ಅಲ್ಪಸಂಖ್ಯಾತ ಸ್ಥಾನಮಾನ-ಮಂಡಳಿ ರಚಿಸಲು ಆಗ್ರಹ

Team Udayavani, Feb 11, 2017, 12:34 PM IST

dvg2.jpg

ದಾವಣಗೆರೆ: ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿಗಾಗಿ ಅಲ್ಪಸಂಖ್ಯಾತ ಸ್ಥಾನಮಾನ, ಅಭಿವೃದ್ಧಿ ಮಂಡಳಿ ರಚನೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ವೀರಶೈವ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. 

ವೀರಶೈವ ಲಿಂಗಾಯತ ಸಮಾಜವನ್ನು ಎಲ್ಲಾ ಸರ್ಕಾರ ಕಡೆಗಣಿಸುತ್ತಾ ಬಂದ ಪರಿಣಾಮ ಸಮಾಜ ಹಲವಾರು ಸಾಮಾಜಿಕ ಸೌಲಭ್ಯದಿಂದ ವಂಚಿತವಾಗುತ್ತಿದೆ. ವೀರಶೈವ ಲಿಂಗಾಯತ ಸಮಾಜ ಎಂದರೆ ಮುಂದುವರೆದವರು, ಆರ್ಥಿಕವಾಗಿ ಸದೃಢರು, ಉಳ್ಳವರು ಎಂಬ ಭಾವನೆ ಇದೆ. ಆದರೆ, ಭಾವನೆಗೂ ವಾಸ್ತವಕ್ಕೂ ಭಾರೀ ವ್ಯತ್ಯಾಸ ಇದೆ. ಇಂದಿಗೂ ವೀರಶೈವ ಲಿಂಗಾಯತ ಸಮಾಜದ ಅನೇಕ ಉಪ ಪಂಗಡಗಳು ಅತ್ಯಂತ ಬಡತನದಲ್ಲಿದ್ದಾರೆ.

ಶೈಕ್ಷಣಿಕ, ಆರ್ಥಿಕ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದ್ದಾರೆ. ಒಂದು ರೀತಿಯ ಅನಾಥಪ್ರಜ್ಞೆಯಲ್ಲಿದ್ದಾರೆ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿಯಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಪ್ರಾರಂಭಿಸುವ ಮೂಲಕ ಸರ್ಕಾರ ಸಮಾಜದ ನೆರವಿಗೆ ಧಾವಿಸಬೇಕು.

ಸಮಾಜದ ನೌಕರರ ಮೇಲೆ ನಡೆಯುತ್ತಿರುವ ಕಿರುಕುಳ, ದೌರ್ಜನ್ಯಕ್ಕೆ ಸರ್ಕಾರದ ಪರೋಕ್ಷ ಬೆಂಬಲ ಇದೆಯೇ ಎಂಬ ವಾತಾವರಣ ಕಂಡು ಬರುತ್ತಿದೆ. ಸರ್ಕಾರ ಕೂಡಲೇ ಕಿರುಕುಳ, ದೌರ್ಜನ್ಯ ನಿಲ್ಲಿಸುವ ಮೂಲಕ ಸಮಾಜದ ನೌಕರರ ನೆರವಿಗೆ ಬರಬೇಕು. ಆಂಗ್ಲರ ವಿರುದ್ಧ ಹೋರಾಟ ನಡೆಸಿದ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ದೇಶದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಎಂದು ಘೋಷಿಸುವಂತೆ ರಾಜ್ಯ ಸಚಿವ ಸಂಪುಟ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು. 

ಕಿತ್ತೂರು ರಾಣಿ ಚನ್ನಮ್ಮನನ್ನು ಬಂಧನದಲ್ಲಿಟ್ಟಿದ್ದ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆ, ಗೃಹ ಕೈಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸಮಾಜದ ಮಹಿಳಾ ಸಂಘಗಳಿಗೆ ಧನ ಸಹಾಯ, ನೇಮಕಾತಿ ಅರ್ಜಿ ಶುಲ್ಕದಲ್ಲಿ ರಿಯಾಯತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಮಿತಿ ರಾಜ್ಯ ಅಧ್ಯಕ್ಷ ಡಿ.ವಿ. ಪ್ರಶಾಂತ್‌, ಜಿ. ಶಿವಯೋಗಪ್ಪ, ಉಮೇಶ್‌ ಕತ್ತಿ, ಶಂಕರಗೌಡ ಬಿರಾದಾರ್‌, ಟಿ.ವಿ. ಗಣೇಶ್‌, ಶಿವನಗೌಡ ಪಾಟೀಲ್‌, ಎಚ್‌.ಎನ್‌. ಜಗದೀಶ್‌,  ಚ್‌. ಅಜ್ಜಪ್ಪ, ದಾಕ್ಷಾಯಣಮ್ಮ, ಬಸವರಾಜ್‌ ಬಾವಿ, ಶ್ರೀಕಾಂತ್‌, ಟಿಂಕರ್‌ ಮಂಜಣ್ಣ, ಮಂಜುನಾಥ್‌ ಕತ್ತಿ ಇತರರಿದ್ದರು. 

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.