ರೈತನ ಸಾವಿಗೆ ಕಾರಣವಾದ ಐರಾವತ ಕೊನೆಗೂ ಸೆರೆ

Team Udayavani, Feb 18, 2017, 12:04 PM IST

17-Nela-ph-4-copy.jpg

ನೆಲಮಂಗಲ: ಸೋಂಪುರ ಹೋಬಳಿಯ ಕಮಾಲಾಪುರ ಗ್ರಾಮದ ರಾಮಯ್ಯ ಎಂಬ ರೈತನನ್ನು ಬಲಿ ಪಡೆದಿದ್ದ ಸಲಗವನ್ನು  ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಬನ್ನೇರುಘಟ್ಟ ಅರಣ್ಯಕ್ಕೆ ಸಾಗಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕಾಟ ನೀಡುತ್ತಿದ್ದ ಒಟ್ಟು ನಾಲ್ಕು ಆನೆಗಳನ್ನು ಸೆರೆ ಹಿಡಿದಂತಾಗಿದೆ. 

ಬಂಧನಕ್ಕೊಳಗಾಗಿರುವ ಐರಾವತ ಸೋಂಪುರ ಹೋಬಳಿಯಲ್ಲಿ ಇಬ್ಬರನ್ನು ಮತ್ತು ಗುಬ್ಬಿ ತಾಲೂಕಿನಲ್ಲಿ ಒಬ್ಬರನ್ನು ಸಾಯಿಸಿತ್ತು. ಮೂರು ಮಂದಿ ರೈತರನ್ನು ಬಲಿ ಪಡೆದ ಐರಾವತ ಈಗ ಬಂಧನದಲ್ಲಿದ್ದು ಮಾವುತರಿಂದ ತರಬೇತಿಗೆ ಸಿದ್ಧವಾಗುತ್ತಿದೆ.

ಕಳೆದ ಏಳೆಂಟು ತಿಂಗಳಿಂದಲೂ ಆರು ಕಾಡಾನೆ­ಗಳ ಕಾಟದಿಂದ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿ ಮತ್ತು ತುಮಕೂರು ಹಾಗೂ ಮಾಗಡಿ ತಾಲೂಕಿನಲ್ಲಿ ಭಾರಿ ಅನಾಹುತ ಮತ್ತು ಪ್ರಾಣಹಾನಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಸೆರೆ ಹಿಡಿಯಲು ಐದು ಸಾಕಾನೆಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಸೋಂಪುರ ಹೋಬಳಿಯ ಹೊಸಹಳ್ಳಿ ಕೆರೆಯ ಬಳಿ ಕಾರ್ಯಾಚರಣೆ ನಡೆಸುವ ಮೂಲಕ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯ­ಲಾಗಿದೆ.

ಈಗ  ಬಂಧಿಸಿರುವ ಸಲಗವನ್ನು ಬನ್ನೇ­ರು­ಘಟ್ಟದ ಅರಣ್ಯಕ್ಕೆ ಸಾಗಿಸಿ ಪಳಗಿಸಲಾಗುವುದು. ನಂತರ ಇದೇ ಆನೆಯಿಂದ ಕಾಡಾನೆಗಳ ಸೆರೆಹಿಡಿಲು ಕಾರ್ಯಾಚರಣೆಗೆ ಬಳಸಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಶಿವಣ್ಣ ಉದಯವಾಣಿಗೆ ತಿಳಿಸಿದ್ದಾರೆ. ಅಭಿಮನ್ಯು, ಗಜೇಂದ್ರ, ಭೀಮ, ಹರ್ಷ ಮತ್ತು ದ್ರೋಣ ಎಂಬ ಸಾಕಾನೆಗಳು ಐರಾವತನನ್ನು ಓಡಿಸಿಕೊಂಡು ಬರುತ್ತಿದ್ದಂತೆ ಅರವಳಿಕೆ ತಜ್ಞ ಉಮಾಶಂಕರ್‌ ಅವರು ಅರವಳಿಕೆ ಚುಚ್ಚುಮದ್ದು ನೀಡಿದರು.

ಬಳಿಕ ಅರ್ಧ ಕಿ.ಮೀ. ದೂರದಲ್ಲಿ ಐರಾವತ ನೆಲಕ್ಕೆ ಬಿದ್ದಿತ್ತು. ನಾಗರಹೊಳೆ ಅಭಯಾರಣ್ಯದಿಂದ ಕಾವಾಡಿಗ ಕರೀಂಸಾಬ್‌ ನೇತೃತ್ವದ ತಂಡದೊಂದಿದೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾರ್ಯಾಚರಣೆಯನ್ನು ಶಿವಣ್ಣ ವಿವರಿಸಿದರು. ಸೋಂಪುರ ಹೋಬಳಿಯಲ್ಲಿ ಸುಮಾರು ಹತ್ತು ವರ್ಷಗಳಿಂದ ಕಾಡಾನೆಗಳು ಕಾಮಾಲಾಪುರ, ಶ್ರೀಪತಿಹಳ್ಳಿ, ದೇವಗಾನಹಳ್ಳಿ, ಬರಗೇನಹಳ್ಳಿ, ಗೌರಾಪುರ, ಕಂಬಾಳು ಗ್ರಾಮಗಳಲ್ಲಿ ಬೆಳೆ ನಾಶ ಮಾಡಿ ರೈತರಿಗೆ ನಷ್ಟ ಉಂಟುಮಾಡಿದ್ದವು.

ಈಗ ಒಂದು ಆನೆಯನ್ನು ಹಿಡಿದಿದ್ದರಿಂದ ರೈತರು ಸ್ವಲ್ಪ ಸಮಾಧಾನ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಡಿ.ಎಫ್.ಮಹೇಶ್‌­­ಕುಮಾರ್‌, ತುಮಕೂರು ಅರಣ್ಯಾ­ಧಿಕಾರಿ ದೇವರಾ­ಜಯ್ಯ, ನೆಲಮಂಗಲ ಅರಣ್ಯಾಧಿಕಾರಿ ಸಿದ್ದರಾಜು, ಹರೀಶ್‌, ಶಿವಣ್ಣ, ಸೇರಿ ಸುಮಾರು 60ಕ್ಕೂ  ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ಡಾಬಸ್‌ ಪೇಟೆ ಪಿಎಸ್‌ಐ ನವೀನ್‌ಕುಮಾರ್‌ ಕಾರ್ಯಾಚರಣೆಯಲ್ಲಿದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.