ


Team Udayavani, Feb 10, 2017, 12:27 PM IST

dvg2.jpg

ದಾವಣಗೆರೆ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವರಮಾನಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಖಾಸಗಿ ಬಸ್‌ಗಳ ಹಾವಳಿ ನಿಲ್ಲಿಸಲು ಒತ್ತಾಯಿಸಿ ಕೆಎಸ್ಸಾರ್ಟಿಸಿ ಸ್ಟಾಪ್‌ ಆ್ಯಂಡ್‌ ವರ್ಕರ್ ಯೂನಿಯನ್‌(ಎಐಟಿಯುಸಿ) ನೇತೃತ್ವದಲ್ಲಿ ಗುರುವಾರ ಸಿಬ್ಬಂದಿ, ಕಾರ್ಮಿಕರು ಪ್ರತಿಭಟನೆ ನಡೆಸಿದರು. ಸರ್ಕಾರಿ ನಿಯಮದ ಪ್ರಕಾರ ಖಾಸಗಿ ಬಸ್‌ಗಳು ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣದಿಂದ 500 ಮೀಟರ್‌ ಆಚೆ ನಿಲ್ಲಿಸಿ, ಪ್ರಯಾಣಿಕರನ್ನು ಕರೆದೊಯ್ಯಬೇಕಿದೆ. 

ಆದರೆ, ದಾವಣಗೆರೆಯಲ್ಲಿ ಕಾನೂನು ವಿರುದ್ಧವಾಗಿಯೇ ಬಸ್‌ ನಿಲ್ದಾಣ ಬಳಿಯೇ ನಿಲ್ಲಿಸಿಕೊಂಡು ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಅನೇಕ ಸಂದರ್ಭದಲ್ಲಿ ಖಾಸಗಿ ಬಸ್‌ ಸಿಬ್ಬಂದಿ ಬಸ್‌ ನಿಲ್ದಾಣದ ಒಳಕ್ಕೆ ಬಂದು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನೂ ಕರೆದೊಯ್ಯುತ್ತಾರೆ. ಇದರಿಂದ ಸಂಸ್ಥೆಯ ವರಮಾನಕ್ಕೆ ಸಾಕಷ್ಟು ಪೆಟ್ಟು ಬೀಳುತ್ತಿದೆ. ಈ ಕೂಡಲೇ ಖಾಸಗಿ ಬಸ್‌ಗಳ ಹಾವಳಿ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳು, ಸ್ವಾತಂತ್ರ ಹೋರಾಟಗಾರರು, ಹಿರಿಯ ನಾಗರಿಕರು, ಅಂಗವಿಲಕರಿಗೆ ಹಲವಾರು ರೀತಿಯ ಸೌಲಭ್ಯ ನೀಡುತ್ತಿದೆ. ಎಲ್ಲ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುತ್ತಿದೆ. ಅಲ್ಲದೆ ಪ್ರಯಾಣಿಕರ ಹಿತದೃಷ್ಟಿಯಿಂದ ಅಪಘಾತ ವಿಮಾ ಸವಲತ್ತನ್ನೂ ನೀಡಲಾಗುತ್ತಿದೆ. ಪ್ರಯಾಣಿಕರು ಎಷ್ಟೇ ಮಂದಿಯೇ ಇರಲಿ ಸರಿಯಾದ ಸಮಯಕ್ಕೆ ಸಂಚರಿಸುತ್ತವೆ. 

ಆದರೆ, ಖಾಸಗಿ ಬಸ್‌ಗಳಲ್ಲಿ ಇಂಥದ್ದನ್ನು ನಿರೀಕ್ಷೆ ಮಾಡುವಂತಿಲ್ಲ. ನಾಗರಿಕರಿಗೆ ವಿವಿಧ ಸೌಲಭ್ಯ ನೀಡುತ್ತಿರುವುದು ಸಂಸ್ಥೆಗೆ ಬರುವ ವರಮಾನದಿಂದ. ಅಂಥಹ ವರಮಾನಕ್ಕೆ ಧಕ್ಕೆ ಉಂಟಾದರೆ ಮುಂದೊಂದು ದಿನ ಸಂಸ್ಥೆಯನ್ನೇ ಮುಚ್ಚಬೇಕಾದೀತು. 1.25 ಲಕ್ಷಕ್ಕೂ ಹೆಚ್ಚು ಜನರು ಮತ್ತು ಅವರ ಅವಲಂಬಿತರು ಬೀದಿಗೆ ಬರುವ ವಾತಾವರಣ ನಿರ್ಮಾಣ ಆಗಬಹುದು ಎಂದು ತಿಳಿಸಿದರು. 

ಖಾಸಗಿ ಬಸ್‌ಗಳ ಸಂಚಾರಕ್ಕೆ ಸಂಘಟನೆಯ ಯಾವುದೇ ವಿರೋಧ ಇಲ್ಲ. ಆದರೆ, ನಿಯಮದಂತೆ ಸಂಚರಿಸಬೇಕು. ನಿಗದಿತ ಮಾನದಂಡ, ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು. ತಕ್ಷಣ ಖಾಸಗಿ ಬಸ್‌ ಗಳ ಹಾವಳಿ ನಿಲ್ಲಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಪೊಲೀಸ್‌, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕೆಎಸ್ಸಾರ್ಟಿಸಿ ಸ್ಟಾಪ್‌ ಅಂಡ್‌ ವರ್ಕರ್ ಯೂನಿಯನ್‌(ಎಐಟಿಯುಸಿ) ದಾವಣಗೆರೆ ವಿಭಾಗದ ಅಧ್ಯಕ್ಷ ಎಚ್‌.ಕೆ. ರಾಮಚಂದ್ರಪ್ಪ, ಹನುಮಂತಪ್ಪ ಇತರರು ಇದ್ದರು.   

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.