ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಮಾತ್ರ ಸರ್ಕಾರಿ ಕೆಲಸ ನೀಡಿ

Team Udayavani, Feb 17, 2017, 2:21 PM IST

hub3.jpg

ಹುಬ್ಬಳ್ಳಿ: ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳಿಗೆ ಮಾತ್ರ ಸರ್ಕಾರಿ ಉದ್ಯೋಗ ನೀಡಲಾಗುವುದೆಂಬ ಕಾಯ್ದೆ ಮಾಡಿದರೆ ಮಾತ್ರ ಕನ್ನಡ ಮಾಧ್ಯಮ ಶಾಲೆಗಳು ಉಳಿಯಲು ಸಾಧ್ಯ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. 

ಸದ್ಗುರು ಸಿದ್ಧಾರೂಢ ಪ್ರೌಢಶಾಲೆ ಹಾಗೂ ಗುರುದೇವ ವಿದ್ಯಾ ಸಮಿತಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸರ್ಕಾರ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಅವಶ್ಯಕತೆಯಿಲ್ಲ.

ಸರ್ಕಾರಿ ಉದ್ಯೋಗವನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತವರಿಗೆ ಮಾತ್ರ ನೀಡುವಂತಾದರೆ ಸಿರಿವಂತರು ಹಾಗೂ ಬಡವರ ಮಕ್ಕಳು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿಯುತ್ತಾರೆ ಎಂದರು. ಪಾಲಕರು ಮಕ್ಕಳ ಮೇಲೆ ಬಂಡವಾಳ ಹೂಡುತ್ತಿದ್ದಾರೆ. ಅವರು ಮುಂದೆ ಪದವಿ ಪಡೆದು ಹಣ ಗಳಿಸಬಹುದೆಂಬ ಮಹದಾಸೆ ಪಾಲಕರದಾಗಿದೆ.

ಆದರೆ ಸಂಸ್ಕಾರ ನೀಡದೇ ಕೇವಲ ಶಿಕ್ಷಣ ನೀಡಿದರೆ ಮುಂದೆ ಮಕ್ಕಳು ಪಾಲಕರನ್ನು ವೃದ್ಧಾಶ್ರಮಕ್ಕೆ ಸೇರಿಸಿ ಪಾಲಕರು ಹೂಡಿದ ಬಂಡವಾಳವನ್ನು ಹಿಂದಿರುಗಿಸುತ್ತಾರೆ  ಎಂದು ತಿಳಿಸಿದರು. ವಿಜ್ಞಾನ ಮಂದಿರ ಉದ್ಘಾಟಿಸಿದ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಕ್ಕಳಿಗೆ ಅಂಕಗಳ ಆಧಾರಿತ ಶಿಕ್ಷಣ ನೀಡದೇ ನೀತಿ ಪಾಠ ಹೇಳಿಕೊಡಲು ಆದ್ಯತೆ ನೀಡಬೇಕು.

ಹೆಚ್ಚಿನ ಕಾನ್ವೆಂಟ್‌ ಶಾಲೆಗಳಲ್ಲಿ ಅಂಕಗಳಿಗೆ  ಪ್ರಾಧಾನ್ಯತೆ ನೀಡಲಾಗುತ್ತದೆಯೇ ಹೊರತು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ತಿಳಿಸಿದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ದೀನ ದಲಿತ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಾಲೆಯ  ಕಾರ್ಯ ಶ್ಲಾಘನೀಯ. ಶಾಲೆ ಆವರಣದಲ್ಲಿ ಪೇವರ್ ಜೋಡಿಸಲು ಹಾಗೂ ಸಭಾಭವನ ನಿರ್ಮಿಸಲು ಅಗತ್ಯ ಅನುದಾನ  ನೀಡುವುದಾಗಿ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸತ್ಕರಿಸಲಾಯಿತು. 7ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು.  ಎಲ್‌. ಎಂ. ಅಯ್ಯನಗೌಡರ ವರದಿ ವಾಚಿಸಿದರು. ಪಾಲಿಕೆ ಸದಸ್ಯ ದಶರಥ ವಾಲಿ, ಶಿವಾಜಿ ಮಧೂರಕರ, ಜಿಪಂ ಸದಸ್ಯ ಉಮೇಶ ಹೆಬಸೂರ ಇದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.