ನಾಳೆ ಖಾಸಗಿ ಶಾಲಾ-ಕಾಲೇಜು ಬಂದ್
Team Udayavani, Feb 14, 2017, 2:47 PM IST
ಧಾರವಾಡ: ಕಾಲ್ಪನಿಕ ವೇತನ ಬಡ್ತಿ, ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.15ರಂದು ಖಾಸಗಿ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಲಾಗಿದೆ ಎಂದು ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟದ ಅಧ್ಯಕ್ಷ ಎಚ್.ಬಿ. ಡಂಬಳ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಗಳ ಹಾಗೂ ನೌಕರರ ಸಂಘಟನೆಗಳು ಹೋರಾಟ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯ ನಿರ್ಣಯಂತೆ ಇದೀಗ ಫೆ.15ರಂದು ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಲಾಗಿದ್ದು, ಅಂದು ಎಲ್ಲರೂ ಸಾಮೂಹಿಕ ರಜೆ ಹಾಕಿ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜ.27ರಂದು ಮುಖ್ಯಮಂತ್ರಿಗಳಿಗೆ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರೂ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೇ ಬರದೆ ಇರುವುದರಿಂದ ಅನಿವಾರ್ಯವಾಗಿ ಫೆ.15 ರಂದು ರಾಜ್ಯದ ಎಲ್ಲ ಶಾಸಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲು ಕರೆ ನೀಡಿದೆ.
ಧಾರವಾಡ ಕಲಾಭವನದಿಂದ ಬೆಳಿಗ್ಗೆ 11:00 ಗಂಟೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನಾ ರ್ಯಾಲಿಯೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲಾ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿ, ಶಾಶ್ವತ ಪರಿಹಾರ ನೀಡುವ ನಿರೀಕ್ಷೆ ಹುಸಿಯಾಗಿದೆ. ಈ ಸಮಸ್ಯೆಗಳನ್ನು ಒಕ್ಕೂಟದ ಪದಾಧಿಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಸರ್ಕಾರದ ಗಮನಕ್ಕೆ ತಂದರೂ ಸರ್ಕಾರ ಸ್ಪಂದನೆ ನೀಡದೇ ಹೋಗಿದ್ದರಿಂದ ಈಗ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಬೀದಿಗಿಳಿಯುವಂತೆ ಮಾಡಿದೆ ಎಂದು ದೂರಿದರು.
ಬೇಡಿಕೆಗಳು: ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡುವುದು, ಶಿಕ್ಷಕ ವಿದ್ಯಾರ್ಥಿಗಳ ಅನುಪಾತವನ್ನು ಸಿಬಿಎಸ್‌ಸಿ, ಐಸಿಎಸ್‌ಇ ಮಾದರಿಯಂತೆ ನಿಗದಿಗೊಳಿಸುವುದು, ಸರ್ಕಾರ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿಯ ವಿದ್ಯಾರ್ಥಿಗಳ ನಡುವಿನ ಮಲತಾಯಿ ಧೋರಣೆ ಸರಿಪಡಿಸುವುದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಯೋಜನೆ ಮುಂದುವರಿಸುವುದು, ಸರ್ಕಾರಿ ಹಾಗೂ ಖಾಸಗಿ ನಡುವಿನ ತಾರತಮ್ಯ ನಿವಾರಣೆ,
ಮಾನ್ಯತೆ ನವೀಕರಣವನ್ನು ಸರಳಿಕರಣಗೊಳಿಸುವುದು, ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಬಗೆಹರಿಸುವುದು, ವೇತನ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಬಂದ್ ಕರೆ ನೀಡಲಾಗಿದೆ ಎಂದು ತಿಳಿಸಿದರು. ಕೆ.ಬಿ. ಕುಲಕರ್ಣಿ, ರಾಘವೇಂದ್ರ ಸೊಂಡೂರ, ಎಂ.ಎಸ್. ಪಾಟೀಲ, ಜೆ.ಆರ್. ಭಟ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
MUST WATCH
ಹೊಸ ಸೇರ್ಪಡೆ
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್ ಹೆಡ್ ಓಪನಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.