ಪರಿಸರ ಸ್ನೇಹಿ ಉಪಕರಣಗಳು ಅಗತ್ಯ

Team Udayavani, Feb 11, 2017, 1:15 PM IST

hub7.jpg

ಧಾರವಾಡ: ಇತ್ತೀಚಿನ ದಿನಗಳಲ್ಲಿ ಕೃಷಿಗೆ ಉಪಯೋಗಿಸುತ್ತಿರುವ ಉಪಕರಣಗಳು ಬೃಹತ್‌ ಪ್ರಮಾಣ, ದುಬಾರಿ ವೆಚ್ಚ ಹಾಗೂ ರೈತರಿಗೆ ಪರಾವಲಂಬಿಯಾಗಿವೆ ಎಂದು  ಡಾ| ಸಂಜೀವ ಕುಲಕರ್ಣಿ ಹೇಳಿದರು. ನೇಚರ್‌ ರಿಸರ್ಚ್‌ ಸೆಂಟರ್‌, ಹಳ್ಳಿಗೇರಿಯ ನೇಚರ್‌ ಫಸ್ಟ್‌ ಇಕೋ ವಿಲೇಜ್‌ನಲ್ಲಿ ಹಮ್ಮಿಕೊಂಡಿದ್ದ “ರೈತ ಸ್ನೇಹಿ ಬೆಳೆ ಕಟಾವು ಯಂತ್ರದ ಪ್ರಾತ್ಯಕ್ಷಿತೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಈ ಕೃಷಿ ಉಪಕರಣಗಳು ಇಂಧನದ ಬಳಕೆಯ ಮೇಲೆಯೇ ಅವಲಂಬಿತವಾಗಿವೆ. ಹೀಗಾಗಿ ಒಬ್ಬ ಬಡವ, ಚಿಕ್ಕ ಪ್ರಮಾಣದ ಕೃಷಿ ಮಾಡುವ ರೈತರಿಗೆ ಆಧುನಿಕ ಉಪಕರಣಗಳು ಉಪಯೋಗಿಸಲು ಸೂಕ್ತವಾಗದೆ, ರೈತನ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ಚಿಕ್ಕ, ಸ್ವಾವಲಂಬಿ ಹಾಗೂ ಪರಿಸರ ಸ್ನೇಹಿ ರೈತೋಪಕರಣಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದರು. 

ಉಪಕರಣದ ಶೋಧಕ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಯುವ ಪ್ರಗತಿಪರ ರೈತ ಅನಂತ ಚತುರ್ವೇದಿ ಮಾತನಾಡಿ, ತಮ್ಮ ಉಪಕರಣವು ಗೋದಿ, ಜೋಳ, ಭತ್ತ, ಹುಲ್ಲು ಹೀಗೆ ಕಬ್ಬನ್ನು ಹೊರತುಪಡಿಸಿ ಎಲ್ಲ ತರಹದ ಬೆಳೆಗಳನ್ನು ಕಟಾವು ಮಾಡುವ  ಕಾರ್ಯ ಕ್ಷಮತೆಯನ್ನು ಹೊಂದಿದೆ.

ಇದು ಸಂಪೂರ್ಣ ಸ್ವಾವಲಂಬಿಯಾಗಿದ್ದು, ಇದರ ಉಪಕರಣವನ್ನು ಹರಿತಗೊಳಿಸಲು ಬೇಕಾದ ಎಲ್ಲ ಪರ-ಉಪಕರಣಗಳನ್ನು ಈ ವ್ಯವಸ್ಥೆಯಲ್ಲಿಯೇ ನೀಡಲಾಗುತ್ತದೆ ಎಂದು ಪ್ರಾತ್ಯಕ್ಷಿತೆಯೊಂದಿಗೆ ವಿವರಿಸಿದರು. ರೈತರೂ ಸಹಿತ ಉಪಕರಣವನ್ನು ಪ್ರಯೋಗಿಸಿ ಅದರ ಗುಣಮಟ್ಟ  ಪರೀಕ್ಷಿಸಿದರು.

ನೇಚರ್‌ ರಿಸರ್ಚ್‌ ಸೆಂಟರ್‌ ಕಾರ್ಯದರ್ಶಿ ಪ್ರಕಾಶ ಗೌಡರ ಮಾತನಾಡಿ, ಮುಂದಿನ ದಿನಗಳಲ್ಲಿಯೂ ಸಹಿತ ಇಂತಹ ರೈತ ಸ್ನೇಹಿ ಉಪಕರಣಗಳನ್ನು ತಮ್ಮ ಸಂಸ್ಥೆ ವತಿಯಿಂದ ಪರಿಚಯಸಲಾಗುವುದು ಎಂದರು. 

ಪ್ರಾತ್ಯಕ್ಷಿತೆಯಲ್ಲಿ ಡಾ|ಪ್ರಕಾಶ ಭಟ್‌, ನೇಚರ್‌ ರಿಸರ್ಚ್‌ ಸೆಂಟರ್‌ನ ಚಂದ್ರಶೇಖರ ಬೈರಪ್ಪನವರ, ಡಾ| ವೀರನಗೌಡರ, ಕುಮಾರ ಭಾಗವತ, ಸಂಜೀವ ಕಟ್ಟಿ, ಸುರೇಶಬಾಬು ಹಾಗೂ ಹಳ್ಳಿಗೇರಿ ಸುತ್ತಮುತ್ತಲಿನ ರೈತರು ಇದ್ದರು. ಜಯಶ್ರೀ ಪಾಟೀಲ ಪ್ರಾರ್ಥಿಸಿದರು. ಅನಿಲ ಅಳ್ಳೊಳ್ಳಿ ನಿರೂಪಿಸಿ, ವಂದಿಸಿದರು. 

ಟಾಪ್ ನ್ಯೂಸ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.