ಸಿದ್ದರಾಮಯ್ಯರಿಂದ ಅರಸು ಕನಸು ನನಸು
Team Udayavani, Feb 17, 2017, 1:16 PM IST
ಜಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕನಸನ್ನು ಸಿಎಂ ಸಿದ್ದರಾಮಯ್ಯ ಅವರು ನನಸು ಮಾಡಿದ್ದಾರೆ ಎಂದು ಡಿ.ದೇವರಾಜ್ ಅರಸ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ. ಹುಚ್ಚಪ್ಪ ತಿಳಿಸಿದರು. ತಾಲೂಕಿನ ಕ್ಯಾಸೇನಹಳ್ಳಿ ಗ್ರಾಮದಲ್ಲಿ ತಾಲೂಕು ಕುರುಬ ಸಂಘದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ದೀನ ದಲಿತರಿಗೆ ಹಿಂದುಳಿದ ವರ್ಗದ ಎಲ್ಲಾ ಜನರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಿಂದುಳಿದ ವರ್ಗಗಳ ಪ್ರತಿಭಾವಂತರಿಗೆ ವಿದೇಶದಲ್ಲಿ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುತ್ತಿದ್ದು, ಕಾರ್ಯಕ್ರಮದ ಪ್ರಯೋಜನವನ್ನು ಪ್ರತಿಭಾವಂತ ವಿದ್ಯಾರ್ಥಿಗಳ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಅಸಗೋಡು ಜಯಸಿಂಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ರೂಪಿಸಿ ಜನಸಾಮಾನ್ಯರ ಬದುಕಿಗೆ ಆಸರೆಯಾದ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ನಾವೆಲ್ಲರೂ ಶಕ್ತಿ ತುಂಬಬೇಕಿದೆ. ಕಳೆದ ನಾಲ್ಕು ವರ್ಷದ ಅವಧಿಧಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದ ಜನತೆ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲ ಸೌಲಭ್ಯಗಳನ್ನು ಒದಗಿಸಿರುವುದು ಅವರ ಅಭಿವೃದ್ಧಿಯ ಚಿಂತನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಆ ಪಕ್ಷದಲ್ಲಿನ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನ ಮಾನ ನೀಡಿದೆ. ಕ್ಷೇತ್ರದಲ್ಲಿ ಕುಡಿಯುವ ನೀರು, ಚರಂಡಿ, ರಸ್ತೆಯಂತಹ ಮೂಲ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ರಂಗಾಪುರ ಮಾರ್ಗವಾಗಿ ಕ್ಯಾಸೇನಹಳ್ಳಿವರೆಗೆ ರಸ್ತೆ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ.
ತುರ್ತಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಎಪಿಎಂಸಿ ಅಧ್ಯಕ್ಷ ಯು.ಜಿ.ಶಿವಕುಮಾರ್, ಮಾಜಿ ಅಧ್ಯಕ್ಷ ಎಲ್.ಬಿ.ಭೈರೇಶ್, ಮುಖಂಡರಾದ ಗಿರೀಶ್‌ಒಡೆಯರ್, ನಿಜಲಿಂಗಪ್ಪ, ತಿಮ್ಮಾರೆಡ್ಡಿ, ಜಿಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಕೇಶವಮೂರ್ತಿ, ದೇವರಾಜ್, ಪರುಶುರಾಮ್, ರೇವಣ್ಣಸಿದ್ದಪ್ಪ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
The Rise Of Ashoka: ಅಶೋಕನ ರಕ್ತಚರಿತೆ
Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ
Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.