ಸಾಧಕರಿಗೆ ವೇದಿಕೆಯಾದ ಕಾಲೇಜು
Team Udayavani, Feb 11, 2017, 1:08 PM IST
ಹುಬ್ಬಳ್ಳಿ: ಮೂರುಸಾವಿರಮಠದ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಅನೇಕರು ಇದೀಗ ಸಮಾಜದ ಅನೇಕ ಉನ್ನತ ಹುದ್ದೆಗಳಲ್ಲಿ ಅಷ್ಟೇ ಅಲ್ಲದೇ ವಿವಿಧ ಮಠಗಳಲ್ಲಿ ಮಠಾಧೀಶರು ಆಗಿದ್ದಾರೆ ಎಂದು ಅಫಜಲಪುರದ ಸಂಸ್ಥಾನ ಹಿರೇಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ಜಗದ್ಗುರು ಗಂಗಾಧರ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಇದೇ ಮಹಾವಿದ್ಯಾಲಯದಲ್ಲಿ ನಾನು ಕೂಡಾ ಅಧ್ಯಯನ ಮಾಡಿದ್ದು, ಇದೀಗ ಶ್ರೀ ಸಂಸ್ಥಾನ ಹಿರೇಮಠದ ಮಠದಲ್ಲಿ ಪೀಠಾಧಿಪತಿಯಾಗಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದರು.
ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಗುರಿ, ಹಿಂದೆ ಗುರು ಇಟ್ಟುಕೊಂಡು ಮುನ್ನಡೆಯಬೇಕು. ಅಂದಾಗ ಮಾತ್ರ ಜೀವನದಲ್ಲಿ ಅಂದುಕೊಂಡ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಸಂಚರಿಸುವ ಮೂಲಕ ಸಂಸ್ಥೆಯ ಶ್ರೇಯೋಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಹನುಮಂತ ಶಿಗ್ಗಾಂವ ಮಾತನಾಡಿ, ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಇತ್ತೀಚೆಗೆ ಶೌರ್ಯ ಪ್ರಶಸ್ತಿ ಪಡೆದುಕೊಂಡಿರುವ ಶಿಯಾ ಖೋಡೆ ಅವಳ ಸಂಪೂರ್ಣ ವಿದ್ಯಾಭ್ಯಾಸದ ವೆಚ್ಚವನ್ನು ಸಂಸ್ಥೆಯೇ ಭರಿಸಲಿದೆ ಎಂದರು.
ಸಂಸ್ಥೆಯ ಹಳೇ ವಿದ್ಯಾರ್ಥಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ, ಕನೆಕ್ಟ್ ಸಂಸ್ಥೆಯ ಮಹೇಶ ಮಾಶ್ಯಾಳ, ಲಿಂಗರಾಜ ಇಂಗಳಹಳ್ಳಿ ಸೇರಿದಂತೆ ಇನ್ನಿತರರು ಮಾತನಾಡಿದರು. ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಅರವಿಂದ ಕುಬಸದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯ ಬಿ.ಎಂ. ಸಾಲಿಮಠ ಸಂಸ್ಥೆಯ 25 ವರ್ಷಗಳಲ್ಲಿ ಕಾಲೇಜು ನಡೆದು ಬಂದ ದಾರಿ ಕುರಿತು ವರದಿ ನೀಡಿದರು. ಸಂಸ್ಥೆಯಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದವರನ್ನು ಹಾಗೂ ಇತ್ತೀಚೆಗೆ ಶೌರ್ಯ ಪ್ರಶಸ್ತಿ ಪಡೆದ ಶಿಯಾ ಖೋಡೆ, ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ಕೊನೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.