ಮೈ-ಚಾ.ನಗರ ಜಿಲ್ಲೆ ಕೆರೆಗಳಿಗೆ ನೀರು ತುಂಬಿಸಿ
Team Udayavani, Feb 16, 2017, 12:45 PM IST
ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬುಧವಾರ ಪ್ರತಿಭಟನೆ ನಡೆಸಿದರು.
ನಗರ ರೈಲು ನಿಲ್ದಾಣದ ಎದುರು ಖಾಲಿ ಹಂಡೆಗಳನ್ನು ಪ್ರದರ್ಶಿಸಿದ ವಾಟಾಳ್ ನಾಗರಾಜ್, ಮಳೆ ಅಭಾವದಿಂದ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಚಾಮರಾಜನಗರದಲ್ಲಿ ಬರಗಾಲದಿಂದಾಗಿ ಜನರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಚಾಮರಾಜನಗರದ ಕೊತ್ತಲವಾಡಿ, ಸುವರ್ಣಕೆರೆ ಸೇರಿದಂತೆ ಇತರೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
ಚಾಮರಾಜನಗರ ಜಿಲ್ಲಾಧಿಕಾರಿಗಳು ಒಂದು ತಿಂಗಳ ಒಳಗೆ ಚಾಮರಾಜನಗರದಲ್ಲಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮಾಡಬೇಕು. ಇಲ್ಲವಾದರೆ ಮಾರ್ಚ್ 15ರಂದು ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು.
ಮಹಾದಾಯಿ- ಕಳಸಾ- ಬಂಡೂರಿ ವಿಚಾರವಾಗಿ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು. ಗೋವಾ- ಮಹಾರಾಷ್ಟ್ರ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಪರಿಹರಿಸಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕನ್ನಡ ಚಳವಳಿ ಹೋರಾಟಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಬಸವರಾಜು, ಕಾರ್ ನಾಗೇಶ್, ನಾರಾಯಣಸ್ವಾಮಿ, ದೂರ ಸುರೇಶ್, ಅನಿಲ್ ಕುಪ್ಪೇಗಾಲ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.