ಹರ್ಡೇಕರ ಮಂಜಪ್ಪ ಆದರ್ಶಪ್ರಾಯ
Team Udayavani, Feb 13, 2017, 2:29 PM IST
ಧಾರವಾಡ: ನಾಡಿನ ಉದ್ದಗಲಕ್ಕೂ ಸಂಚರಿಸಿ, ಜನಜಾಗೃತಿ ಮೂಡಿಸಿದ ಮಹಾನ್ ಸಾಧಕ ಹರ್ಡೇಕರ ಮಂಜಪ್ಪನವರು ಇಡೀ ಜನ ಸಮುದಾಯಕ್ಕೆ ಇಂದಿಗೂ ಪ್ರಸ್ತುತ ಹಾಗೂ ಆದರ್ಶ ಪ್ರಾಯರಾಗಿದ್ದಾರೆ ಎಂದು ಮನಗುಂಡಿಯ ಶ್ರೀಗುರು ಬಸವ ಮಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.
ತಾಲೂಕಿನ ಮನಗುಂಡಿಯ ಶ್ರೀಗುರು ಬಸವ ಮಹಾಮನೆಯ ಚನ್ನಯ್ಯನಗಿರಿಯಲ್ಲಿ ರವಿವಾರ ನಡೆದ 103ನೇ ಮಾಸಿಕ ಶಿವಾನುಭವಗೋಷ್ಠಿ ಹಾಗೂ ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪನವರ ಸ್ಮರಣೋತ್ಸವದಲ್ಲಿ ಅವರು ಮಾತನಾಡಿದರು.
ಅಂತಹ ಪುಣ್ಯ ಪುರುಷರ ಜೀವನವನ್ನು ಪ್ರತಿಯೊಬ್ಬರು ಓದಿ ತಿಳಿದುಕೊಳ್ಳಬೇಕು. ತಮ್ಮ ಜೀವನವನ್ನೇ ಸಮಾಜಕ್ಕೆ ಮುಡುಪಾಗಿಟ್ಟಿದ್ದ ಸಾûಾತ್ ಗಾಂಧೀಜಿಯೇ ಆಗಿದ್ದ ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪನವರ ಬದುಕು, ಬರಹವನ್ನು ಪಠ್ಯ-ಪುಸ್ತಕದಲ್ಲಿ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸಲಹೆ ನೀಡಿದರು.
ಜಾತಿ, ಮತ, ಪಂಥ ಎಂಬ ಯಾವುದೇ ಭೇದ-ಭಾವ ಮಾಡದೆ ಎಲ್ಲವನ್ನೂ ಮೀರಿ ಕೆಲಸ ಮಾಡಿದರು. ಅಲ್ಲದೆ, ಸ್ವತಃ ಮಹಾತ್ಮ ಗಾಂಧೀಜಿಯ ಒಡನಾಡಿಯಾಗಿದ್ದರೂ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳಲಿಲ್ಲ. ಹೀಗಾಗಿಯೇ ಅವರನ್ನು ನಮ್ಮ ರಾಜಕೀಯ ವ್ಯಕ್ತಿಗಳು ಮರೆತಂತೆ ಕಾಣುತ್ತಿದ್ದಾರೆ.
ಇದು ರ್ದುದೈವದ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹರ್ಡೇಕರ ಮಂಜಪ್ಪನವರು ಮಹಿಳೆಯರು, ತರುಣರು ಹಾಗೂ ಮಕ್ಕಳಿಗಾಗಿಯೇ ಸಾಕಷ್ಟು ಸಾಹಿತ್ಯ ಕೃಷಿ ಮಾಡಿದ್ದಾರೆ. ಅವರ ಸಾಹಿತ್ಯದ ಕುರಿತು ಆಳ ಅಧ್ಯಯನ ಮಾಡಬೇಕಿದೆ. ಅವರ ಪರಿಶುದ್ಧ ಬದುಕು ಇತರರಿಗೆ ಮಾದರಿಯಾಗಿದ್ದು, ಅಂತರಂಗ ಹಾಗೂ ಬಹಿರಂಗ ಎರಡು ಒಂದೇ ಆಗಿದ್ದವು ಎಂದು ಹೇಳಿದರು.
ಚಿಕ್ಕೋಡಿಯ ಶಿವಾನಂದ ಮಠದ ಡಾ| ಶ್ರದ್ಧಾನಂದ ಸ್ವಾಮೀಜಿ ಮಾತನಾಡಿ, ಸತ್ಸಂಗ ಹಾಗೂ ಗುರುವಿನ ಸಂಗ ಮಾಡಿದವರ ಜೀವನ ಪಾವನವಾಗುತ್ತದೆ. ಅವರಲ್ಲಿ ಜ್ಞಾನ, ಅನುಭಾವ ಹಾಗೂ ಅಂತರಂಗದ ಸೌಂದರ್ಯ ಇರುತ್ತದೆ. ಹೀಗಾಗಿ ಮಹಾತ್ಮರ ಸನ್ನಿಧಾನದಲ್ಲಿ ಕಾಲ ಕಳೆಯಬೇಕು. ಭಕ್ತಿ ಮಾರ್ಗದಲ್ಲಿ ನಡೆದರೆ ಒಳಿತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.