ಜೀವಜಲ ಸಂಗ್ರಹಿಸದಿದ್ದರೆ ಆಪತ್ತು

Team Udayavani, Feb 14, 2017, 2:57 PM IST

hub7.jpg

ಧಾರವಾಡ: ನೀರು ಸಂಗ್ರಹ, ಸಮರ್ಪಕ ನಿರ್ವಹಣೆಗೆ ಇದೇ ನಿರ್ಲಕ್ಷ್ಯ,ಉದಾಸೀನತೆ ಮುಂದುವರಿದರೆ ಮುಂದಿನ ಕೆಲವೇ ವರ್ಷಗಳಲ್ಲಿ ರಾಜ್ಯದ ಬಹುತೇಕ ಎಲ್ಲ ಜಲಾಶಯಗಳು ಕೇವಲ ಕುಡಿಯುವ ನೀರಿನ ಸಂಗ್ರಹ ತಾಣಗಳಾದರೂ ಅಚ್ಚರಿ ಇಲ್ಲ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಡಾ| ಶಿವಾನಂದ ಜಾಮದಾರ ಹೇಳಿದರು. 

ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೇಂದ್ರ ಜಲ ಆಯೋಗ ಕೃವಿವಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಕೇಂದ್ರ ಸರಕಾರದ “ಜಲಕ್ರಾಂತಿ’ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಇಡೀ ವಿಶ್ವದಲ್ಲಿ ಮನುಷ್ಯ ಬಳಕೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ ಶೇ.3ರಷ್ಟು ಮಾತ್ರ ಉಳಿದ ಶೇ.97ರಷ್ಟು ನೀರು ಸಮುದ್ರ, ಹಿಮದ ರೂಪದಲ್ಲಿದೆ ಎಂದರು. 

ಲಭ್ಯವಿರುವ ಶೇ.3ರಷ್ಟು ನೀರಿನಲ್ಲಿ ನೀರಾವರಿಗಾಗಿ 2/3ರಷ್ಟು ನೀರು ಬೇಕಾಗುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ದೇಶದಲ್ಲಿ ಸುಮಾರು 3,500ಕ್ಕೂ ಅಧಿಕ ದೊಡ್ಡ-ಮಧ್ಯಮ ಅಣೆಕಟ್ಟುಗಳು ನಿರ್ಮಾಣಗೊಂಡು ನೀರಾವರಿ ಉದ್ದೇಶದ ನೀರಿನ ಬೇಡಿಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಜಲನೀತಿಯಲ್ಲಿ ಮೊದಲ ಆದ್ಯತೆ ಕುಡಿಯುವ ನೀರಾಗಿದ್ದರೆ, ಎರಡನೇ ಆದ್ಯತೆ ನೀರಾವರಿಯಾಗಿದೆ. 

2050ರ ವೇಳೆಗೆ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ರಾಷ್ಟ್ರ ಭಾರತವಾಗಲಿದ್ದು, ನೀರಿನ ಬೇಡಿಕೆ ತೀವ್ರ ಹೆಚ್ಚಲಿದೆ. ಕುಡಿಯುವ ನೀರು ಹಾಗೂ ನೀರಾವರಿ ಬೇಡಿಕೆ ನಡುವೆ ಸಂಘರ್ಷ ಹೆಚ್ಚಲಿದೆ. ಪ್ರಸ್ತುತ ಅನೇಕ ಪ್ರಮುಖ ಜಲಾಶಯಗಳಲ್ಲಿ ನಿಗದಿಯಾದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಕುಡಿಯುವ ಉದ್ದೇಶಕ್ಕೆ ಪೂರೈಕೆಯಾಗುತ್ತಿದ್ದು, ನೀರಾವರಿ ಸಂಕಷ್ಟ ಹೆಚ್ಚಿಸುವಂತೆ ಮಾಡಿದೆ ಎಂದರು.

ಆಲಮಟ್ಟಿಯಿಂದ ಬೆಂಗಳೂರಿಗೆ ನೀರು?: ಕಾವೇರಿ ನದಿಯ ಕೆಆರ್‌ಎಸ್‌ ಜಲಾಶಯದಲ್ಲಿ ಸುಮಾರು 48 ಟಿಎಂಸಿ ಎಫ್ಟಿ ನೀರು ಲಭ್ಯತೆ ಇದೆ. ಇದರಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ಸುಮಾರು 60 ನಗರ-ಪಟ್ಟಣಗಳು, 640 ಗ್ರಾಮಗಳಿಗೆ ಕುಡಿಯುವ ನೀರು ನೀಡಬೇಕಿದೆ. ಬೆಂಗಳೂರಿಗೆ 8 ಟಿಎಂಸಿ ಎಫ್ಟಿ ನಿಗದಿಪಡಿಸಲಾಗಿತ್ತು. ಆದರೆ, ವಾಸ್ತವಿಕವಾಗಿ ಕೆಆರ್‌ಎಸ್‌ನಿಂದ ಪೂರೈಕೆಯಾಗುತ್ತಿರುವುದು ಸುಮಾರು 18 ಟಿಎಂಸಿಎಫ್ಟಿ ನೀರಾಗಿದೆ. 

ಕಾವೇರಿ ಕೊಳದಲ್ಲಿ ನೀರಿನ ಲಭ್ಯತೆ ಕುಗ್ಗುತ್ತಿರುವುದು, ಬೆಂಗಳೂರು ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇನ್ನು ಕೆಲವೇ ವರ್ಷಗಳಲ್ಲಿ ತಲೆ ಎತ್ತುವ ಸಾಧ್ಯತೆ ಇಲ್ಲದಿಲ್ಲ ಎಂದರು. ಕೃವಿವಿ ಕುಲಪತಿ ಡಾ| ಡಿ.ಪಿ.ಬಿರಾದಾರ, ಸಿಡಬ್ಲ್ಯುಸಿಯ ಮುಖ್ಯ ಇಂಜನಿಯರ್‌ ಆರ್‌.ಕೆ.ಜೈನ್‌ ಇನ್ನಿತರರು ಇದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.