![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 16, 2017, 3:45 AM IST
ಶಿವಮೊಗ್ಗ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದು, ಈ ಸಂಬಂಧ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಸೊರಬದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದ ಕುಮಾರ್ ಬಂಗಾರಪ್ಪ, ಪಕ್ಷಾಂತರದ ಮಾತುಗಳನ್ನು ಆಡಿದ್ದಾರೆ. ಮುಂದಿನ ಚುನಾವಣೆಯ ಹೊತ್ತಿಗೆ ತಾವು ಪಕ್ಷ ಬದಲಿಸುವುದು ಅನಿವಾರ್ಯ ಮತ್ತು ಸದ್ಯ ಬಿಜೆಪಿಯೊಂದೇ ತಮಗಿರುವ ಪರ್ಯಾಯ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅವರ ಬೆಂಬಲಿಗರು ಕೂಡ ಬಿಜೆಪಿಯನ್ನು ಸೇರಬೇಕು ಎಂದು ಒತ್ತಾಯಿಸಿದರು. ಈ ಹಿಂದೆಯೂ ಮೋದಿ ಅವರ ಕೆಲ ಯೋಜನೆಗಳ ಬಗ್ಗೆ ಬಹಿರಂಗವಾಗಿಯೇ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇತ್ತ ರಾಜ್ಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜೊತೆ ಕೂಡ ಬೇರೆಯವರ ಮೂಲಕ ಮಾತುಕತೆ ಆರಂಭಿಸಿದ್ದಾರೆ. ಬಿಜೆಪಿಯಿಂದ ಹಸಿರು ನಿಶಾನೆ ದೊರಕಿದ ಬಳಿಕವಷ್ಟೇ ಕುಮಾರ್ ಸೊರಬದಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ತಮ್ಮ ಬೆಂಬಲಿಗರ ನಾಡಿ ಮಿಡಿತ ಅರಿಯುವ ಉದ್ದೇಶದಿಂದಲೇ ಬುಧವಾರ ಸಭೆ ನಡೆಸಿದ್ದಾರೆ. ಬೆಂಬಲಿಗರು ಸಹಮತ ವ್ಯಕ್ತಪಡಿಸಿದ್ದರಿಂದ ಕುಮಾರ್ ಬಂಗಾರಪ್ಪ ಕಮಲ ಪಾಳಯದತ್ತ ಹೆಜ್ಜೆ ಇಡುವುದು ಬಹುತೇಕ ಖಚಿತ ಎನ್ನಲಾಗಿದೆ. ಎಸ್.ಎಂ.ಕೃಷ್ಣ ಅವರ ಖಾಸಾ ಬೆಂಬಲಿಗರಾದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಡೆಯಿಂದ ಬೇಸತ್ತು ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.