ಲೈಂಗಿಕ ದಮನಿತರ ಕುರಿತು ವರದಿ ಸಲ್ಲಿ ಕೆ
Team Udayavani, Feb 14, 2017, 7:12 AM IST
ಬೆಂಗಳೂರು: ಲೈಂಗಿಕ ದಮನಿತರ ಬದುಕಿನ ಸ್ಥಿತಿಗತಿ ಕುರಿತಂತೆ ದೇಶದಲ್ಲೇ ಪ್ರಥಮ ಬಾರಿಗೆ ಅಧ್ಯಯನ ನಡೆಸಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದರು.
ಲೈಂಗಿಕ ಕಾರ್ಯ ಕರ್ತೆಯರ ಸ್ಥಿತಿಗತಿಗಳ ಅಧ್ಯಯನ ಸಮಿತಿಯ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯೆ ಡಾ.ಜಯಮಾಲಾ
ಅವರು ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಲ್ಲಿಸಿದ ಸಮಿತಿ ವರದಿ ಸ್ವೀಕರಿಸಿ ಅವರು ಮಾತನಾಡಿದರು.
ಇದಕ್ಕೂ ಮೊದಲು ಜಯಮಾಲಾ ಮಾತನಾಡಿ, ಬುದ್ದದೇವ್ ಕರ್ಮಾಸ್ಕರ್ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಡುವಿನ ಪ್ರಕರಣ ಆಧರಿಸಿ ಸುಪ್ರೀಂಕೋರ್ಟ್ ಆದೇಶದಂತೆ ಲೈಂಗಿಕ ದಮನಿತರ ಬದುಕಿನ ಸ್ಥಿತಿಗತಿ ಕುರಿತಂತೆ ಅಧ್ಯಯನ ನಡೆಸಿದ ಮೊದಲ
ರಾಜ್ಯ ಕರ್ನಾಟಕವಾಗಿದೆ. ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳಿಗೂ ಭೇಟಿ ನೀಡಿ ಲೈಂಗಿಕ ಕಾರ್ಯಕರ್ತೆಯರನ್ನು
ಭೇಟಿ ಮಾಡಿ ಮಾಹಿತಿ ಪಡೆದು ಅಧ್ಯಯನ ನಡೆಸಿ ವಸ್ತುನಿಷ್ಠ ವರದಿ ಸಿದ್ಧಪಡಿಸಲಾಗಿದೆ. ಎಲ್ಲ ಜಿಲ್ಲೆಗಳಿಗೆ 17,600
ಪ್ರಶ್ನಾವಳಿಗಳನ್ನು ಕಳು ಹಿಸಿ 11,300 ಉತ್ತರ ಪಡೆಯಲಾಗಿದೆ. 3000 ದಮನಿತರಿಂದ ನೇರವಾಗಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
ಪ್ರಮುಖ ಶಿಫಾರಸು: ರಾಜ್ಯದಲ್ಲಿ 8000 ಎಚ್‌ಐವಿ ಸೋಂಕಿತರು ಪೌಷ್ಠಿಕ ಆಹಾರ ಪಡೆಯಲು ಅನುಕೂಲವಾಗುವಂತೆ
ಅಂತ್ಯೋದಯ ಪಡಿತರ ಚೀಟಿ ನೀಡಬೇಕು. ಏಕ ಗವಾಕ್ಷಿ ಪದ್ಧತಿಯಡಿ ಲೈಂಗಿಕ ದಮನಿತರಿಗೆ ಪುನರ್ವಸತಿ ಯೋಜನೆ ಕಲ್ಪಿಸಿ ಉದ್ಯೋಗಕ್ಕೆ ಆರ್ಥಿಕ ನೆರವು ನೀಡಬೇಕು. ಮಾನವ ಕಳ್ಳ ಸಾಗಣೆ ತಡೆಯಲು ಕಾನೂನು ಜಾರಿಗೊಳಿ ಸಬೇಕು ಎಂದು ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.