ದೇವಸ್ಥಾನ ಭಕ್ತರಿಗಾಗಿ: ಎಡನೀರು ಶ್ರೀ
Team Udayavani, Feb 12, 2017, 3:45 AM IST
ವಿಟ್ಲ: ದೇವರು ದೇವಸ್ಥಾನ ಬೇಕೆನ್ನುವುದಿಲ್ಲ. ಭಕ್ತರಿಗಾಗಿ ದೇವಸ್ಥಾನ ಬೇಕು. ಪೂಜೆ, ಆರಾಧನೆ ಮಾಡಲು,
ಶಾಂತಿ, ನೆಮ್ಮದಿ ಪಡೆಯಲು, ಬಿಸಿಲು, ಮಳೆಯನ್ನು ತಡೆಯಲು ದೇಗುಲ ನಿರ್ಮಿಸಲಾಗುತ್ತದೆ ಎಂದು ಎಡನೀರು
ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಹೇಳಿದರು.
ಅವರು ಶುಕ್ರವಾರ ಬಾಕ್ರಬೈಲು ಸಮೀಪದ ಪಾತೂರು ಶ್ರೀ ಸೂಯೇìಶ್ವರ ದೇವಸ್ಥಾನದ ನವೀಕೃತ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ಸಹಿತ ಶ್ರೀ ಸೂಯೇìಶ್ವರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶ ಹಾಗೂ ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ಜಾತ್ರೆಯದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಅನ್ನ, ಪಾಯಸ, ಸಿಹಿತಿಂಡಿಗಳನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತದೆ. ದೇವರು ಅವುಗಳನ್ನು ಭಕ್ತರಿಗೇ ಹಿಂದಿರು
ಗಿಸುತ್ತಾನೆ. ಭಕ್ತಿ, ಪರಿಶುದ್ಧ ಮನಸ್ಸಿನಿಂದ ಸಮರ್ಪಿಸಿದ್ದೆಲ್ಲ ವನ್ನೂ ಭಗವಂತನು ಸ್ವೀಕರಿಸಿ, ಪ್ರಸಾದ ರೂಪದಲ್ಲಿ ನೀಡುತ್ತಾನೆ ಎಂದರು.
ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ರಮಾನಾಥ ಹೆಗ್ಡೆ, ಶ್ರೀ ಕ್ಷೇತ್ರ ಬಪ್ಪನಾಡು ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ ಕಕ್ವಗುತ್ತು, ಪ್ರಗತಿಪರ ಕೃಷಿಕ ರಾಜೇಶ್ ನಾೖಕ್ ಉಳಿಪಾಡಿಗುತ್ತು, ಮಂಗಳೂರು ಉದ್ಯಮಿ ಕೆ. ದೇವಾನಂದ ಶೆಟ್ಟಿ, ಮಂಚಿ ಶ್ರೀ ಧರ್ಮ ಜಾಗರಣ ಪ್ರತಿಷ್ಠಾನದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಮೊದಲಾದವರು ಮಾತನಾಡಿದರು.
ದೇಗುಲದ ಮ್ಯಾನೇಜಿಂಗ್ ಟ್ರಸ್ಟಿ ಬಾಕ್ರಬೈಲು ರಮಾನಾಥ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲಾರಬೀಡು ರವೀಂದ್ರನಾಥ ಆಳ್ವ, ಕಾರ್ಯದರ್ಶಿ ವಿದ್ಯಾನಂದ ಸಾಮಾನಿ, ಕೋಶಾಧಿಕಾರಿ ದಿನೇಶ್ ಶೆಟ್ಟಿ ಮಲಾರಬೀಡು ಮೊದಲಾದವರು ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು ಸ್ವಾಗತಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು. ಕರ್ಪಿಕಾರು ರವೀಂದ್ರನಾಥ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.